LatestMain PostNational

ದೀದಿ ವಿರುದ್ಧ ಬಿಜೆಪಿ ಪ್ರತಿಭಟನೆ – ಪೊಲೀಸರಿಂದ ಜಲಫಿರಂಗಿ ಅಸ್ತ್ರ ಬಳಕೆ

ಕೋಲ್ಕತ್ತಾ: ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಬಿಜೆಪಿಯಿಂದ(BJP) ಇಂದು ಬೃಹತ್ ಪ್ರತಿಭಟನೆ(Protest) ನಡೆಯಿತು. ಆದರೆ ಸರ್ಕಾರ ಈ ಪ್ರತಿಭಟನೆಗೆ ಅವಕಾಶ ನೀಡಿರಲಿಲ್ಲ, ಪರಿಣಾಮ ಇಂದು ಕೋಲ್ಕತ್ತಾದಲ್ಲಿ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ದೊಡ್ಡ ಸಂಘರ್ಷ ನಡೆಯಿತು.

ಕೋಲ್ಕತ್ತಾ(Kolkata) ನಗರದಲ್ಲಿ ಟಿಎಂಸಿ(TMC) ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಿರುವ ಬಿಜೆಪಿ ಇಂದು ನಬಣ್ಣ ಚಲೋ ಹೆಸರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಭಾಗಗಳಿಂದ ಕಾರ್ಯಕರ್ತರಿಗೆ ಬುಲಾವ್ ನೀಡಲಾಗಿತ್ತು. ಬಸ್, ರೈಲು, ಖಾಸಗಿ ವಾಹನಗಳ ಮೂಲಕ ಕೋಲ್ಕತ್ತಾ ನಗರವನ್ನು ಪ್ರವೇಶ ಮಾಡಲು ಪ್ರಯತ್ನಿಸಿದರು. ಆದರೆ ಪ್ರತಿಭಟನೆಗೆ ಸರ್ಕಾರ ಅನುಮತಿ ನೀಡದ ಹಿನ್ನಲೆಯಲ್ಲಿ ಪೊಲೀಸರು ಕಾರ್ಯಕರ್ತರ ಪ್ರವೇಶ ನಿರ್ಬಂಧಿಸಿದರು. ಆದರೂ ಬಿಜೆಪಿ ಧ್ವಜ ಹಿಡಿದು ಕಾರ್ಯಕರ್ತರು ನುಗ್ಗಿ ಬಂದಿದ್ದಾರೆ. ಈ ವೇಳೆ ಕಾರ್ಯಕರ್ತರನ್ನು ಚೆದುರಿಸಲು ಪೊಲೀಸರ ಲಾಠಿ ಜಾರ್ಜ್ ನಡೆದಿದೆ. ಅಷ್ಟೇ ಅಲ್ಲದೇ ಪರಿಸ್ಥಿತಿ ನಿಯಂತ್ರಣಕ್ಕೆ ಜಲಫಿರಂಗಿ ಅಸ್ತ್ರವನ್ನು ಉಪಯೋಗಿಸಲಾಯಿತು.

ಕೋಲ್ಕತ್ತಾಕ್ಕೆ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರನ್ನು ಪನಾಗಢ್, ದುರ್ಗಾಪುರ್, ರಾಣಿಗಂಜ್ ರೈಲ್ವೆ ನಿಲ್ದಾಣ ಸೇರಿದಂತೆ ಬೇರೆ ನಿಲ್ದಾಣಗಳಲ್ಲಿ ಬಂಧಿಸಲಾಯಿತು. ಪೊಲೀಸರು ಕೋಲ್ಕತ್ತಾ ರೈಲ್ವೆ ನಿಲ್ದಾಣದಲ್ಲಿ ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನು ತಡೆ ಹಿಡಿದರು. ರಾಣಿಗಂಜ್ ರೈಲ್ವೆ ನಿಲ್ದಾಣದಲ್ಲಿ ಕಾರ್ಯಕರ್ತರನ್ನು ತಡೆದ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯಿತು. ದುರ್ಗಾಪುರ್ ರೈಲ್ವೆ ನಿಲ್ದಾಣದಲ್ಲಿ ಸುಮಾರು 20 ಮಂದಿ ಬಿಜೆಪಿ ಕಾರ್ಯಕರ್ತರನ್ನು ತಡೆದು ನಿಲ್ಲಿಸಲಾಯಿತು. ಈ ವೇಳೆ ಪೊಲೀಸರು, ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ಏರ್ಪಟ್ಟಿತ್ತು. ಇದನ್ನೂ ಓದಿ: ಪಬ್ಲಿಕ್‌ ಟಿವಿ ಇಂಪ್ಯಾಕ್ಟ್‌ – ನಲಪಾಡ್‌ ಅಕಾಡೆಮಿಗೆ ಜೆಸಿಬಿ ಗುನ್ನಾ!

POLICE JEEP

ಇದೇ ಸಂದರ್ಭದಲ್ಲಿ ಬಿಜೆಪಿ ಸಂಸದ ಲಾಕೆಟ್ ಚಟರ್ಜಿ, ಪಕ್ಷದ ನಾಯಕ ರಾಹುಲ್ ಸಿನ್ಹಾ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ಬಂಧಿಸಿ ವಶಕ್ಕೆ ಪಡೆದಿದ್ದಾರೆ. ಒಟ್ಟಿನಲ್ಲಿ ಟಿಎಂಸಿ ವಿರುದ್ಧ ಬಿಜೆಪಿ ಭ್ರಷ್ಟಾಚಾರದ ಅಸ್ತ್ರ ಪ್ರಯೋಗಿಸಿದರೇ ಇತ್ತ ದೀದಿ ಮಾತ್ರ ಪ್ರತಿಭಟನೆಗೆ ಅವಕಾಶ ನೀಡಿದೇ ಹತ್ತಿಕ್ಕುವ ಪ್ರಯತ್ನ ಮಾಡಿದ್ದಾರೆ. ಇದನ್ನೂ ಓದಿ: ಕರ್ನಾಟಕವನ್ನು ಹಿಂದಿಕ್ಕಿ 1.54 ಲಕ್ಷ ಕೋಟಿ ಹೂಡಿಕೆಯ ಸೆಮಿಕಂಡಕ್ಟರ್‌ ಘಟಕ ತನ್ನದಾಗಿಸಿಕೊಂಡ ಗುಜರಾತ್‌

Live Tv

Leave a Reply

Your email address will not be published.

Back to top button