ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಆಂದೋಲನ ಮಾಡಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದ್ದ ಆಮ್ ಆದ್ಮಿ ಪಕ್ಷದ (AAP) ಅರವಿಂದ ಕೇಜ್ರಿವಾಲ್ (Arvind Kejriwal ) ಅವರ ಮುಖವಾಡ ಚುನಾವಣಾ ಫಲಿತಾಂಶದಿಂದ ಕಳಚಿಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (B.Y Vijayendra) ಹೇಳಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪಕ್ಷದ ಪರ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಣೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ದೆಹಲಿಯಲ್ಲಿ 27 ವರ್ಷಗಳ ನಂತರ ಬಿಜೆಪಿಗೆ ಅಭೂತಪೂರ್ವ ಗೆಲುವು ಲಭಿಸಿದೆ. ಪ್ರಬುದ್ಧ ಮತದಾರರು ದೆಹಲಿ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ನರೇಂದ್ರ ಮೋದಿಯವರ ಕೈಯನ್ನು ಬಲಪಡಿಸಲು ಮತದಾರರು ಮತ್ತೊಮ್ಮೆ ನಮಗೆ ಆಶೀರ್ವಾದ ಮಾಡಿದ್ದಾರೆ. ಪಕ್ಷದ ಮುಖಂಡರು, ಕಾರ್ಯಕರ್ತರು, ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಹ್ಯಾಟ್ರಿಕ್ ಸಾಧನೆ ಮಾಡಿದೆ, ಡಿಕೆಶಿ ಗ್ಯಾರಂಟಿ ಠುಸ್ ಪಟಾಕಿ ಆಗಿದೆ: ವಿಜಯೇಂದ್ರ ವ್ಯಂಗ್ಯ
ಮನೀಷ್ ಸಿಸೋಡಿಯಾ ಅವರೂ ಸೋಲುತ್ತಿದ್ದಾರೆ. ಲಿಕ್ಕರ್, ಶೀಶ್ ಮಹಲ್ ಹಗರಣದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಆಪ್ ಬಣ್ಣ ಬಯಲಾಗಿದೆ. ಇನ್ನೂ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಸತತ 3ನೇ ಬಾರಿಗೆ ಶೂನ್ಯ ಸಂಪಾದನೆ ಮಾಡಿದೆ. ಲೋಕಸಭಾ ಚುನಾವಣೆಯಲ್ಲೂ ಅದು ಶೂನ್ಯ ಸಂಪಾದನೆ ಮಾಡಿತ್ತು. ಹರಿಯಾಣ, ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ಸಿಗೆ ಮುಖಭಂಗ ಆಗಿತ್ತು ಎಂದು ವ್ಯಂಗ್ಯವಾಡಿದ್ದಾರೆ.
ಗ್ಯಾರೆಂಟಿಗಳೆಲ್ಲ ತಾತ್ಕಾಲಿಕ, ಆ ತಾತ್ಕಾಲಿಕ ಗ್ಯಾರೆಂಟಿಗಿಂತ ದೃಢ ನಾಯಕತ್ವ ಕೊಡುವ ನರೇಂದ್ರ ಮೋದಿಜೀ ನೇತೃತ್ವದ ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂಬುದನ್ನು ದೆಹಲಿ ಮತದಾರರಿಂದ ಮತ್ತೊಮ್ಮೆ ರುಜುವಾತಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಮುಸ್ಲಿಮ್ ಬಾಹುಳ್ಯ ಇರೋ ಮುಸ್ತಫಾಬಾದ್‌ನಲ್ಲಿ ಬಿಜೆಪಿಗೆ ಗೆಲುವು