ಬೀದರ್: ಬಿಜೆಪಿಯ ಸಂಸದರು ಹಾಗೂ ನಾಯಕರು ಕೇಂದ್ರದ ಗುಲಾಮರಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ.
Advertisement
ನಗರದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯದ ಮೇಲೆ ಪ್ರಹಾರ ಮಾಡುತ್ತಿದೆ. ಕರ್ನಾಟಕಕ್ಕೆ ಬಿಜೆಪಿಯವರು ಘೋರ ಅನ್ಯಾಯ ಮಾಡುತ್ತಿದ್ದಾರೆ. ಬಿಜೆಪಿ ಸಂಸದರು ಮತ್ತು ನಾಯಕರು ಲೋಕಸಭೆಯಲ್ಲಾಗಲಿ ಅಥವಾ ಪ್ರಧಾನಿ ಮುಂದೆಯಾಗಲಿ ರಾಜ್ಯದ ಹಕ್ಕು ಕೇಳುವ ಧೈರ್ಯ ಮಾಡದ ಅಂಜುಬುರುಕರಾಗಿದ್ದಾರೆ. ಪರಿಣಾಮವಾಗಿ ರಾಜ್ಯ ಬಳಲುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಟೀಲ್ ಅಸಂಬದ್ಧ ಹೇಳಿಕೆ ನೀಡ್ತಾನೆ: ಏಕವಚನದಲ್ಲಿ ಸತೀಶ್ ಜಾರಕಿಹೊಳಿ ವಾಗ್ದಾಳಿ
Advertisement
ಕೇಂದ್ರ ಸರ್ಕಾರ ಯಾವ ರೀತಿ ರಾಜ್ಯವನ್ನು ಕಡೆಗಣಿಸುತ್ತಿದೆಯೋ ಅದೇ ರೀತಿ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಕಡೆಗಣಿಸುತ್ತಿದೆ. ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ಸರ್ಕಾರ ಘೋರ ಅನ್ಯಾಯ ಮಾಡಿದೆ. ಕಲ್ಯಾಣ ಕರ್ನಾಟಕ ಮಂಡಳಿಯನ್ನೇ ಇನ್ನೂ ರಚಿಸಿಲ್ಲ. ಇದಕ್ಕೆ ಸಂಬಂಧಿಸಿದಂತೆ ಈವರೆಗೆ ಒಂದು ಸಭೆ ಕೂಡ ಮಾಡಿಲ್ಲ. ಪರಿಷತ್ ಚುನಾವಣೆಯಿಂದ ಬಿಜೆಪಿಗೆ ಒಂದು ಸಂದೇಶ ಹೋಗಬೇಕಾಗಿದೆ. ಜಿಲ್ಲೆಯ ಎಲ್ಲಾ ಕಡೆ ಕಾಂಗ್ರೆಸ್ ಅಲೆ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 140ಕ್ಕೂ ಹೆಚ್ಚು ಕ್ಷೇತ್ರ ಗೆದ್ದು ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು: BSY ಸಂಕಲ್ಪ
Advertisement
Advertisement
ಕಾಂಗ್ರೆಸ್ ಅಭ್ಯರ್ಥಿ ಭೀಮ್‌ರಾವ್ ಬಿ ಪಾಟೀಲ್ ಸಮರ್ಥ ಅಭ್ಯರ್ಥಿಯಾಗಿದ್ದು, ಹೆಚ್ಚಿನ ಮತಗಳಿಂದ ಗೆಲ್ಲುವ ವಿಶ್ವಾಸ ಇದೆ ಎಂದು ಪ್ರಚಾರ ಸಭೆಯಲ್ಲಿ ಈಶ್ವರ ಖಂಡ್ರೆ ಆಶಯ ವ್ಯಕ್ತಪಡಿಸಿದ್ದಾರೆ.