ಬೆಂಗಳೂರು: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಾಮಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣವನ್ನ ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿ (Assembly) ಪ್ರತಿಭಟನಾ ಧರಣಿ ನಡೆಸಿದರು.
Advertisement
ಜೈನಮುನಿ ಹತ್ಯೆ ಪ್ರಕರಣದ ಕುರಿತು ಶೂನ್ಯ ವೇಳೆಯಲ್ಲಿ ನಡೆದ ಚರ್ಚೆಗೆ ಗೃಹ ಸಚಿವ ಡಾ.ಜಿ ಪರಮೇಶ್ವರ (G Parameshwara) ನೀಡಿದ ಉತ್ತರ ಖಂಡಿಸಿ ಸದನದ ಬಾವಿಗಿಳಿದು ಧರಣಿ ನಡೆಸಿದರು. ಇದನ್ನೂ ಓದಿ: ವಿಧಾನಸಭೆಯಲ್ಲಿ ವರ್ಗಾವಣೆ ‘ವ್ಯಾಪಾರ’ದ ಕಿಚ್ಚು ; ಕಾಂಗ್ರೆಸ್-ಬಿಜೆಪಿ ಮಧ್ಯೆ ಜಟಾಪಟಿ, ಕಲಾಪ ಮುಂದೂಡಿಕೆ
Advertisement
Advertisement
ಧರಣಿಗೂ ಮೊದಲು ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜೈನಮುನಿ ಕೊಲೆಗೂ ಬೇರೆ ಕೊಲೆಗೂ ಹೋಲಿಕೆ ಮಾಡುವುದು ಸರಿಯಲ್ಲ. ಯಾರಿಗೂ ಹಿಂಸೆ ಬಯಸದ ಜೈನ ಮುನಿಗಳನ್ನ ಕರೆಂಟ್ ಶಾಕ್ ಕೊಟ್ಟು ಹತ್ತೆ ಮಾಡಿರಬೇಕೆಂದರೆ ಇದರ ಹಿಂದೆ ಷಡ್ಯಂತರ ಇದೆ. ಈ ಪ್ರಕರಣದಲ್ಲಿ ಅವರು ಕೊಂದು ಇಷ್ಟೊಂದು ತುಂಡು ಮಾಡಿ ಕೊಳವೆ ಬಾವಿಯಲ್ಲಿ ಹಾಕುವಷ್ಟು ಸಮಯ ಇದ್ದರೇ ಅವರು ಎಷ್ಟು ಪೂರ್ವ ನಿಯೋಜಿತ ಯೋಜನೆ ರೂಪಿಸಿದ್ದರು ಎನ್ನುವುದಕ್ಕೆ ಸಾಕ್ಷಿ ಎಂದು ಹೇಳಿದರು.
