ಚಿಕ್ಕಬಳ್ಳಾಪುರ: ಬಿಜೆಪಿಯು (BJP) ಜನರಿಗೆ ಯಾವುದೇ ಟೊಳ್ಳು ಭರವಸೆಗಳನ್ನು ನೀಡಿಲ್ಲ. ಆದರೆ ಭರವಸೆಯಲ್ಲಿ ಇಲ್ಲದ ಹೊಸ ಯೋಜನೆಗಳನ್ನು ಕೂಡ ನೀಡಲಾಗಿದೆ. ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದಿಂದ ನಂದಿ ಮೆಡಿಕಲ್ ಕಾಲೇಜು (Nandi Medical College) ಸೇರಿದಂತೆ ಅನೇಕ ಅಭಿವೃದ್ಧಿಗಳು ನಡೆಯುತ್ತಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ (K. Sudhakar) ಹೇಳಿದರು.
ಚಿಕ್ಕಬಳ್ಳಾಪುರದ (Chikkaballapura) ಅರೂರು ಗ್ರಾಮದಲ್ಲಿ ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಭವ್ಯ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇರುವುದರಿಂದ ಹೆಚ್ಚು ಅನುದಾನ ಬಂದು ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಿದೆ. ಡಬಲ್ ಎಂಜಿನ್ ಸರ್ಕಾರದಿಂದ ರಾಜ್ಯಕ್ಕೆ ದೊಡ್ಡ ಅಭಿವೃದ್ಧಿಯ ಸ್ಪರ್ಶ ದೊರೆತಿದೆ. ರೈತರ ಮಕ್ಕಳು ಸೇರಿದಂತೆ 11 ಲಕ್ಷ ಮಕ್ಕಳಿಗೆ ಕಾಮನ್ ಮ್ಯಾನ್ ಸಿಎಂ ಬಸವರಾಜ ಬೊಮ್ಮಾಯಿಯವರು (Basavaraj Bommai) ವಿದ್ಯಾನಿಧಿ ನೀಡಿದ್ದಾರೆ ಎಂದರು. ಇದನ್ನೂ ಓದಿ: ಬಿಎಸ್‍ವೈ ಮನೆ ಮೇಲೆ ದಾಳಿ ರಾಜಕೀಯ ಪ್ರೇರಿತವೂ ಇರಬಹುದು: ಸಚಿವ ಜೋಶಿ
Advertisement
Advertisement
ಪ್ರಧಾನಿ ನರೇಂದ್ರ ಮೋದಿ (Narendra Modi) ಶೌಚಾಲಯದ ಬಗ್ಗೆ ಮಾತನಾಡಿದಾಗ ಏನು ಮಹಾ ಎಂದು ಹಲವರು ಟೀಕಿಸಿದ್ದರು. ಆದರೆ 11 ಕೋಟಿ ಶೌಚಾಲಯಗಳನ್ನು ನಿರ್ಮಿಸಿ ಮಹಿಳೆಯರ ಘನತೆ ಎತ್ತಿ ಹಿಡಿಯಲಾಗಿದೆ. ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕ ನೀಡಿ ಅವರ ಕಷ್ಟವನ್ನು ತಪ್ಪಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಗಾಂಧಿ ಕುಟುಂಬವನ್ನು ರಾಮನ ವಂಶಕ್ಕೆ ಹೋಲಿಸಿರುವುದು ಅಹಂಕಾರ : ಅನುರಾಗ್ ಠಾಕೂರ್
Advertisement
ನಂದಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಶೇ.60ರಷ್ಟು ಕೇಂದ್ರ, ಶೇ.40ರಷ್ಟು ಅನುದಾನವನ್ನು ರಾಜ್ಯ ಸರ್ಕಾರ ನೀಡಿದೆ. 57 ಎಕರೆ ಪ್ರದೇಶದಲ್ಲಿರುವ ಈ ಕಾಲೇಜಿನಲ್ಲಿ ಸುಸಜ್ಜಿತ ಅಕಾಡೆಮಿಕ್ ಬ್ಲಾಕ್, ಹಾಸ್ಟೆಲ್ ಮೊದಲಾದ ಸೌಲಭ್ಯಗಳಿವೆ. ಚಿಕ್ಕಬಳ್ಳಾಪುರದಲ್ಲಿ ಸತ್ಯ ಸಾಯಿ ಮೆಡಿಕಲ್ ಕಾಲೇಜು ಕೂಡ ಆರಂಭವಾಗಿದೆ. ಎರಡು ಮೆಡಿಕಲ್ ಕಾಲೇಜುಗಳಿರುವ ಈ ಜಿಲ್ಲೆಯ ಜನರು ಅದೃಷ್ಟವಂತರು. ಕೋವಿಡ್ ಸಮಯದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು (B.S.Yediyurappa) ಉತ್ತಮವಾಗಿ ಆಡಳಿತ ನೀಡಿದ್ದರು. ಹಾಗೆಯೇ ಈ ಕಾಲೇಜು ನಿರ್ಮಾಣಕ್ಕೆ ಎಲ್ಲಾ ಸಹಕಾರ ನೀಡಿದ್ದರು. ಅವರಿಗೆ ಧನ್ಯವಾದಗಳು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಜಾ: ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ
Advertisement
ಪ್ರತಿ ಕನ್ನಡಿಗರ ದೃಷ್ಟಿ ಸಮಸ್ಯೆ ಬಗೆಹರಿಸಲು ಉಚಿತ ಶಸ್ತ್ರಚಿಕಿತ್ಸೆ ಹಾಗೂ ಕನ್ನಡಕ ವಿತರಣೆ ಮಾಡುವ 360 ಕೋಟಿ ರೂ. ಮೊತ್ತದ ‘ದೃಷ್ಟಿ ಯೋಜನೆ’ ನೀಡಲಾಗಿದೆ. ಈ ಸರ್ಕಾರ ಪ್ರಜೆಗಳ ಸರ್ಕಾರ. ಯಾವುದೇ ಟೊಳ್ಳು ಭರವಸೆಗಳನ್ನು ಬಿಜೆಪಿ ನೀಡಿಲ್ಲ. ಭರವಸೆಯಲ್ಲಿ ಇಲ್ಲದ ಹೊಸ ಯೋಜನೆಗಳನ್ನು ಕೂಡ ನೀಡಲಾಗಿದೆ. ಹಿಂದೆ ನೀರಾವರಿ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿಯವರು ಎತ್ತಿನಹೊಳೆ ಯೋಜನೆ ರೂಪಿಸಿದ್ದು ಅನೇಕರಿಗೆ ಗೊತ್ತೇ ಇಲ್ಲ. ಈ ಭಾಗದ ಜನರಿಗೆ ಕುಡಿಯುವ ನೀರು ನೀಡಲು ಇಂತಹ ಮಹತ್ವದ ಯೋಜನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಹಿಂದಿನ ಸರ್ಕಾರಗಳು ಸದಾಶಿವ ಆಯೋಗದ ವರದಿ ಅನುಷ್ಠಾನ ಮಾಡಿಲ್ಲ ಯಾಕೆ – ಹಾಲಪ್ಪ ಆಚಾರ್ ಪ್ರಶ್ನೆ