ಕೋಲಾರ: ವಿಧಾನಸಭೆ ಕಲಾಪದಲ್ಲಿ ರೇಪ್ ಎಂಜಾಯ್ ಮಾಡಬೇಕು ಎಂದು ಹೇಳಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಎಲ್ಲೆಡೆ ಆಕ್ರೋಶ ಹೆಚ್ಚಾಗಿದ್ದು, ಅವರ ಪ್ರತಿಕೃತಿ ದಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.
ಕೋಲಾರ ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಬಿಜೆಪಿ ಮಹಿಳಾ ಮೋರ್ಜಾ ಸದಸ್ಯರು ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ಈ ವೇಳೆ ರಮೇಶ್ ಕುಮಾರ್ ಅವರ ಪ್ರತಿಕೃತಿ ದಹಿಸಿ ಪೊರಕೆ ಸೇವೆ ಮಾಡಿದ ಮಹಿಳೆಯರು, ಹೆಣ್ಣು ಕುಲಕ್ಕೆ ಅವಮಾನ ಮಾಡಿದ್ದಾರೆ ಎಂದು ದೂರಿದ್ದಾರೆ. ಇದನ್ನೂ ಓದಿ: 20 ವರ್ಷದಿಂದ ಮಕ್ಕಳ ಅಶ್ಲೀಲ ಫೋಟೋ, ವೀಡಿಯೋ ಚಿತ್ರಿಸುತ್ತಿದ್ದ ಸಂಗೀತಗಾರ
ಈ ವೇಳೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನು ಮಾಡಿ ರಮೇಶ್ ಅವರ ವಿರುದ್ಧ ಸರಿಯಾದ ಕ್ರಮ ಕೈಗೊಳ್ಳುವಂತೆ ಒತ್ತಾಯವನ್ನು ಮಾಡುತ್ತಿದ್ದಾರೆ.
ಮುಳುಬಾಗಿಲು ನಗರ ಹಾಗೂ ಶ್ರೀನಿವಾಸಪುರ ಪಟ್ಟಣದಲ್ಲಿ ರಮೇಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದ್ರು.