LatestMain PostNational

ಇಂದಿನಿಂದ 3 ದಿನ ಜೈಪುರ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ

ನವದೆಹಲಿ: ಮುಂಬರುವ ವಿಧಾನಸಭೆ, ಲೋಕಸಭೆ ಚುನಾವಣೆಗೆ ಚಿಂತನ ಶಿಬಿರದ ಮೂಲಕ ತಯಾರಿ ಆರಂಭಿಸಿದ ಬೆನ್ನಲ್ಲೇ ಬಿಜೆಪಿಯೂ ತಯಾರಿ ಆರಂಭಿಸಿದ್ದು, ಇಂದಿನಿಂದ ಮೂರು ದಿನಗಳ ಕಾಲ ರಾಜಸ್ಥಾನದ ಜೈಪುರ್‍ನಲ್ಲಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಡೆಸಲಿದೆ.

ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನೇತೃತ್ವದಲ್ಲಿ ಹೈ ವೊಲ್ಟೇಜ್ ಮೀಟಿಂಗ್ ನಡೆಯಲಿದ್ದು, ಸಭೆಯಲ್ಲಿ ರಾಷ್ಟ್ರೀಯ ಪದಾಧಿಕಾರಿಗಳು, ರಾಜ್ಯ ಪ್ರಮುಖರು, ಮುಂಚೂಣಿ ಸಂಘಟನೆಗಳ ಮುಖ್ಯಸ್ಥರು, ಸಂಘಟನಾ ಕಾರ್ಯದರ್ಶಿಗಳು ಸೇರಿದಂತೆ 136 ಪದಾಧಿಕಾರಿಗಳು, ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಹಾಲಿ ಓಬಿಸಿ ನೀತಿಯಡಿ ಬಿಬಿಎಂಪಿ ಚುನಾವಣೆ ನಡೆಸಿ – ಸುಪ್ರೀಂ ಮರು ಆದೇಶ

ಸಭೆಯಲ್ಲಿ ಕರ್ನಾಟಕ, ಗುಜರಾತ್, ಹಿಮಾಚಲ ಪ್ರದೇಶ ಸೇರಿದಂತೆ ಲೋಕಸಭೆ ಚುನಾವಣೆಗಳ ಬಗ್ಗೆ ಚರ್ಚೆ ನಡೆಯಲಿದ್ದು ತಂತ್ರಗಾರಿಕೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದು, ಬೆಲೆ ಏರಿಕೆ, ಹಣದುಬ್ಬರದಂತಹ ವಿಷಯಗಳನ್ನು ಸಮರ್ಥಿಸಿಕೊಳ್ಳುವ ಬಗ್ಗೆ ಸಮಾಲೋಚನೆ ನಡೆಯಲಿದೆ.

nalin kumar kateel

ಈ ಸಭೆಯಲ್ಲಿ ರಾಜ್ಯದಿಂದ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ನಾರಾಯಣ ಸ್ವಾಮಿ, ಭಗವಂತ್ ಖೂಭಾ, ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಸೇರಿ ಹಲವು ನಾಯಕರು ಭಾಗಿಯಾಗಲಿದ್ದಾರೆ. ಮೇ 20 ರಂದು ಸಭೆ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ 122 ಕೇಸ್ – ಇಂದು ದಾಖಲಾಯಿತು ಏಕೈಕ ಮರಣ ಪ್ರಕರಣ

Leave a Reply

Your email address will not be published.

Back to top button