ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಮಾಜಿ ಉಪಾಧ್ಯಕ್ಷ, ಬಂಕಾಪುರದ ಸಂಸದ ಅರ್ಜುನ್ ಸಿಂಗ್ ಭಾನುವಾರ ಬಿಜೆಪಿ ತೊರೆದು, ಅಖಿಲ ಭಾರತ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಅರ್ಜುನ್ ಸಿಂಗ್ 2019ರಲ್ಲಿ ಲೋಕಸಭೆ ಚುನಾವಣೆಗೂ ಮುನ್ನ ಟಿಎಂಸಿ ತೊರೆದು, ಬಿಜೆಪಿ ಸೇರಿದ್ದರು. ಇದೀಗ 3 ವರ್ಷಗಳ ಬಳಿಕ ಮತ್ತೆ ಟಿಎಂಸಿ ಪಕ್ಷಕ್ಕೆ ಮರಳಿದ್ದಾರೆ. ಅವರು ಇಂದು ಮಧ್ಯಾಹ್ನ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದರು. ಇದನ್ನೂ ಓದಿ: ಕುತುಬ್ ಮಿನಾರ್ ವಿವಾದ – ಸದ್ಯಕ್ಕಿಲ್ಲ ಉತ್ಖನನ
Advertisement
Warmly welcoming former Vice President of @BJP4Bengal and MP from Barrackpore, Shri @ArjunsinghWB into the All India Trinamool Congress family.
He joins us today in the presence of our National General Secretary Shri @abhishekaitc. pic.twitter.com/UuOB9yp9Xo
— All India Trinamool Congress (@AITCofficial) May 22, 2022
Advertisement
ಟಿಎಂಸಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ತಿಳಿಸಿದ್ದು, ಪಶ್ಚಿಮ ಬಂಗಾಳ ಬಿಜೆಪಿಯ ಮಾಜಿ ಉಪಾಧ್ಯಕ್ಷ ಹಾಗೂ ಬಂಕಾಪುರದ ಸಂಸದ ಅರ್ಜುನ್ ಸಿಂಗ್ ಅವರನ್ನು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಆತ್ಮೀಯವಾಗಿ ಸ್ವಾಗತಿಸುತ್ತಿದೆ. ಅವರು ಇಂದು ನಮ್ಮ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿ ಸೇರಿದ್ದಾರೆ ಎಂದು ಬರೆಯಲಾಗಿದೆ. ಇದನ್ನೂ ಓದಿ: ಸಾವಿರ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಡೇಟಾ ಸಾಕ್ಷರತೆಗೆ ಐಒಎ ಆಸಕ್ತಿ: ಅಶ್ವಥ್ ನಾರಾಯಣ್
Advertisement
Advertisement
ಕಳೆದ ವರ್ಷ ಸಪ್ಟೆಂಬರ್‌ನಲ್ಲಿ ಬಾಬುಲ್ ಸುಪ್ರಿಯೋ ಬಿಜೆಪಿಯಿಂದ ಟಿಎಂಸಿಗೆ ಸೇರ್ಪಡೆಗೊಂಡಿದ್ದರು. ಇದೀಗ ಅರ್ಜುನ್ ಸಿಂಗ್ ಬಿಜೆಪಿ ತೊರೆದಿದ್ದು, ಪಶ್ಚಿಮ ಬಂಗಾಳದ ಬಿಜೆಪಿ ಸಂಸದರ ಸಂಖ್ಯೆ 18ರಿಂದ 16ಕ್ಕೆ ಇಳಿದಿದೆ.
ಅರ್ಜುನ್ ಸಿಂಗ್ ಇತ್ತೀಚೆಗೆ ಬಿಜೆಪಿ ಪಕ್ಷದಲ್ಲಿ ಹಿರಿಯ ಸ್ಥಾನವನ್ನು ಪಡೆದಿದ್ದರೂ ಸರಿಯಾಗಿ ಕೆಲಸ ಮಾಡಲು ಅವಕಾಶ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.