ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಹಾಗೂ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ (Sivasri Skandaprasad) ಆರತಕ್ಷತೆ ಸಂಭ್ರಮದಲ್ಲಿದ್ದಾರೆ. ನವ ದಂಪತಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಅನೇಕ ಗಣ್ಯರು ಶುಭಹಾರೈಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಸಂಸದ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಜೋಡಿಯ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದೆ. ಈ ಸಂಭ್ರಮದಲ್ಲಿ ಸಿಎಂ, ಡಿಸಿಎಂ, ಸಚಿವರು, ರಾಜಕೀಯ ಪಕ್ಷಗಳ ನಾಯಕರು, ಮುಖಂಡರು, ಆಪ್ತರು, ಬಂಧುಗಳು ಆಗಮಿಸಿ ಜೋಡಿಯನ್ನು ಆಶೀರ್ವದಿಸಿದ್ದಾರೆ. ಇದನ್ನೂ ಓದಿ: ಗಾಯಕಿ ಶಿವಶ್ರೀ ಜೊತೆ ಸಪ್ತಪದಿ ತುಳಿದ ಸಂಸದ ತೇಜಸ್ವಿ ಸೂರ್ಯ
Advertisement
Advertisement
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಸಚಿವ ಜಮೀರ್ ಅಹ್ಮದ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡು ನವದಂಪತಿಗೆ ವಿಶ್ ಮಾಡಿದರು.
Advertisement
Advertisement
ಮಾರ್ಚ್ 5 ಮತ್ತು 6 ರಂದು ತೇಜಸ್ವಿ ಸೂರ್ಯ ವಿವಾಹ ಸಮಾರಂಭ ಬೆಂಗಳೂರು ಕನಕಪುರ ರೆಸಾರ್ಟ್‌ನಲ್ಲಿ ನಡೆದಿತ್ತು. ಇದಕ್ಕೆ ಕುಟುಂಬ ಸದಸ್ಯರು, ಆಪ್ತ ವಲಯದ ಸ್ನೇಹಿತರು, ರಾಜಕೀಯ ಗಣ್ಯರು ಸಾಕ್ಷಿಯಾಗಿದ್ದರು. ಇದನ್ನೂ ಓದಿ: ತೇಜಸ್ವಿ ಸೂರ್ಯ ಮದುವೆ – ಎಲ್ಲಿ? ಯಾವಾಗ? ಇಲ್ಲಿದೆ ಸಂಪೂರ್ಣ ಡಿಟೇಲ್ಸ್