– ಸರ್ಕಾರಕ್ಕೆ ಅಲ್ಪಸಂಖ್ಯಾತರ ಮೇಲಿನ ಪ್ರೀತಿ ಹೆಚ್ಚಾಗಿದೆ
– ಸಿದ್ದರಾಮಯ್ಯ ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹ
ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣವನ್ನು (Hubballi Riots Case) ವಾಪಸ್ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಇದರ ಭಾಗವಾಗಿ ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್‌ನಲ್ಲೂ ರಾಜ್ಯಬಿಜೆಪಿ ಘಟಕ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra), ವಿಪಕ್ಷ ನಾಯಕ ಆರ್.ಅಶೋಕ್, ಅಶ್ವಥ್ ನಾರಾಯಣ, ಶಾಸಕರಾದ ಎಸ್.ಆರ್ ವಿಶ್ವನಾಥ್, ಸಿ.ಕೆ ರಾಮಮೂರ್ತಿ, ರವಿ ಸುಬ್ರಹ್ಮಣ್ಯ, ಸಂಸದ ಕಾರಜೋಳ, ಎಮ್‌ಎಲ್‌ಸಿ ರವಿಕುಮಾರ್ ಮೊದಲಾದ ನಾಯಕರು ಪಾಲ್ಗೊಂಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ಆಕ್ರೋಶ ಹೊರಹಾಕಿದ್ದಾರೆ.
Advertisement
ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಲು ನಿರ್ಧಾರ ಕೈಗೊಂಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ (Cabinet Meeting) ಹುಬ್ಬಳ್ಳಿ ಗಲಭೆಯಲ್ಲಿ ದಾಖಲಾಗಿದ್ದವರ ಮೇಲಿನ ಪ್ರಕರಣ ವಾಪಸ್ ಪಡೆಯುವ ನಿರ್ಧಾರ ಕೈಗೊಂಡಿದ್ದಕ್ಕೆ ಬಿಜೆಪಿ (BJP) ಆಕ್ರೋಶ ವ್ಯಕ್ತಪಡಿಸಿದೆ. ಇದನ್ನೂ ಓದಿ: ಎಸ್‌ಸಿಒ ಶೃಂಗಸಭೆ – ಮಂಗಳವಾರ ಪಾಕ್‌ಗೆ ಪ್ರಯಾಣಿಸಲಿದ್ದಾರೆ ಭಾರತದ ವಿದೇಶಾಂಗ ಸಚಿವ ಜೈಶಂಕರ್
Advertisement
Advertisement
ಪ್ರತಿಭಟನೆ ವೇಳೆ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಮಾತನಾಡಿ, ಆವತ್ತು ಹುಬ್ಬಳ್ಳಿ ಪೊಲೀಸ್ ಠಾಣೆ ಮುಂದೆ ಅಲ್ಪಸಂಖ್ಯಾತರು ಪ್ರತಿಭಟನೆ ನಡೆಸಿದ್ದು, ಕಲ್ಲೆಸೆದಿದ್ದರು, ಪೊಲೀಸರ ಕಾಲರ್ ಹಿಡಿದು, ಹಲ್ಲೆ ಮಾಡಿದರು. ಇದೆಲ್ಲ ಕ್ರಿಮಿನಲ್ ಕೇಸ್‌ಗಳು, ಇದನ್ನೆಲ್ಲ ಸರ್ಕಾರ ವಾಪಸ್ ಪಡೆದಿದೆ. ಈ ಸರ್ಕಾರಕ್ಕೆ ಅಲ್ಪಸಂಖ್ಯಾತರ ಮೇಲೆ ವಿಪರೀತ ಪ್ರೀತಿ, ಇದೇ ತುಷ್ಟೀಕರಣ ನೀತಿ. ಈ ಗಲಭೆಕೋರ ಗುಂಪಿನಲ್ಲಿ ಪಿಎಫ್‌ಐ ಸದಸ್ಯರು ಇದ್ದರು ಎನ್ನಲಾಗಿದೆ, ಎನ್‌ಐಎಗೆ ಈ ಗುಂಪಿನ ಮೇಲೆ ಅನುಮಾನ ಇದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
Advertisement
ಮುಖ್ಯಮಂತ್ರಿಗಳು ಸಿ.ಟಿ ರವಿ, ಪ್ರಹ್ಲಾದ್ ಜೋಶಿ ಮೇಲಿನ ಕೇಸ್ ವಾಪಸ್ ಪಡೀಲಿಲ್ವಾ ಅಂತಾರೆ, ಸಿಟಿ ರವಿ, ಜೋಶಿ ಭಯೋತ್ಪಾದಕರಾ? ಪ್ರಹ್ಲಾದ್ ಜೋಶಿ, ಭಯೋತ್ಪಾದಕ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯರನ್ನ ಬಂಧಿಸಿ, ವಿಚಾರಣೆಗೆ ಒಳಪಡಿಸಿ – ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