LatestLeading NewsMain PostNational

ಗುಜರಾತ್ ವಿಧಾನಸಭೆ ಚುನಾವಣೆ – 14 ಮಂದಿ ಮಹಿಳೆಯರು ಸೇರಿ 160 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟ

ಗಾಂಧೀನಗರ: ಗುಜರಾತ್ ವಿಧಾನಸಭೆ ಚುನಾವಣೆ (Gujarat Assembly polls) ಹಿನ್ನೆಲೆ ಬಿಜೆಪಿ (BJP) ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಮೊದಲ ಪಟ್ಟಿ 160 ಮಂದಿ ಅಭ್ಯರ್ಥಿಗಳನ್ನು ಒಳಗೊಂಡಿದ್ದು, ಈ ಪೈಕಿ 69 ಮಂದಿ ಹಾಲಿ ಶಾಸಕರಿದ್ದು, 13 ಪರಿಶಿಷ್ಟ ಜಾತಿ ಅಭ್ಯರ್ಥಿಗಳು, 24 ಪರಿಶಿಷ್ಟ ಪಂಗಡದ ಸಮುದಾಯ ಹಾಗೂ 14 ಮಂದಿ ಮಹಿಳೆಯರಿಗೆ ಅವಕಾಶ ನೀಡಲಾಗಿದೆ.

ಜಂಟಿ ಸುದ್ದಿಗೋಷ್ಠಿಯನ್ನು ನಡೆಸಿದ ಕೇಂದ್ರ ಸಚಿವರಾದ ಮನ್ಸುಖ್ ಮಾಂಡವಿಯಾ, ಭೂಪೇಂದರ್ ಯಾದವ್ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಸಿಆರ್ ಪಾಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದರು. ಇದನ್ನೂ ಓದಿ: ಜಡೇಜಾ ಪತ್ನಿಗೆ ಗುಜರಾತ್‍ನ ಜಾಮ್‌ನಗರ ಉತ್ತರದಿಂದ ಬಿಜೆಪಿ ಟಿಕೆಟ್

bhupendra patel gujarat chief minister

ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ (Bhupendra Patel) ಘಟ್ಲೋಡಿಯಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಗೃಹ ಸಚಿವ ಹರ್ಷ ಸಂಘವಿ ಮಜುರಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ (Congress) ತೊರೆದು ಬಿಜೆಪಿ ಸೇರಿದ್ದ ಹಾರ್ದಿಕ್ ಪಟೇಲ್ ವಿರಾಮಗಮ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಕ್ರಿಕೆಟಿಗ ರವೀಂದ್ರ ಜಡೇಜಾ (Ravindra Jadeja) ಅವರ ಪತ್ನಿ ರಿವಾಬಾ ಜಡೇಜಾ (Rivaba Jadega) ಅವರಿಗೆ ಟಿಕೆಟ್ ಸಿಕ್ಕಿದ್ದು, ಅವರು ಜಾಮ್‍ನಗರ ಉತ್ತರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

182 ಸ್ಥಾನಗಳ ಗುಜರಾತ್ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಈ ಹಿನ್ನಲೆ ನಿನ್ನೆ ಕೇಂದ್ರ ಚುನಾವಣಾ ಸಮಿತಿ ದೆಹಲಿಯಲ್ಲಿ ಸಭೆ ನಡೆಸಿತ್ತು. ಸಭೆಯ ಬಳಿಕ ಇಂದು ಒಂದೇ ಹಂತದಲ್ಲಿ 160 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಇದನ್ನೂ ಓದಿ: ಮೋರ್ಬಿ ಸೇತುವೆ ದುರಂತ – ನದಿಗೆ ಹಾರಿ ಜನರ ಪ್ರಾಣ ಉಳಿಸಿದ ಮಾಜಿ ಶಾಸಕನಿಗೆ ಬಿಜೆಪಿಯಿಂದ ಟಿಕೆಟ್

ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ (Vijay Rupani) ಮತ್ತು ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಇತರ ಮೂವರು ನಾಯಕರು ಹೊಸ ಮುಖಗಳಿಗೆ ದಾರಿ ಮಾಡಿಕೊಡಲು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದರು. ರೂಪಾನಿ ಆಗಸ್ಟ್ 2016 ರಿಂದ ಸೆಪ್ಟೆಂಬರ್ 2021 ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಪ್ರಸ್ತುತ ಅವರು ರಾಜ್ಕೋಟ್ ಪಶ್ಚಿಮದಿಂದ ಶಾಸಕರಾಗಿದ್ದಾರೆ.

ಎರಡೂ ಹಂತದ ಮತಗಳ ಎಣಿಕೆ ಡಿಸೆಂಬರ್ 08 ರಂದು ನಡೆಯಲಿದೆ. ಬಿಜೆಪಿಯು ಚುನಾವಣೆಯಲ್ಲಿ ಆರನೇ ಬಾರಿಗೆ ನೇರ ಅಧಿಕಾರವನ್ನು ಹಿಡಯುವ ವಿಶ್ವಾಸದಲ್ಲಿದೆ, AAP ಗುಜರಾತ್ ಚುನಾವಣೆಯಲ್ಲಿ ಪಾದಾರ್ಪಣೆ ಮಾಡಲು ಪ್ರಯತ್ನಿಸುತ್ತಿದೆ.

Live Tv

Leave a Reply

Your email address will not be published. Required fields are marked *

Back to top button