LatestLeading NewsMain PostNational

ಕಳಪೆ ಪ್ರದರ್ಶನದ ನಂತರವೂ ಗಾಂಧಿ ಕುಟುಂಬಕ್ಕೆ ಸೀಮಿತವಾಯ್ತು ಪಕ್ಷ: ಸುಶೀಲ್‌ ಮೋದಿ ವಾಗ್ದಾಳಿ

ನವದೆಹಲಿ: ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕಳಪೆ ಪ್ರದರ್ಶನ ಹಿನ್ನೆಲೆಯಲ್ಲಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಬಿಜೆಪಿ ಸಂಸದ ಸುಶೀಲ್‌ ಕುಮಾರ್‌ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಯುಪಿಯಲ್ಲಿ ಕಾಂಗ್ರೆಸ್‌ನ ಮುಖವಾಗಿದ್ದರು. ‘ನಾನು ಮಹಿಳೆ, ನಾನು ಹೋರಾಡಬಲ್ಲೆ’ ಎಂಬ ಘೋಷಣೆಯೊಂದಿಗೆ ಮಹಿಳೆಯರನ್ನು ದಾರಿತಪ್ಪಿಸಲು ಪ್ರಯತ್ನಿಸಿದರು. ಆದರೆ ಜನರು ಅವರಿಗೆ ಕೇವಲ 2 ಸ್ಥಾನಗಳನ್ನು ನೀಡಿದರು. ಇಷ್ಟೆಲ್ಲಾ ಆದರೂ ಕಾಂಗ್ರೆಸ್ಸಿನ ಯಾವೊಬ್ಬ ನಾಯಕರೂ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೇಳಲಿಲ್ಲ ಎಂದು ಸುಶೀಲ್‌ ಮೋದಿ ಟ್ವೀಟ್‌ ಮಾಡಿ ಕುಟುಕಿದ್ದಾರೆ. ಇದನ್ನೂ ಓದಿ: ಬಿಜೆಪಿ ಥೀಮ್ ಸಾಂಗ್‍ಗಳಿಗೆ ಡ್ಯಾನ್ಸ್ ಮಾಡ್ತಿದ್ದವರ ಮೇಲೆ ಎಸ್‍ಪಿ ಕಾರ್ಯಕರ್ತರಿಂದ ಹಲ್ಲೆ

ವಂಶಪಾರಂಪರ್ಯ ಆಡಳಿತ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿರುವ ಪಕ್ಷವು ಹಲವು ವರ್ಷಗಳಿಂದ ಆತ್ಮಾವಲೋಕನ ಮಾಡಿಕೊಂಡಂತೆ ನಟಿಸುತ್ತಿದೆ ಎಂದು ಟೀಕಿಸಿದ್ದಾರೆ.

ದೇಶದಲ್ಲಿ ರಾಜಕೀಯವಾಗಿ ಪ್ರಮುಖ ಸ್ಥಾನವನ್ನು ಪಡೆದಿರುವ ಉತ್ತರ ಪ್ರದೇಶದಲ್ಲಿ ಮಹಿಳಾ ಕೇಂದ್ರಿತವಾಗಿ ಕಾಂಗ್ರೆಸ್‌ ಪ್ರಚಾರ ನಡೆಸಿತ್ತು. ಆದರೆ ಆಡಳಿತದಲ್ಲಿ ರಾಜಪ್ರಭುತ್ವದ ಗುಣ ಮತ್ತು ಭ್ರಷ್ಟಾಚಾರಕ್ಕೆ ಆದ್ಯತೆ ನೀಡುತ್ತಲೇ ಬಂದಿದೆ ಎಂದು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸೋಲಿಗೆ ಗಾಂಧಿ ಕುಟುಂಬದವರಷ್ಟೇ ಹೊಣೆ ಅಲ್ಲ: ಮಲ್ಲಿಕಾರ್ಜುನ ಖರ್ಗೆ

ಐದು ರಾಜ್ಯಗಳಲ್ಲಿ ನಾಚಿಕೆಗೇಡಿನ ಪ್ರದರ್ಶನದ ನಂತರವೂ ಗಾಂಧಿ ಕುಟುಂಬಕ್ಕೆ ಸೀಮಿತವಾದ ಪಕ್ಷವನ್ನು ಮುಕ್ತಗೊಳಿಸಲು ಕಾಂಗ್ರೆಸ್ ನಾಯಕರಿಗೆ ಧೈರ್ಯವಿಲ್ಲ. ಮುಂದಿನ ಚುನಾವಣೆಯಲ್ಲಿ ರಾಜಸ್ಥಾನ ಮತ್ತು ಛತ್ತೀಸಗಡದಿಂದಲೂ ಪಕ್ಷ ನಿರ್ನಾಮವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲಿನ ಜವಾಬ್ದಾರಿ ಹೊತ್ತು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು. ಆದರೆ ಸಿಡಬ್ಲ್ಯೂಸಿ ಇವರ ರಾಜೀನಾಮೆ ಅಂಗೀಕರಿಸಲು ನಿರಾಕರಿಸಿತು. ಇದನ್ನೂ ಓದಿ: ಉತ್ತರಪ್ರದೇಶದಲ್ಲಿ BJP ಗೆಲುವಿಗೆ BSP ಕಾರಣ: ಅಶೋಕ್ ಗೆಹ್ಲೋಟ್

Leave a Reply

Your email address will not be published.

Back to top button