Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ಯಾರಂಟಿ ಕೊಡಕ್ಕಾಗ್ತಿಲ್ಲ – ರಾಜ್ಯ ಸರ್ಕಾರದ ಖಜಾನೆ ಸಂಪೂರ್ಣ ಖಾಲಿ: ಎನ್.ರವಿಕುಮಾರ್ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗ್ಯಾರಂಟಿ ಕೊಡಕ್ಕಾಗ್ತಿಲ್ಲ – ರಾಜ್ಯ ಸರ್ಕಾರದ ಖಜಾನೆ ಸಂಪೂರ್ಣ ಖಾಲಿ: ಎನ್.ರವಿಕುಮಾರ್ ಆರೋಪ

Bengaluru City

ಗ್ಯಾರಂಟಿ ಕೊಡಕ್ಕಾಗ್ತಿಲ್ಲ – ರಾಜ್ಯ ಸರ್ಕಾರದ ಖಜಾನೆ ಸಂಪೂರ್ಣ ಖಾಲಿ: ಎನ್.ರವಿಕುಮಾರ್ ಆರೋಪ

Public TV
Last updated: February 17, 2025 11:20 pm
Public TV
Share
2 Min Read
N. Ravikumar
SHARE

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಖಜಾನೆ ಸಂಪೂರ್ಣವಾಗಿ ಖಾಲಿಯಾಗಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆರೋಪಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ಹಾಲಿನ ದರವನ್ನು ಪ್ರತಿ ಲೀಟರಿಗೆ 5 ರೂ. ಹೆಚ್ಚಿಸುವುದಾಗಿ ಸರಕಾರ ಹೇಳುತ್ತಿದೆ. ಯಾವಾಗ ಮಾಡುತ್ತಾರೋ ಗೊತ್ತಿಲ್ಲ; ಕೇಂದ್ರದಿಂದ 5 ಕೆಜಿ ಅಕ್ಕಿ ಸಿಗುತ್ತಿದೆ. ಆದರೆ, ರಾಜ್ಯ ಸರಕಾರದ 5 ಕೆಜಿ ಪಡಿತರ ಅಕ್ಕಿ ಸಂಬಂಧ ಫಲಾನುಭವಿಯ ಖಾತೆಗೆ ಹಣ ವರ್ಗಾಯಿಸಿಲ್ಲ ಎಂದು ಮಾಹಿತಿ ಇರುವುದಾಗಿ ತಿಳಿಸಿದರು.

People Says They Havent Received Anna Bhagya and Gruhalakshmi Scheme Amount Karnataka Congress Guarantee Siddaramaiah

ಹೈಸ್ಕೂಲ್ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಅತಿಥಿ ಶಿಕ್ಷಕರಾಗಿ ದುಡಿಯುವವರಿಗೆ ಐದಾರು ತಿಂಗಳಿಂದ ವೇತನ ಕೊಡುತ್ತಿಲ್ಲ; ಮೆಟ್ರೋ ದರ ಹೆಚ್ಚಿಸಿದ್ದು, ಹಾಲು, ವಿದ್ಯುತ್ ದರ ಏರಿಸುತ್ತಿದ್ದಾರೆ. ಸಿದ್ದರಾಮಯ್ಯನವರ ಎರಡನೇ ಅವಧಿಯ ಆಡಳಿತ ಸಂಪೂರ್ಣವಾಗಿ ನೆಲಕಚ್ಚಿ ಹೋಗಿದೆ ಎಂದು ಟೀಕಿಸಿದರು. ಗ್ಯಾರಂಟಿ ಸರಿಯಾಗಿ ಅನುಷ್ಠಾನಗೊಳಿಸುತ್ತಿಲ್ಲ; ಈ ಸರಕಾರ ಸಂಪೂರ್ಣ ದಿವಾಳಿಯಾಗಿದೆ ಎಂದು ರವಿಕುಮಾರ್ ಆರೋಪಿಸಿದರು.

ವಿವಿ ಬಂದ್ ಮಾಡುವ ನಿರ್ಧಾರ ಮೂರ್ಖತನದ ಪರಮಾವಧಿ..
ಕಾಂಗ್ರೆಸ್ ಸರಕಾರವು ಹಿಂದುಳಿದ ಜಿಲ್ಲೆಗಳ ಹೊಸ ವಿಶ್ವವಿದ್ಯಾಲಯಗಳನ್ನು ಬಂದ್ ಮಾಡುತ್ತಿದೆ. ಕೊಪ್ಪಳ, ಹಾವೇರಿ, ಚಾಮರಾಜನಗರ, ಬೀದರ್- ಈ ಥರದ ಹಿಂದುಳಿದ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಬರೆ ಹಾಕುವ ಈ ಸರಕಾರದ ನಿರ್ಧಾರ ಮೂರ್ಖತನದ ಪರಮಾವಧಿ ಎಂದು ಎನ್.ರವಿಕುಮಾರ್ ಆಕ್ಷೇಪಿಸಿದರು.

