ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರವಾಸ ಕೈಗಳ್ಳಲಿದ್ದಾರೆ.
ಇಂದು ಬೆಳಗ್ಗೆ ಸುತ್ತೂರು ಮಠಕ್ಕೆ ಭೇಟಿ ನೀಡುವ ಮೂಲಕ ಪ್ರವಾಸ ಆರಂಭಿಸಲಿರುವ ಅಮಿತ್ ಶಾ, ಬಳಿಕ ಕಾಂಗ್ರೆಸ್ ಭದ್ರಕೋಟೆ ಚಾಮರಾಜನಗರ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅಮಿತ್ ಶಾ ಪ್ರಚಾರ ನಡೆಸಲಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲ್ಲ: ಅಮಿತ್ ಶಾ
Advertisement
Advertisement
ಸದ್ಯ ಜಿಲ್ಲೆಯ ನಾಲ್ಕೂ ಕ್ಷೇತ್ರಗಳು ಕಾಂಗ್ರೆಸ್ ತೆಕ್ಕೆಯಲ್ಲಿದ್ದು, ಈ ಬಾರಿ ನಾಲ್ಕು ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಬಿಜೆಪಿ ಸರ್ಕಸ್ ನಡೆಸ್ತಿದೆ. ಇಂದು ಚಾಮರಾಜನಗರಕ್ಕೆ ಭೇಟಿ ನೀಡಲಿರುವ ಅಮಿತ್ ಶಾ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮೂರು ದಿನಗಳ ಹಿಂದೆ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದ್ದ ವೇದಿಕೆಯಲ್ಲೇ ಬಿಜೆಪಿ ಸಮಾವೇಶ ನಡೆಸ್ತಿರೋದು ಮತ್ತೊಂದು ವಿಶೇಷವಾಗಿದೆ. ಈಗಾಗಲೇ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಎಲ್ಲಾ ಸಿದ್ಧತೆಗಳು ನಡೆದಿದ್ದು, ಮನೆ ಮನೆಗೆ ತೆರಳಿ ಸಮಾವೇಶಕ್ಕೆ ಜನರನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ:ಬಿಎಸ್‍ವೈ, ಈಶ್ವರಪ್ಪ ನಡುವಿನ ಶೀತಲ ಸಮರ ಅಂತ್ಯ- ಅಮಿತ್ ಶಾ ನೇತೃತ್ವದ ಸಂಧಾನ ಸಭೆ ಸಕ್ಸಸ್
Advertisement
Advertisement
ಅತ್ತ ಗುರುವಾರ ಬಂಡೀಪುರಕ್ಕೆ ಆಗಮಿಸಿ ರಿಲ್ಯಾಕ್ಸ್ ಮೂಡ್‍ನಲ್ಲಿದ್ದ ಸಿದ್ದರಾಮಯ್ಯ, ಸೆರಾಯಿ ರೆಸಾರ್ಟ್‍ನಲ್ಲಿ ತಂಗಿದ್ದಾರೆ. ಇಂದು ತಮ್ಮ ಆಪ್ತರೊಂದಿಗೆ ಮೈಸೂರಿನಲ್ಲಿ ಸಫಾರಿ ನಡೆಸಲಿದ್ದಾರೆ. ಬಳಿಕ ಚಾಮರಾಜನಗರದ ಬಂಡೀಪುರದಲ್ಲಿ ಚುನಾವಣೆ ಕುರಿತು ಮಹತ್ವದ ಸಭೆ ನಡೆಸಲಿದ್ದಾರೆ. ಈ ಸಭೆಗೆ ಸಿದ್ದರಾಮಯ್ಯ ಆಪ್ತರಿಗೆ ಮಾತ್ರವೇ ಅವಕಾಶ ನೀಡಲಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ:ಸಿದ್ದರಾಮಯ್ಯ ಸರ್ಕಾರದ ಟ್ರಾನ್ಸ್ ಫಾರ್ಮರ್ ಸುಟ್ಟುಹೋಗಿದೆ, ಅದನ್ನು ಬದಲಿಸುವ ಬದಲು ಕಿತ್ತು ಬಿಸಾಕಿ: ಅಮಿತ್ ಶಾ