Connect with us

ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಭಾಷಣ ಪ್ರಸಾರ ಮಾಡಲು ಬಿಜೆಪಿ ನಿರ್ಧಾರ

ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಭಾಷಣ ಪ್ರಸಾರ ಮಾಡಲು ಬಿಜೆಪಿ ನಿರ್ಧಾರ

ಬೆಂಗಳೂರು: ಭಾನುವಾರದ ಪರಿವರ್ತನಾ ಯಾತ್ರೆಯಲ್ಲಿನ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಾರ ಮಾಡಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ.

ಕೇಂದ್ರ ಬಜೆಟ್ ಬಳಿಕ ಮೊದಲ ಸಾರ್ವಜನಿಕ ಭಾಷಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮ ಹೆಚ್ಚಿನ ಮಹತ್ವ ಪಡೆದುಕೊಂಡಿದ್ದು, ವಿದೇಶಗಳಲ್ಲಿರುವ ಎನ್‍ಆರ್ ಐಗಳಿಗೆ ಮೋದಿ ಭಾಷಣ ತಲುಪಿಸಲು ಬಿಜೆಪಿ ವ್ಯವಸ್ಥೆ ಮಾಡಿಕೊಂಡಿದೆ.

ಬಿಜೆಪಿ ಕರ್ನಾಟಕ, ಬಿಜೆಪಿ ಇಂಡಿಯಾ, ಬಿಜೆಪಿ ಟ್ವಿಟ್ಟರ್ ಸಾಮಾಜಿಕ ಜಾಲತಾಣಗಳ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಭಾಷಣ ಪ್ರಸಾರ ಮಾಡಲು ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ಇಷ್ಟೇ ಅಲ್ಲದೆ 200 ಸೋಶಿಯಲ್ ಮೀಡಿಯಾ ಕಾರ್ಯಕರ್ತರಿಂದ ಫೇಸ್ ಬುಕ್ ಮೂಲಕ ಲೈವ್ ನೀಡಲು ತೀರ್ಮಾನ ತೆಗೆದುಕೊಂಡಿದ್ದು, ಮೋದಿ ಭಾಷಣ ಲೈವ್ ಪ್ರಸಾರ ಮಾಡಲೆಂದೇ ಆಯ್ದ ಕಾರ್ಯಕರ್ತರಿಗೆ ಸೂಕ್ತ ತರಬೇತಿ ನೀಡಲಾಗಿದೆ.

Advertisement
Advertisement