ಮೈಸೂರು: ಬಿಜೆಪಿ ಸಂಸದ, ದಲಿತ ನಾಯಕ ವಿ.ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ಬೌದ್ಧ ಧರ್ಮದ ವಿಧಿವಿಧಾನದಂತೆ ಮೈಸೂರಿನಲ್ಲಿ (Mysuru) ಇಂದು ನಡೆಯಲಿದೆ.
ನಗರದ ಅಶೋಕಪುರಂ ಡಾ. ಬಿ.ಆರ್.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕೂ ಮುನ್ನ ಅಶೋಕಪುರಂನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಗುವುದು. ಇದನ್ನೂ ಓದಿ: ಮರೆಯಾದ ನಿಷ್ಕಳಂಕ ರಾಜಕಾರಣಿ – ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ಶ್ರೀನಿವಾಸ್ ಪ್ರಸಾದ್ ಅಂತಿಮ ದರ್ಶನ
ಇಂದು ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಹಿತಕರ ಘಟನೆ ಜರುಗದಂತೆ ಪೊಲೀಸ್ ಇಲಾಖೆ ಮುಂಜಾಗ್ರತೆ ಕ್ರಮವಹಿಸಿದೆ.
ಬೆಂಗಳೂರಿನ ಮಹಾಬೋದಿಯ ಆನಂದ ಬಂತೇಜಿ, ಮೈಸೂರಿನ ವಿಶ್ವಮೈತ್ರಿ ಬುದ್ಧ ವಿಹಾರದ ಕಲ್ಯಾಣಸಿರಿ ಬಂತೇಜಿ ನೇತೃತ್ವದಲ್ಲಿ ವಿಧಿವಿಧಾನ ನಡೆಯಲಿದೆ. ಅಂತ್ಯಕ್ರಿಯೆ ವೇಳೆ ಸುಮಾರು 15ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳು ಪ್ರಾರ್ಥನೆ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ಶ್ರೀನಿವಾಸ್ ಪ್ರಸಾದ್ ವಿಧಿವಶ – ಪ್ರಭಾವಿ ದಲಿತ ನಾಯಕನ ರಾಜಕೀಯ ಏಳು-ಬೀಳಿನ ಹಾದಿ ಹೇಗಿತ್ತು?