ಚಿಕ್ಕಬಳ್ಳಾಪುರ (ದೇವನಹಳ್ಳಿ): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ (Nitin Nabin) ಬೆಂಗಳೂರಿಗೆ ಆಗಮಿಸಿದ್ದಾರೆ.
ದೆಹಲಿಯಿಂದ 12:20ರ ಇಂಡಿಗೋ (IndiGo) ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಿತಿನ್ ನಬಿನ್ ಆಗಮಿಸಿದರು.

ಕುಟುಂಬ ಸಮೇತರಾಗಿ ಬೆಂಗಳೂರಿಗೆ (Bengaluru) ಆಗಮಿಸಿದ ನಿತಿನ್ ನಬಿನ್ ಅವರನ್ನ ದೇವನಹಳ್ಳಿ ಭಾಗದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.
ನಿತಿನ್ ನಬಿನ್ ಅವರು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿದ್ದಾರೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಉಪಸ್ಥಿತಿಯಲ್ಲಿ ಸ್ವಾಗತಿಸಲಾಯಿತು.
