ಗದಗ: ಬಿಜೆಪಿ (BJP) ಅವರಿಗೆ ಇಲ್ಲಿಯವರೆಗೆ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಲಾಗಲಿಲ್ಲ. ಇದರ ಮೇಲೆ ಬಿಜೆಪಿ ಎಷ್ಟು ಪ್ರಭಲ ಇದೆ ಅಂತ ಗೊತ್ತಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌ಸಿ ಮಹದೇವಪ್ಪ (HC Mahadevappa) ವ್ಯಂಗ್ಯವಾಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಒಗ್ಗಟ್ಟು ಇಲ್ಲ, ಸಹಮತವಿಲ್ಲ, ಹೊಂದಾಣಿಕೆ ಇಲ್ಲ, ನಾಯಕತ್ವ ಇಲ್ಲ. ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಟ ನಾಯಕತ್ವ ವಹಿಸಿದ ಪಕ್ಷ. ಕಾಂಗ್ರೆಸ್ (Congress) ಪಕ್ಷಕ್ಕೆ ದೊಡ್ಡ ಇತಿಹಾಸ, ಸಿದ್ಧಾಂತವಿದೆ. ಪಂಚವಾರ್ಷಿಕ ಯೋಜನೆ ಮೂಲಕ ಅನೇಕ ಸಾಧನೆಗಳನ್ನು ಮಾಡಿದ್ದೇವೆ. 140 ಕೋಟಿ ಜನರ ಆಹಾರ ಸ್ವಾವಲಂಬನೆ ಸಾಧನೆ ಮಾಡುವುದು ಸಾಮಾನ್ಯ ಮಾತಲ್ಲ ಎಂದರು.
ನಮ್ಮ ಪಕ್ಷಕ್ಕೆ ಯಾರು ಬರ್ತಾರೆ ಅವರಿಗೆ ಕಾಂಗ್ರೆಸ್ ಬಾಗಿಲು ತೆರೆದಿರುತ್ತದೆ. ಕಾಂಗ್ರೆಸ್ ತಾನಾಗಿಯೇ ಬನ್ನಿ ಬನ್ನಿ ಅಂತ ಕರೆಯುವ ಪರಿಸ್ಥಿತಿಯಲ್ಲಿ ಇಲ್ಲ. ಇನ್ನು ಒಬ್ಬರು ಹೋದರೆ 40 ಜನರನ್ನು ತರುತ್ತೇವೆ ಎಂದ ಬಿಎಲ್ ಸಂತೋಷ್‌ಗೆ ಜನ ಉತ್ತರ ಕೊಟ್ಟಿದಾರೆ. ನಿಮ್ಮ ಯೋಗ್ಯತೆ ಏನು ಅಂತ ರಾಜ್ಯದ ಜನ ತಿಳಿಸಿದ್ದಾರೆ. ಕಾಂಗ್ರೆಸ್‌ನಿಂದ ಯಾರೂ ಬಿಜೆಪಿಗೆ ಹೋಗಲ್ಲ ಎಂದರು. ಇದನ್ನೂ ಓದಿ: ಬಿಎಸ್‍ವೈ ಕಡೆಗಣನೆಯಿಂದ ಬಿಜೆಪಿ ಅವನತಿ, ಆಪರೇಷನ್ ಆಗಲು ನನಗೆ ಕ್ಯಾನ್ಸರ್ ಗಡ್ಡೆ ಬೆಳೆದಿಲ್ಲ: ರಾಜೂಗೌಡ
ಕಾವೇರಿ ವಿವಾದ ನೂರು ವರ್ಷಗಳಿಂದ ಇರುವ ಒಂದು ಸಮಸ್ಯೆ. ಕಾನೂನಾತ್ಮಕ ಹೋರಾಟಕ್ಕೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಮಳೆ ಇಲ್ಲ, ಜಲಾಶಯದಲ್ಲಿ ನೀರಿನ ಸಂಗ್ರಹಣೆ ಇಲ್ಲ. ನಮ್ಮ ರೈತರ ಹಿತ ಕಾಪಾಡದೆ, ಬೇರೆಯವರಿಗೆ ನೀರು ಕೊಡುವ ಪರಿಸ್ಥಿತಿಯಲ್ಲಿ ನಾವಿಲ್ಲ. ಕುಡಿಯಲು ನೀರು ಮತ್ತು ರೈತರ ಹಿತ ಕಾಪಾಡಲು ಆದ್ಯತೆ ಕೊಡುತ್ತೇವೆ. ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಸಚಿವ ಹೆಚ್‌ಸಿ ಮಹದೇವಪ್ಪ ಹೇಳಿದರು. ಈ ವೇಳೆ ಕಾಂಗ್ರೆಸ್‌ನ ಅನೇಕ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. ಇದನ್ನೂ ಓದಿ: ದೇಶ ಕಟ್ಟಿದ್ದು ಕಾಂಗ್ರೆಸ್ ಪಕ್ಷ, ಮೋದಿ ಅಲ್ಲ: ಎಂಬಿ ಪಾಟೀಲ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]