Advertisement
ಈ ಪ್ರಕರಣದಲ್ಲಿ ಯಾರನ್ನೋ ರಕ್ಷಣೆ ಮಾಡುವ ಪ್ರಯತ್ನ ನಡೆಸಿದ್ದೀರಿ ಎನ್ನುವ ಅನುಮಾನ ಮೂಡುತ್ತಿದೆ. ಪ್ರಕರಣವನ್ನು ಸಿಬಿಐಗೆ ಕೊಡುವುದರಿಂದ ರಾಜ್ಯ ಪೊಲಿಸರ ಘನತೆ ಏನು ಕಡಿಮೆ ಆಗುವುದಿಲ್ಲ. ಅನೇಕ ಪ್ರಕರಣಗಳನ್ನು ಹಿಂದೆ ಸಿಬಿಐಗೆ ಕೊಟ್ಟಿದ್ದಾರೆ. ಈ ಪ್ರಕರಣ ಸಿಬಿಐಗೆ ಕೊಡುವುದರಿಂದ ಏನು ಕಳೆದುಕೊಳ್ಳುವುದಿದೆ? ಸಿಬಿಐಗೆ ಕೊಡದಿದ್ದರೆ ಅನುಮಾನ ಹುಟ್ಟುತ್ತದೆ. ನೀವು ಸಿಬಿಐ, ಇನ್ಸ್ಪೆಕ್ಟರ್ ನಿಂದ ತನಿಖೆ ಮಾಡಿಸಲು ಬಯಸುತ್ತಿದ್ದೀರಿ ಇದರ ವಿರುದ್ದ ಪ್ರತಿಭಟನೆ ನಡೆಸುತ್ತೇವೆ ಎಂದು ಸದನದ ಬಾವಿಗಿಳಿದು ಧರಣಿ ನಡೆಸಿದರು. ಇದನ್ನೂ ಓದಿ: ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರಕ್ಕೆ ಸೂಚಿಸುವಂತೆ ರಾಜ್ಯಪಾಲರಿಗೆ ಮನವಿ: ಬೊಮ್ಮಾಯಿ
ಆರೋಪಿಗಳ ಮೇಲೆ ಕ್ರಮಣಕ್ಕೆ ಆಗ್ರಹ:
ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ ಎನ್ನುವ ವ್ಯಕ್ತಿಯನ್ನ ಬರ್ಬರವಾಗಿ ಹತ್ಯೆ ಮಾಡಿದ್ದು, ಹಂತಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ಹನುಮ ಜಯಂತಿ ಕಾರ್ಯಕ್ರಮದಲ್ಲಿ ಅವಕಾಶ ನೀಡಲಿಲ್ಲ, ದೇವರ ಫೋಟೊ ಜಾಗದಲ್ಲಿ ಪುನೀತ್ ರಾಜಕುಮಾರ್ ಫೋಟೋ ಇಡುವ ವಿಚಾರಕ್ಕೆ ಮಣಿಕಂಠ, ವೇಣುಗೋಪಾಲ ನಡುವೆ ಗಲಾಟೆಯಾಗಿದೆ. ಮಾರನೇ ದಿನ ಮಾತುಕತೆಗೆಂದು ಕರೆಸಿಕೊಂಡು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಅವರನ್ನು ಆಸ್ಪತ್ರೆಗೆ ತೆಗೆದುಕೊಂಡು ಹೊಗುವಾಗ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಇಷ್ಟು ಸಣ್ಣ ವಿಚಾರಕ್ಕೆ ಕೊಲೆಯಾಗಿರೋದು ಆಘಾತಕಾರಿ, ಧಾರ್ಮಿಕ ಆಚರಣೆಗಳು ನಿರಂತರವಾಗಿ ನಡೆಯುತ್ತವೆ. ಈ ರೀತಿಯ ಕೊಲೆಗಳು ಸಮಾಜದ ಮೇಲೆ ಪರಿಣಾಮ ಬೀರುತ್ತವೆ. ಇದರಲ್ಲಿ ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ಈ ರೀತಿಯ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಪೊಲಿಸರು ಇನ್ನೂ ಯಾರನ್ನೂ ಬಂಧಿಸಿಲ್ಲ. ಆದರೆ ಮೆಲಧಿಕಾರಿಗಳು ಆರೋಪಿಗಳ ಹೆಸರುಗಳನ್ನು ಹೇಳಿ ದಾರಿ ತಪ್ಪಿಸುತ್ತಿದ್ದಾರೆ. ಸಕಲೇಶಪುರ, ಕಲಬುರಗಿ, ನಂಜನಗೂಡಿನಲ್ಲಿ ಹಲವು ಪ್ರಕರಣಗಳು ನಡೆದಿವೆ. ಇಂತಹ ಪ್ರಕರಣಗಳನ್ನ ಸರ್ಕಾರ ಗಂಭಿರವಾಗಿ ಪರಿಗಣಿಸಬೇಕು. ಇಲ್ಲದಿದ್ದರೆ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಹೇಳಿದರು.
Web Stories