ಮಂಗಳೂರು: ಬಜರಂಗದಳ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತೆ ಉದ್ವಿಗ್ನಗೊಂಡಿದ್ದು, ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿದೆ. ಇದನ್ನೂ ಓದಿ: ನಾನು ನಂಬಿದ ದೇವರು ಆರೋಪಿಗಳಿಗೆ ಶಿಕ್ಷೆ ನೀಡ್ತಾನೆ: ದೀಪಕ್ ತಾಯಿ ಕಣ್ಣೀರು
Advertisement
ಕಳೆದೆರಡು ದಿನಗಳಿಂದ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಗುರುವಾರ ರಾತ್ರಿ 10 ಗಂಟೆಗೆ ಪೊಲೀಸರು ತೆರವುಗೊಳಿಸಿದ್ದಾರೆ. ಇನ್ನು ನಿನ್ನೆ ಬಂದ್ ಇದ್ದ ಸುರತ್ಕಲ್‍ನಲ್ಲಿ ವಾಹನ ಸಂಚಾರ ಎಂದಿನಂತಿದ್ದು ಅಂಗಡಿ ಮುಂಗಟ್ಟುಗಳು ತೆರೆದಿವೆ. ಆದರೂ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಇದನ್ನೂ ಓದಿ: 7 ವರ್ಷಗಳ ಕಾಲ ನನ್ನ ಜೊತೆಯಿದ್ದ ದೀಪಕ್ ಸಾವು ಊಹಿಸಲು ಸಾಧ್ಯವಿಲ್ಲ: ಮಾಲೀಕ ಮಜೀದ್
Advertisement
Advertisement
ಈ ಮಧ್ಯೆ ಪಿಎಫ್‍ಐ ಸಂಘಟನೆ ನಿಷೇಧಕ್ಕೆ ಒತ್ತಡ ಹೆಚ್ಚಾಗ್ತಿದ್ದು, ರಾಜ್ಯಾದ್ಯಂತ ಹೋರಾಟ ಮಾಡಲು ಬಿಜೆಪಿ ನಿರ್ಧರಿಸಿದೆ. ಇಂದು ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಮತ್ತು ಪಿಎಫ್‍ಐ ನಿಷೇಧಕ್ಕೆ ಒತ್ತಾಯಿಸಿ ರಾಜ್ಯಾದ್ಯಂತ ರಸ್ತೆ ತಡೆ ಪ್ರತಿಭಟನೆಗೆ ಬಿಜೆಪಿ ಕರೆ ಕೊಟ್ಟಿದೆ. ಆದ್ರೆ ದೀಪಕ್ ರಾವ್ ಮನೆಯಲ್ಲಿ ಸ್ಮಶಾನ ಮೌನ ಆವರಿಸಿದೆ. ಇದನ್ನೂ ಓದಿ: ದೀಪಕ್ ಹತ್ಯೆ ಕೇಸ್: ಪೊಲೀಸರ 27 ಕಿ.ಮೀ ಥ್ರಿಲ್ಲಿಂಗ್ ಚೇಸಿಂಗ್ ಸ್ಟೋರಿ ಓದಿ
Advertisement
ಬುಧವಾರ ಮಧ್ಯಾಹ್ನ ಸುಮಾರು 1.30 ರ ಸಮಯಕ್ಕೆ ಸುರತ್ಕಲ್ ಬಳಿಕ ಕಾಟಿಪಳ್ಳದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕಡಿದು ದೀಪಕ್ ರಾವ್ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದರು. ಕೂಡಲೇ ಎಚ್ಚೆತ್ತ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಸದ್ಯ ಈ ಆರೋಪಿಗಳನ್ನು ಅಜ್ಞಾನ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆಂಬ ಮಾಹಿತಿ ಲಭಿಸಿದೆ. ಇದನ್ನೂ ಓದಿ: ದೀಪಕ್ ಬರ್ಬರ ಹತ್ಯೆಗೈದ ನಾಲ್ವರು ಅರೆಸ್ಟ್: ಪೊಲೀಸರ ಮೇಲೆ ತಲ್ವಾರ್ ಬೀಸಿದ್ದ ಆರೋಪಿಗಳು