– ಡಿಕೆಶಿ ಕನಸಿಗೆ ವಿಘ್ನ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಟ್ರಾಫಿಕ್ ಜಾಮ್‌ಗೆ (Traffic Jam) ಪರಿಹಾರ ಎಂದು ಹೆಬ್ಬಾಳದ ಎಸ್ಟೀಮ್ ಮಾಲ್‌ನಿಂದ ಸಿಲ್ಕ್ ಬೋರ್ಡ್‌ವರೆಗೆ ಸುರಂಗ ಮಾರ್ಗ ನಿರ್ಮಾಣಕ್ಕೆ ಡಿಸಿಎಂ ಡಿಕೆಶಿ ಪಟ್ಟು ಹಿಡಿದಿದ್ದಾರೆ. ಡಿಪಿಆರ್ ಕೂಡ ಸಿದ್ಧವಾಗಿದೆ. ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿ, ಟನಲ್ ಪ್ರಾಜೆಕ್ಟ್ (Tunnel Project) ರದ್ದು ಮಾಡುವಂತೆ ಅಭಿಯಾನ ಶುರುಮಾಡಿದೆ.
ಸಂಸದ ಪಿಸಿ ಮೋಹನ್ ಬಿಬಿಎಂಪಿ (BBMP) ಕಮೀಷನರ್‌ಗೆ ಪತ್ರ ಬರೆದು ಇದೊಂದು ಅವೈಜ್ಞಾನಿಕ ನಿರ್ಧಾರ. ಟನಲ್ ಬೇಡ, ಮೆಟ್ರೋ ಬೇಕು ಎಂದು ಹೇಳಿದ್ದಾರೆ. ಡಿಪಿಆರ್‌ನಲ್ಲಿ ಸಾಕಷ್ಟು ಲೋಪದೋಷ ಹೊಂದಿರುವ ಈ ಪ್ರಾಜೆಕ್ಟ್ ಬೆಂಗಳೂರಿಗೆ ಟ್ರಾಫಿಕ್ ಜಾಮ್ ಸಮಸ್ಯೆ ಬಗೆಹರಿಸಲ್ಲ ಎಂಬುದು ಸಂಸದರ ವಾದ. ಅಲ್ಲದೇ ಸಾವಿರಾರು ಕೋಟಿ ವ್ಯಯಿಸುವ ಬದಲು ಮೆಟ್ರೋ, ಬಿಎಂಟಿಸಿಯಂತಹ ಸಾರ್ವಜನಿಕ ಸಾರಿಗೆಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಯಾವ ಪವರ್ ಇಲ್ಲ, ಯಾವ ಶೇರಿಂಗ್ ಇಲ್ಲ.. 5 ವರ್ಷ ಕಾಂಗ್ರೆಸ್ ಸರ್ಕಾರ ಇರುತ್ತೆ: ಡಿಕೆಶಿ
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ತಜ್ಞರು ಟನಲ್‌ಗೆ ನೋ ಎಂದಿದ್ದಾರೆ. ಇದರ ಮಧ್ಯೆ ಈಗ ಬಿಜೆಪಿಯೂ ಟೀಕಿಸಿದೆ. ಆದರೆ ಸರ್ಕಾರ ಮಾತ್ರ ಈ ಯೋಜನೆ ಅನಿವಾರ್ಯ ಎನ್ನುತ್ತಿದೆ. ಇದನ್ನೂ ಓದಿ: ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ – ಮೂವರ ಬಾಳಿಗೆ ಬೆಳಕು