Congress Guarantee

ಹಿಂದುಳಿದ ಜಿಲ್ಲೆಗಳಲ್ಲಿ ಉನ್ನತ ಶಿಕ್ಷಣದ ಪ್ರಮಾಣ ಹೆಚ್ಚಾಗಬೇಕೆಂಬ ಉದ್ದೇಶದಿಂದ ಹೊಸ ವಿಶ್ವವಿದ್ಯಾಲಯ ತೆರೆಯಲಾಗಿತ್ತು. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು ಎಂಬ ಗಾದೆಮಾತಿನಂತೆ ಸರಕಾರದ ಬಳಿ ವೇತನ ಕೊಡಲು ಹಣ ಇಲ್ಲ ಎಂದು ವಿದ್ಯಾರ್ಥಿಗಳಿಗೆ ಬರೆ ಹಾಕುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು. ಸರಕಾರ ತನ್ನ ನಿರ್ಧಾರವನ್ನು ಪರಿಶೀಲಿಸಬೇಕೆಂದು ಮನವಿ ಮಾಡಿದರು.

2016-17ರಲ್ಲಿ ಉನ್ನತ ಶಿಕ್ಷಣಕ್ಕೆ ಬಜೆಟ್‍ನ ಶೇ 6 ಹಣವನ್ನು ಕೊಡಲಾಗಿತ್ತು. ಈ ಸರಕಾರ ಕೇವಲ ಶೇ 1.76 ಹಣವನ್ನಷ್ಟೇ ಕೊಟ್ಟಿದೆ. ವಿವಿ, ಕಾಲೇಜುಗಳಿಗೆ ಹಣವನ್ನೇ ಕೊಡದೆ ಇದ್ದರೆ ಶಿಕ್ಷಣ ಸಂಸ್ಥೆಗಳು ನಡೆಯುವುದಾದರೂ ಹೇಗೆ ಎಂದು ಕೇಳಿದರು. ಬಿಜೆಪಿ ಇದ್ದಾಗ ತೆರೆದ ಯೂನಿವರ್ಸಿಟಿ ಎಂದು ರಾಜಕೀಯ ದ್ವೇಷದಿಂದ ಬಂದ್ ಮಾಡಿದರೆ, ಇದು ರಾಜ್ಯಕ್ಕೆ ಮಾಡುವ ಅಪಮಾನ ಎಂದು ರವಿಕುಮಾರ್ ತಿಳಿಸಿದರು.

ಕಾಂಗ್ರೆಸ್ ಸರಕಾರ ಇದೆಯೇ ಅಥವಾ ಸತ್ತುಹೋಗಿದೆಯೇ?
ಉದಯಗಿರಿ ಘಟನೆ ಕುರಿತು ಪ್ರಸ್ತಾಪಿಸಿದ ಅವರು, ನಿನ್ನೆ ಬಿ.ಕೆ.ಹರಿಪ್ರಸಾದ್ ಅವರು ಇದರೊಳಗೆ ಆರೆಸ್ಸೆಸ್ ಕಾರ್ಯಕರ್ತರ, ನಾಯಕರ, ಸ್ವಯಂಸೇವಕರ ಕೈವಾಡ ಇದೆ; ಬುರ್ಖಾ ಹಾಕಿ ಬಂದು ಆರೆಸ್ಸೆಸ್ಸಿನವರು ಗಲಾಟೆ ಮಾಡಿದ್ದಾರೆ; ಕಲ್ಲೆಸೆದಿದ್ದಾರೆ ಎಂದು ತಿಳಿಸಿದ್ದಾರೆ. ಈ ಥರ ಹೇಳುವ ಬಿ.ಕೆ.ಹರಿಪ್ರಸಾದ್ ಮತ್ತಿತರ ಕಾಂಗ್ರೆಸ್ ನಾಯಕರಿಗೆ ನಿಮ್ಮ ಸರಕಾರ ಇದೆಯೇ ಅಥವಾ ಸತ್ತು ಹೋಗಿದೆಯೇ ಎಂಬ ಪ್ರಶ್ನೆ ಕೇಳಲು ಬಯಸುವುದಾಗಿ ತಿಳಿಸಿದರು.

