ಏನಿಲ್ಲಾ ಏನಿಲ್ಲಾ, ದಲಿತ ಯೋಜನೆಗಳ‌ ಮಾಲೀಕ ನೀನಲ್ಲಾ – ಸಿಎಂ ವಿರುದ್ಧ ಬಿಜೆಪಿ ಪ್ರತಿಭಟನೆ

Public TV
1 Min Read
BJP Protest 2

ಹಾವೇರಿ: ರಾಜ್ಯ ಸರ್ಕಾರವು ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಹಾವೇರಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ (BJP Protest) ನಡೆಸಿದರು.

ಹಾವೇರಿ ಬಿಜೆಪಿ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದರಲ್ಲದೇ, ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಾನವ ಸರಪಳಿ ಮಾಡಿ ರಾಜ್ಯ ಸರ್ಕಾರದ (Government Of Karnataka) ವಿರುದ್ಧ ಧಿಕ್ಕಾರ ಕೂಗಿದರು. ಇದನ್ನೂ ಓದಿ: ವಿಜಯ್ ರಾಜಕೀಯಕ್ಕೆ ಬರೋಕೆ ನಾನೇ ಹೇಳಿದ್ದೆ: ನಟ ಕಮಲ್ ಹಾಸನ್

BJP Protest

ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ್ ಪೂಜಾರ್ ನೇತೃತ್ವದಲ್ಲಿ ಮಾಜಿ ಶಾಸಕರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು. ʻಏನಿಲ್ಲಾ ಏನಿಲ್ಲಾ ಸಿದ್ದರಾಮಯ್ಯ, ದಲಿತ ಯೋಜನೆಗಳ‌ ಮಾಲೀಕ ನೀನಲ್ಲಾ, ದಲಿತ ಸಮುದಾಯ (Dalit Community) ತುಳಿಯುತ್ತಿರುವ ಸರ್ಕಾರಕ್ಕೆ‌ ಧಿಕ್ಕಾರ ಧಿಕ್ಕಾರʼ ಎಂಬ ಘೋಷಣಾ ಫಲಕಗಳನ್ನ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತ: ಸುಮಲತಾ ಅಂಬರೀಶ್

ದಲಿತ ಯೋಜನೆಗಳಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂ. ಹಣವನ್ನು ಬೇರೆ ಯೋಜನೆಗಳಿಗೆ ಬಳಕೆ ಮಾಡಿದ್ದಾರೆ. ಸಮುದಾಯ ಅಭಿವೃದ್ಧಿಗೆ ಹಿನ್ನಡೆ ಮಾಡಿದ್ದೀರಿ ಎಂದು ಕಿಡಿ ಕಾರಿದರು. ಪ್ರತಿಭಟನೆಯಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.

Share This Article