ಬೆಂಗಳೂರು: ಗುಜರಾತ್ ಚುನಾವಣೆ ಗೆದ್ದ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಕರ್ನಾಟಕದಲ್ಲಿ ಮಿಷನ್ 150 ಸಾಧಿಸಲು ಹೊಸ ಕಾರ್ಯತಂತ್ರ ರೂಪಿಸಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಪಡೆಯಲು ಹೊಸ ಕಾರ್ಯತಂತ್ರ ರಚನೆ ಮಾಡಿದ್ದಾರೆ ಎನ್ನಲಾಗಿದ್ದು, ಹೊಸ ಕಾರ್ಯತಂತ್ರದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ವಹಿಸಿರುವ ಮುರಳೀಧರ್ ರಾವ್ ಬದಲಾವಣೆ ಮಾಡುವ ಸಾಧ್ಯತೆ ಇದೆ.
Advertisement
Advertisement
ಮುರಳೀಧರ್ ರಾವ್ ಅವರನ್ನು ಬದಲಾವಣೆ ಮಾಡಿ ಗುಜರಾತ್ ರಾಜ್ಯದ ಬಿಜೆಪಿ ಉಸ್ತುವಾರಿ ಕಾರ್ಯ ನಿರ್ವಹಿಸುತ್ತಿದ್ದ ಭೂಪೇಂದ್ರ ಯಾದವ್ ಅವರನ್ನು ನೇಮಿಸಲು ಅಮಿತ್‍ಶಾ ಮುಂದಾಗಿದ್ದಾರೆ ಎನ್ನಲಾಗಿದೆ.
Advertisement
ಈ ಹಿಂದೆ ಬಿಹಾರ ಚುನಾವಣೆಯಲ್ಲಿ ಬಿಜೆಪಿ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದ ಇವರು ಚುನಾವಣೆ ಚಾಣಕ್ಯ ಎಂದೇ ಬಿಜೆಪಿ ವಲಯದಲ್ಲಿ ಹೆಸರು ಪಡೆದಿದ್ದಾರೆ. ಪ್ರಸ್ತುತ ರಾಜ್ಯ ಸಭಾ ಸದಸ್ಯರಾಗಿರುವ ಭೂಪೇಂದ್ರ ಯಾದವ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.