ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್ ಆಗಿ 2 ನೇ ಬಾರಿಗೆ ಓಂ ಬಿರ್ಲಾ (Om Birla) ಆಯ್ಕೆಯಾಗಿದ್ದಾರೆ. ಧ್ವನಿ ಮತದ ಮೂಲಕ ಲೋಕಸಭೆ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಓಂ ಬಿರ್ಲಾ ಹೆಸರನ್ನು ಪ್ರಸ್ತಾಪಿಸಿದರು. ನಂತರ ಪ್ರಧಾನಿ ಮೋದಿ (Narendra Modi) ಮತ್ತು ರಾಹುಲ್ ಗಾಂಧಿ (Rahul Gandhi) ಅವರನ್ನು ಸ್ಪೀಕರ್ ಕುಳಿತುಕೊಳ್ಳುವ ಆಸನಕ್ಕೆ ಕರೆದೊಯ್ದರು. ಈ ವೇಳೆ ಮೋದಿಯವರು, ನೀವು ಎರಡನೇ ಬಾರಿಗೆ ಈ ಸ್ಥಾನವನ್ನು ಅಲಂಕರಿಸಿರುವುದು ಸದನದ ಸೌಭಾಗ್ಯ. ನಾನು ನಿಮ್ಮನ್ನು ಮತ್ತು ಇಡೀ ಸದನವನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.
Advertisement
Advertisement
ಪ್ರತಿಪಕ್ಷಗಳಿಗೆ ಉಪಸಭಾಪತಿ ಸ್ಥಾನ ನೀಡುವಂತೆ ಷರತ್ತು ಹಾಕಿದ್ದರು. ಈ ಬಗ್ಗೆ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ಒಮ್ಮತ ಮೂಡಿರಲಿಲ್ಲ. ಎನ್‌ಡಿಎಯಿಂದ ಓಂ ಬಿರ್ಲಾ ಮತ್ತು ವಿರೋಧ ಪಕ್ಷದಿಂದ ಕೆ. ಸುರೇಶ್ ಅಭ್ಯರ್ಥಿಯಾಗಿದ್ದರು. ಇದನ್ನೂ ಓದಿ: ಲೋಕಸಭೆಯ ಸ್ಪೀಕರ್ ಚುನಾವಣೆ – ಎನ್‌ಡಿಎ ಓಂ ಬಿರ್ಲಾ v/s ಇಂಡಿಯಾ ಒಕ್ಕೂಟದ ಸುರೇಶ್ ಮಧ್ಯೆ ಫೈಟ್
Advertisement
ಸ್ವಾತಂತ್ರ್ಯದ ನಂತರ, ಲೋಕಸಭೆಯ ಸ್ಪೀಕರ್ (Lok Sabha Speaker Election) ಮತ್ತು ಉಪಸಭಾಪತಿಯನ್ನು ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವಿನ ಒಮ್ಮತದ ಮೂಲಕ ಆಯ್ಕೆ ಮಾಡಲಾಗುತಿತ್ತು. ಆದರೆ ಈ ಬಾರಿ ಇಂಡಿಯಾ ಬಣ ಅಭ್ಯರ್ಥಿ ಘೋಷಣೆಯ ನಂತರ ಚುನಾವಣೆ ನಡೆದಿದೆ. ಈ ಹಿಂದೆ 1952 ಮತ್ತು 1976ರಲ್ಲಿ ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆದಿತ್ತು.