ಪೊಲೀಸರು ಇದ್ದಾರಾ ಇಲ್ಲವೇ? ಪೊಲೀಸರು ಏನು ಮಾಡುತ್ತಿದ್ದರು? ಚಳ್ಳೆ ಹಣ್ಣು ತಿನ್ನುತ್ತ ಇದ್ದರೇ ಎಂದು ಪ್ರಶ್ನೆಗಳನ್ನು ಮುಂದಿಟ್ಟರು. ಇದರಲ್ಲಿ ಆರೆಸ್ಸೆಸ್ ಭಾಗಿ ಎನ್ನಲು ಏನಾದರೂ ತನಿಖೆ ಮಾಡಿದ್ದೀರಾ? ತನಿಖಾ ವರದಿ ಇದೆಯೇ? ಎಂದು ಕೇಳಿದರು. ಆಧಾರರಹಿತ ಬುದ್ಧಿಗೇಡಿ ಹೇಳಿಕೆ ಕೊಡುವುದು ಸರಿಯಲ್ಲ ಎಂದು ಬಿ.ಕೆ.ಹರಿಪ್ರಸಾದ್ ಅವರಿಗೆ ತಿಳಿಸಲು ಬಯಸುವುದಾಗಿ ಹೇಳಿದರು.

ಕೆಲವು ಅಲ್ಪಸಂಖ್ಯಾತರು ಗೂಂಡಾಗಳಂತೆ ವರ್ತಿಸಲು ನಿಮ್ಮ ಸರಕಾರ ಕಾರಣ. ಶಿವಮೊಗ್ಗ ಮತ್ತಿತರ ಕಡೆ ತಪ್ಪು ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕ್ರಮ ಕೈಗೊಂಡಿದ್ದರೆ ಈ ಘಟನೆ ಸಂಭವಿಸುತ್ತಿರಲಿಲ್ಲ ಎಂದು ರವಿಕುಮಾರ್ ವಾಗ್ದಾಳಿ ನಡೆಸಿದರು.

TAGGED:bjpCongress GuaranteeN.Ravikumarsiddaramaiahಎನ್.ರವಿಕುಮಾರ್ಕಾಂಗ್ರೆಸ್‌ ಗ್ಯಾರಂಟಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Railway Committee
Bellary

ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲ್ವೆ ಮಾರ್ಗದ ಅನುಮೋದನೆಗೆ ಮನವಿ

Public TV
By Public TV
33 minutes ago
Jayalalithaas Hyderabad Bungalow
Latest

1.5 ಕೋಟಿ ರೂ. ಆಸ್ತಿ ತೆರಿಗೆ ಬಾಕಿ – ಹೈದರಾಬಾದ್‌ನಲ್ಲಿರೋ ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

Public TV
By Public TV
33 minutes ago
Vijayapura Bus Fire
Crime

ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್ಸಿಗೆ ಡಿಕ್ಕಿ ಹೊಡೆದು ಸೂಸೈಡ್ – ಬೈಕ್ ಸವಾರ ಸಜೀವ ದಹನ, ಹೊತ್ತಿಯುರಿದ KSRTC

Public TV
By Public TV
1 hour ago
ABVP Protest
Bengaluru City

ಮೂಲ ಸೌಕರ್ಯಗಳ ಕೊರತೆ, ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ – ಮಹಾರಾಣಿ ಕ್ಲಸ್ಟರ್ ವಿವಿ ವಿರುದ್ಧ ಪ್ರತಿಭಟನೆ

Public TV
By Public TV
1 hour ago
belthangady bus door
Dakshina Kannada

ಚಲಿಸುತ್ತಿದ್ದ ಬಸ್‌ನಿಂದ ಏಕಾಏಕಿ ಡೋರ್ ಓಪನ್ – ಕೆಳಗೆ ಬಿದ್ದ ವಿದ್ಯಾರ್ಥಿನಿಯರು

Public TV
By Public TV
1 hour ago
Garbage Auto
Bengaluru City

ನಾಳೆಯಿಂದ ಘನತ್ಯಾಜ್ಯ ನಿರ್ವಹಣೆಗೆ ಹೊಸ ನಿಯಮ ಜಾರಿ – ಉಲ್ಲಂಘಿಸಿದ್ರೆ GBAಯಿಂದ ದಂಡಾಸ್ತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?