ನವದೆಹಲಿ: ಎಐಸಿಸಿ ರಾಹುಲ್ ಗಾಂಧಿಯವರು ಯಾವ ಆಧಾರದ ಮೇಲೆ ನಮ್ಮ ಮೇಲೆ ರಫೇಲ್ ಒಪ್ಪಂದ ಕುರಿತು ದೊಡ್ಡದಾದ ಆರೋಪವನ್ನು ಮಾಡಿದ್ದಾರೆಂದು ಪ್ರಶ್ನಿಸಿ, ಕೂಡಲೇ ಕ್ಷಮೆಯಾಚಿಸುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗ್ರಹಿಸಿದ್ದಾರೆ.
ರಫೇಲ್ ಒಪ್ಪಂದದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸುಳ್ಳು ಹೇಳುವವರ ಕೆನ್ನೆಗೆ ಬಾರಿಸಿದಂತೆ ಸುಪ್ರೀಂ ತೀರ್ಪು ಪ್ರಕಟವಾಗಿದೆ. ಈ ಆದೇಶದಿಂದಾಗಿ ರಫೇಲ್ ಒಪ್ಪಂದದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನಡೆದಿಲ್ಲ ಎನ್ನುವುದು ಸಾಬೀತಾಗಿದೆ. ರಾಹುಲ್ ಗಾಂಧಿ ಮಕ್ಕಳ ರೀತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಫೇಲ್ ಒಪ್ಪಂದದಲ್ಲಿ ಡೀಲ್ ನಡೆದಿದೆಂದು ಗಂಭೀರ ಆರೋಪ ಮಾಡಿದ್ದರು. ಕೂಡಲೇ ಅವರು ಈ ಬಗ್ಗೆ ಕ್ಷಮೆಯಾಚಿಸಬೇಕು. ಅಲ್ಲದೇ ಯಾವ ಆಧಾರದಲ್ಲಿ ನಮ್ಮ ಮೇಲೆ ಈ ರೀತಿಯ ದೊಡ್ಡ ಆರೋಪ ಮಾಡಿದ್ದಾರೆ ಎನ್ನುವುದನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದಾರೆ.
Advertisement
Advertisement
ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸುತ್ತಿದ್ದ ಕಾಂಗ್ರೆಸ್ಸಿನವರು ತಮ್ಮ ಬಳಿ ಆಧಾರ ಇದ್ದರೆ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಬಹುದಿತ್ತು. ಆದರೆ ಕಾಗ್ರೆಸ್ಸಿನವರು ಹೋಗದೇ ಅವರ ಬಿ ಟೀಂ ಹೋಗಿದೆ. ಜಂಟಿ ಸಂಸದೀಯ ತನಿಖೆ ನಡೆಯುವ ಮೊದಲು ವಿಚಾರ ಸಂಸತ್ತಿನಲ್ಲಿ ಚರ್ಚೆಯಾಗಬೇಕು. ಅವರು ಚರ್ಚೆಗೆ ಬರಲಿ ಎಂದು ಅಮಿತ್ ಶಾ ಸವಾಲು ಎಸೆದರು.
Advertisement
Advertisement
ನ್ಯಾಯಾಲಯದ ಆದೇಶದ ಪ್ರಕಾರ ರಫೇಲ್ ಒಪ್ಪಂದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನಡೆದಿಲ್ಲ. ಸತ್ಯಕ್ಕೆ ಎಂದಿಗೂ ಜಯವಿದೆ. ಕಾಂಗ್ರೆಸ್ ಅಧ್ಯಕ್ಷರು ಇದನ್ನು ರಾಜಕೀಯ ಲಾಭಕ್ಕಾಗಿ ಪ್ರಧಾನಿ ವಿರುದ್ಧ ಸುಳ್ಳು ಆರೋಪ ಮಾಡಿದ್ದರು. ಆದರೆ ಈಗ ಅವರ ಆರೋಪಕ್ಕೆ ತಕ್ಕ ಉತ್ತರ ಸಿಕ್ಕಿದೆ. ಒಪ್ಪಂದದಲ್ಲಿ ಯಾವುದೇ ರೀತಿಯ ತಪ್ಪುಗಳಾಗಿಲ್ಲವೆಂಬುದು ನ್ಯಾಯಾಲಯಕ್ಕೆ ತಿಳಿದಿದೆ ಎಂದು ಹೇಳಿದರು. ಇದನ್ನೂ ಓದಿ : ಪ್ರಧಾನಿ ಮೋದಿಗೆ ಅತಿ ದೊಡ್ಡ ಗೆಲುವು: ಸುಪ್ರೀಂ ತೀರ್ಪಿನಲ್ಲಿರುವ ಪ್ರಮುಖ ಅಂಶಗಳು ಏನು?
BJP President Amit Shah: Rahul Gandhi ji should apologize to the nation for misleading people. Want to ask Rahul ji what was the source of information on basis of which he made such big allegations? #RafaleDeal pic.twitter.com/v2kSjXAait
— ANI (@ANI) December 14, 2018
ಕೇವಲ ವಾಣಿಜ್ಯ ಲಾಭಕ್ಕಾಗಿ ಕೇಂದ್ರ ಸರ್ಕಾರ ರಫೇಲ್ ಒಪ್ಪಂದ ಮಾಡಿಕೊಂಡಿಲ್ಲ. ಭ್ರಷ್ಟಾಚಾರದ ಇತಿಹಾಸವನ್ನು ಹೊಂದಿರುವ ಕಾಂಗ್ರೆಸ್ಸಿಗೆ ಒಪ್ಪಂದವನ್ನು ಪ್ರಶ್ನಿಸುವ ಹಾಗೂ ಆರೋಪ ಮಾಡುವ ಹಕ್ಕಿದೆ. ಏಕೆಂದರೆ ಹಲವು ಸಮಯದಿಂದಲೂ ಕಾಂಗ್ರೆಸ್ ನಾಯಕರು ದೇಶವನ್ನು ಕಾಯುತ್ತಿರುವ ನಾಯಕ ಕಳ್ಳನೆಂದು ಹೇಳುತ್ತಲೇ ಇದ್ದಾರೆ. ಆದರೆ ಈಗ ಇದರ ಸತ್ಯಾಸತ್ಯತೆ ಬೆಳಕಿಗೆ ಬಂದಿದೆ ಎಂದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv