ತಿರುನಂತಪುರಂ: 2024ರ ಲೋಕಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಫಿಕ್ಸ್ ಆಗಿದ್ದು, ಈ ಬಾರಿಯೂ ಕಾಂಗ್ರೆಸ್‌ನ ಹಾಲಿ ಸಂಸದ ರಾಹುಲ್ ಗಾಂಧಿ ವಯನಾಡಿನಿಂದಲೇ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ರಾಹುಲ್ ಗಾಂಧಿ (Rahul Gandhi) ಅವರಿಗೆ ಪ್ರತಿಸ್ಪರ್ಧಿಯಾಗಿ ಕೇರಳದ ಬಿಜೆಪಿ ಮುಖ್ಯಸ್ಥ ಕೆ. ಸುರೇಂದ್ರನ್ ವಯಾನಾಡು (Wayanad) ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
ಅಮೇಥಿಯಲ್ಲಿ ಸೋಲು ಕಂಡಿದ್ದ ರಾಗಾ:
2019ರ ಲೋಕಸಭಾ ಚುನಾವಣೆಯಲ್ಲಿ (Lok Sabha Elections) ರಾಗಾ ಕೇರಳದ ವಯನಾಡು ಹಾಗೂ ಉತ್ತರ ಪ್ರದೇಶದ ಅಮೇಥಿಯಿಂದ ಸ್ಪರ್ಧೆ ಮಾಡಿದ್ದರು. ಅಮೇಥಿಯಲ್ಲಿ ಸ್ಮೃತಿ ಇರಾನಿ ಅವರ ವಿರುದ್ಧ 55,120 ಮತಗಳ ಅಂತರದಿಂದ ಸೋಲು ಕಂಡಿದ್ದ ರಾಗಾ, ವಯನಾಡಿನಲ್ಲಿ ಗೆದ್ದಿದ್ದರು. ಇದನ್ನೂ ಓದಿ: ಹಾಸನದಲ್ಲಿ ಯಾವುದೇ ಬಂಡಾಯ ಇಲ್ಲ, ಜನಾರ್ದನ ರೆಡ್ಡಿ ಪಕ್ಷ ಸೇರ್ಪಡೆ ಸ್ವಾಗತ ಮಾಡ್ತೀನಿ: ತೇಜಸ್ವಿಸೂರ್ಯ
Advertisement
Advertisement
4 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು:
ಇದೇ ಸಮಯಕ್ಕೆ ವಯನಾಡಿನಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ 10,92,197 ಮತಗಳನ್ನು ಪಡೆದುಕೊಂಡಿದ್ದರು. ಈ ಮೂಲಕ 4,31,770 ಮತಗಳ ಅಂತರದಿಂದ (ಶೇಕಡವಾರು ಮತ 39.5%) ಗೆಲುವು ಸಾಧಿಸಿದ್ದರು. ಕೇರಳದ ಜನತೆ ಮೇಲೆ ವಿಶ್ವಾಸ ಇಟ್ಟಿರುವ ರಾಗಾ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅಲ್ಲದೇ ಕೇರಳದ ಅಲಪ್ಪುಳ ಕ್ಷೇತ್ರದಿಂದ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ (KC Venugopal), ತಿರುವನಂತಪುರಂನಿಂದ ಡಾ.ಶಶಿ ತರೂರ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಇದನ್ನೂ ಓದಿ: ನನ್ನ ರಕ್ತದ ಕಣಕಣದಲ್ಲೂ ಬಿಜೆಪಿ ಇದೆ, ಷರತ್ತುಗಳಿಲ್ಲದೇ ಪಕ್ಷ ಸೇರಿದ್ದೇನೆ: ಜನಾರ್ದನ ರೆಡ್ಡಿ
Advertisement
Advertisement
ಕೆ. ಸುರೇಂದ್ರನ್ ಯಾರು?
ಬಿಜೆಪಿಯ ನಿಷ್ಠಾವಂತ ಕಾರ್ಯರ್ತರಾಗಿದ್ದ ಕೆ. ಸುರೇಂದ್ರನ್ 2020ರಲ್ಲಿ ಕೇರಳ ಬಿಜೆಪಿ ಘಟಕದ ರಾಜ್ಯಾಧ್ಯಕ್ಷರಾದರು. 2019 ರಲ್ಲಿ, ಸುರೇಂದ್ರನ್ ಪತ್ತನಂತಿಟ್ಟದಿಂದ ಚುನಾವಣೆಗೆ ಸ್ಪರ್ಧಿಸಿದ್ದರು, ಆದರೆ ಯಶಸ್ವಿಯಾಗಲಿಲ್ಲ. 2018ರಲ್ಲಿ ಶಬರಿಮಲೆಗೆ ಮಹಿಳೆಯರ ಪ್ರವೇಶ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸುರೇಂದ್ರನ್ ಒಂದು ತಿಂಗಳ ಕಾಲ ಜೈಲಿನಲ್ಲಿದ್ದರು. ಈ ಬಾರಿ ಕೇರಳದಲ್ಲಿ ಬಿಜೆಪಿ ಗೆಲುವಿಗೆ ಶಕ್ತಿ ಮೀರಿ ಶ್ರಮಿಸುತ್ತಿದ್ದಾರೆ. ಹೀಗಾಗಿ ಬಿಜೆಪಿ ಅವರನ್ನು ರಾಹುಲ್ ಗಾಂಧಿ ಅವರ ಪ್ರತಿಸ್ಪರ್ಧಿಯಾಗಿ ಕಣಕ್ಕಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಲೋಕಸಭಾ ಚುನಾವಣೆ ಹಿನ್ನೆಲೆ 17 ರಾಜ್ಯಗಳ 111 ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಜೆಪಿ ಭಾನುವಾರ ಬಿಡುಗಡೆ ಮಾಡಿದೆ. ಪಕ್ಷಕ್ಕೆ ಹೊಸದಾಗಿ ಸೇರ್ಪಡೆಗೊಂಡ ನಾಯಕರು, ಕೋರ್ಟ್ ಮಾಜಿ ನ್ಯಾಯಾಧೀಶರು, ಸಿನಿಮಾ ರಂಗದ ತಾರೆಯರು ಹಾಗೂ ವಾಣಿಜ್ಯ ಉದ್ಯಮಿಗಳಿಗೂ ಪಕ್ಷ ಟಿಕೆಟ್ ನೀಡಿದೆ. ಇದನ್ನೂ ಓದಿ: ಹೋಳಿ ಹಬ್ಬದಂದು ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ಭಾರೀ ಅಗ್ನಿ ದುರಂತ – 14 ಅರ್ಚಕರಿಗೆ ಗಾಯ