ಪಣಜಿ: ಗೋವಾ ರಾಜ್ಯದ ಪಣಜಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಭಾನುವಾರ ಸಂಜೆ ಬಿಜೆಪಿ ಘೋಷಣೆ ಮಾಡಿದೆ. ಆದರೆ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಾಲ್ ಪರಿಕ್ಕರ್ ಅವರಿಗೆ ಟಿಕೆಟ್ ತಪ್ಪಿದೆ.
ಸಿದ್ಧಾರ್ಥ್ ಕುಂಕಲೇನಕರ್ ಅವರಿಗೆ ಪಣಜಿ ಉಪ ಚುನಾವಣೆಯ ಟಿಕೆಟ್ ನೀಡಲಾಗಿದೆ. ಬಿಜೆಪಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಕರ್ನಾಟಕದ ಚಿಂಚೋಳಿ ಕ್ಷೇತ್ರದ ಅಭ್ಯರ್ಥಿ ಅವಿನಾಶ್ ಜಾಧವ್ ಹಾಗೂ ಕುಂದಗೋಳದ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡರ್ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.
Advertisement
Advertisement
ಗೋವಾ ಮುಖ್ಯಮಂತ್ರಿಯಾಗಿದ್ದ ಮನೋಹರ್ ಪರಿಕ್ಕರ್ ನಿಧನದಿಂದ ತೆರವಾದ ಪಣಜಿ ವಿಧಾನಸಭಾ ಕ್ಷೇತ್ರದ ಚುನಾವಣೆ ಮೇ 19ರಂದು ನಡೆಯಲಿದೆ. ಹೀಗಾಗಿ ಬಿಜೆಪಿಯು ಉತ್ಪಾಲ್ ಪರಿಕ್ಕರ್ ಅವರಿಗೆ ಟಿಕೆಟ್ ನೀಡುತ್ತದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಅಂತಿಮವಾಗಿ ಸಿದ್ಧಾರ್ಥ್ ಕುಂಕಲೇನಕರ್ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ.
Advertisement
ಸಿದ್ಧಾರ್ಥ್ ಕುಂಕಲೇನಕರ್ ಅವರು ಈ ಹಿಂದೆ ಎರಡು ಬಾರಿ ಪಣಜಿ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಆದರೆ ಕೇಂದ್ರ ರಕ್ಷಣಾ ಸಚಿವರಾಗಿದ್ದ ಮನೋಹರ್ ಪರಿಕ್ಕರ್ ಅವರು ಗೋವಾ ರಾಜಕಾರಣಕ್ಕೆ ಮರಳಲು ನಿರ್ಧರಿಸಿದ್ದರು. ಹೀಗಾಗಿ ಸಿದ್ಧಾರ್ಥ್ ಕುಂಕಲೇನಕರ್ ಅವರು 2017 ಮೇ 10ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ನಡೆದ ಪಣಜಿ ಉಪ ಚುನಾವಣೆಯಲ್ಲಿ ಜಯಗಳಿಸಿದ್ದ ಮನೋಹರ್ ಪರಿಕ್ಕರ್ ಅವರು ಮತ್ತೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದರು.
Advertisement
ಸಿದ್ಧಾರ್ಥ್ ಕುಂಕಲೇನಕರ್ ಅವರು ಎರಡು ಬಾರಿ ಪಣಜಿ ಕ್ಷೇತ್ರದಿಂದ ಜಯಗಳಿದ್ದರಿಂದ ಹಾಗೂ ಮನೋಹರ್ ಪರಿಕ್ಕರ್ ಅವರ ಸ್ಪರ್ಧೆಗೆ ಸಹಕರಿಸಿದ್ದರು ಎಂಬ ಕಾರಣಕ್ಕೆ ಮತ್ತೆ ಅವರಿಗೆ ಟಿಕೆಟ್ ನೀಡಲಾಗಿದೆ ಎಂಬ ಮಾತು ಕೇಳಿ ಬರುತ್ತಿವೆ.
ತೇಜಸ್ವಿನಿ ಅನಂತ್‍ಕುಮಾರ್ ಅವರಿಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕಟ್ ತಪ್ಪಿದ್ದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ರಾಷ್ಟ್ರೀಯ ಸಹ ಸಂಘಟಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಡಿಎನ್‍ಎ ಆಧಾರದ ಮೇಲೆ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಆದರೆ ಕಲಬುರಗಿ ಕ್ಷೇತ್ರದಲ್ಲಿ ಯಾವ ಡಿಎನ್‍ಎ ನೋಡಿ ಅವಿನಾಶ್ ಜಾಧವ್ ಅವರಿಗೆ ಟಿಕೆಟ್ ನೀಡಿದ್ದಾರೆ ಅಂತ ವಿಪಕ್ಷ ನಾಯಕರು ವ್ಯಂಗ್ಯವಾಡುತ್ತಿದ್ದಾರೆ.