ಮೈಸೂರು: ನನಗೂ ಮತ್ತು ನನ್ನ ಪುತ್ರನಿಗೂ ಟಿಕೆಟ್ ನೀಡುವುದಾಗಿ ಬಿಜೆಪಿ ಭರವಸೆ ನೀಡಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ. ಈ ನಡುವೆ ಬಿಜೆಪಿಯವರು ಕೂಡ ನಮ್ಮ ಜೊತೆ ಇರಿ ಎಂದು ಕೇಳುತ್ತಿದ್ದಾರೆ. ಅವರು ತಂದೆ, ಮಗ ಇಬ್ಬರಿಗೂ ಟಿಕೆಟ್ ಕೊಡುವ ಭರವಸೆ ನೀಡಿದ್ದಾರೆ. ನಾನು ಸದ್ಯಕ್ಕೆ ಯಾವ ನಿರ್ಧಾರ ಕೈಗೊಂಡಿಲ್ಲ. ಇನ್ನೂ 6 ತಿಂಗಳ ನಂತರ ಚಾಮುಂಡಿ ತಾಯಿಯ ನಿರ್ಣಯದಂತೆ ನಾನು ನಿರ್ಧಾರ ಕೈಗೊಳ್ಳುತ್ತೇನೆ. ಚಾಮುಂಡಿ ದೇವಿಯ ಅನುಗ್ರಹದಂತೆಯೇ ನನ್ನ ನಿರ್ಧಾರ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸಿ ಕಾಂಗ್ರೆಸ್ ಒಂದಾದ್ರೆ ದೇಶಕ್ಕೆ ಒಳ್ಳೆಯದು: ಹೆಚ್‍ಡಿಡಿ
Advertisement
Advertisement
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರಿಗೂ ನಾನು ಸ್ಪಷ್ಟವಾಗಿ ಹೇಳಿದ್ದೇನೆ. ನನ್ನ ಮಗನಿಗೆ ಟಿಕೆಟ್ ಕೊಡುವ ವಿಚಾರದಲ್ಲಿ ನಿರ್ಧಾರ ತಿಳಿಸಿ ನಂತರ ನನ್ನ ತೀರ್ಮಾನ ಹೇಳುತ್ತೇನೆ ಎಂದಿದ್ದೇನೆ. ಹುಣಸೂರು ಕ್ಷೇತ್ರ ಮೊದಲ ಆದ್ಯತೆ, ಕೆ.ಆರ್.ನಗರ ಎರಡನೇ ಆದ್ಯತೆ, ಚಾಮರಾಜ ಕ್ಷೇತ್ರ ಮೂರನೇ ಆದ್ಯತೆ. ಈ ಮೂರು ಕ್ಷೇತ್ರದಲ್ಲಿ ಯಾವುದಾದರೂ ಒಂದು ಕ್ಷೇತ್ರದಲ್ಲಿ ನನ್ನ ಮಗನಿಗೆ ಟಿಕೆಟ್ ನೀಡಲಿ. ನನ್ನ ಪುತ್ರ ಹರೀಶ್ ಗೌಡ ವಿಚಾರದಲ್ಲಿ ಕಾಂಗ್ರೆಸ್ ತನ್ನ ತೀರ್ಮಾನ ಹೇಳಿದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ.
Advertisement
ಜೆಡಿಎಸ್‌ನವರು ನನ್ನನ್ನು ಇದುವರೆಗೂ ಸಂಪರ್ಕಿಸಿಲ್ಲ. ಪಕ್ಷದ ಯಾವ ಸಭೆ, ಸಮಾರಂಭಕ್ಕೂ ಕರೆಯುತ್ತಿಲ್ಲ. ಸಿಎಂ ಸ್ಥಾನದಿಂದ ಹೆಚ್.ಡಿ.ಕುಮಾರಸ್ವಾಮಿ ಕೆಳಗೆ ಇಳಿದ ನಂತರದ ದಿನದಿಂದ ನನ್ನ ಜೊತೆ ಜೆಡಿಎಸ್‌ನವರು ಸಂಪರ್ಕದಲ್ಲಿ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಎಂ ಇಬ್ರಾಹಿಂನ ಉಗುರಿನ ಧೂಳನ್ನೂ ಬಿಜೆಪಿಗೆ ಸೇರಿಸಲ್ಲ: ಈಶ್ವರಪ್ಪ