Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರದ ವಿರುದ್ಧ ಇಂದಿನಿಂದ ಬಿಜೆಪಿ ರಸ್ತೆಗುಂಡಿ, ಕಸ ಚಳುವಳಿ – ಗುಂಡಿಗೆ ವೈಟ್ ಸ್ಪ್ರೇ ಹಾಕಿ, ಪ್ಲೇಕಾರ್ಡ್ ಪ್ರದರ್ಶಿಸಿ ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರದ ವಿರುದ್ಧ ಇಂದಿನಿಂದ ಬಿಜೆಪಿ ರಸ್ತೆಗುಂಡಿ, ಕಸ ಚಳುವಳಿ – ಗುಂಡಿಗೆ ವೈಟ್ ಸ್ಪ್ರೇ ಹಾಕಿ, ಪ್ಲೇಕಾರ್ಡ್ ಪ್ರದರ್ಶಿಸಿ ಪ್ರತಿಭಟನೆ

Bengaluru City

ಸರ್ಕಾರದ ವಿರುದ್ಧ ಇಂದಿನಿಂದ ಬಿಜೆಪಿ ರಸ್ತೆಗುಂಡಿ, ಕಸ ಚಳುವಳಿ – ಗುಂಡಿಗೆ ವೈಟ್ ಸ್ಪ್ರೇ ಹಾಕಿ, ಪ್ಲೇಕಾರ್ಡ್ ಪ್ರದರ್ಶಿಸಿ ಪ್ರತಿಭಟನೆ

Public TV
Last updated: November 8, 2025 5:55 pm
Public TV
Share
2 Min Read
BJP Protest
SHARE

ಬೆಂಗಳೂರು: ರಸ್ತೆಗುಂಡಿಗಳನ್ನು ಮುಚ್ಚಲು ಸರ್ಕಾರ ಗಡುವುಗಳನ್ನು ಕೊಡುತ್ತಿದ್ದರೂ ಬೆಂಗಳೂರಿನಲ್ಲಿ (Bengaluru) ಗುಂಡಿ ಮುಚ್ಚುವ ಕೆಲಸ ಪ್ರಗತಿ ಕಾಣ್ತಿಲ್ಲ. ಜೊತೆಗೆ ಕಸದ ಸಮಸ್ಯೆಯೂ ಹೆಚ್ಚಾಗಿದೆ. ಈ ಮಧ್ಯೆ ಬಿಜೆಪಿ (BJP) ನಾಯಕರು ಸರ್ಕಾರದ ವಿರುದ್ಧ ಇಂದಿನಿಂದ (ನ.8) ಎರಡನೇ ರೌಂಡ್ ಗುಂಡಿ ಮತ್ತು ಕಸ ಚಳುವಳಿ ಶುರು ಮಾಡಿದ್ದಾರೆ.

ಗುಂಡಿ, ಗುಂಡಿ ಎಲ್ನೋಡಿದ್ರೂ ಗುಂಡಿ. ಗುಂಡಿಗಳ ಜೊತೆ ಕಸದ ರಾಶಿ, ರಾಶಿ ದರ್ಶನ. ಜನಾಕ್ರೋಶಕ್ಕೆ ಸರ್ಕಾರ ಕಿವುಡಾಗಿದ್ರೆ, ಬಿಜೆಪಿ ದನಿಯಾಗುವ ಪ್ರಯತ್ನ ಮಾಡಿದೆ. ಇಂದಿನಿಂದ ಬಿಜೆಪಿ ಸೆಕೆಂಡ್ ರೌಂಡ್ ಗುಂಡಿ ಚಳುವಳಿ ಕೈಗೆತ್ತಿಕೊಂಡಿದೆ. ಈ ಬಾರಿ ರಸ್ತೆ ಗುಂಡಿ ಜೊತೆ ಕಸ ಸಮಸ್ಯೆಯನ್ನೂ ಕೇಸರಿ ಪಡೆ ಅಸ್ತ್ರ ಮಾಡಿಕೊಂಡಿದೆ.ಇದನ್ನೂ ಓದಿ: ಸರ್ಕಾರ ನಿಗದಿಪಡಿಸಿದ್ದಕ್ಕಿಂತ 50 ರೂ. ಜಾಸ್ತಿ ಕೊಡ್ತೀವಿ – ಕಬ್ಬು ಬೆಳೆಗಾರರಿಗೆ ವೆಂಕಟೇಶ್ವರ ಸಕ್ಕರೆ ಕಾರ್ಖಾನೆ ಸಿಹಿಸುದ್ದಿ

ಬಿಜೆಪಿ ನಾಯಕರಾದ ಆರ್.ಅಶೋಕ್, ಅಶ್ವಥ್ ನಾರಾಯಣ, ಸುರೇಶ್ ಕುಮಾರ್, ಪಿ.ಸಿ ಮೋಹನ್, ಮುನಿರತ್ನ ಮತ್ತಿತರರು ವಿಜಯನಗರ (Vijayanagar) ಹಾಗೂ ಗೋವಿಂದರಾಜನಗರ (Govindraj nagar) ಕ್ಷೇತ್ರಗಳಲ್ಲಿ ಗುಂಡಿ ಹಾಗೂ ಕಸದ ಪಾಯಿಂಟ್ ಇನ್‌ಸ್ಪೆಕ್ಷನ್ ಮಾಡಿದರು. ಮೊದಲು ವಿಜಯನಗರ-ನಾಗರಭಾವಿ ಮುಖ್ಯರಸ್ತೆಯಲ್ಲಿ ಇನ್ನೂ ಮುಚ್ಚದ ರಸ್ತೆಗುಂಡಿ ಸುತ್ತಲೂ ವೈಟ್ ಪೇಯಿಂಟ್ ಸ್ಪ್ರೇ ಮಾಡಿದ್ರು. ಇದು ಬ್ರ‍್ಯಾಂಡ್ ಬೆಂಗಳೂರು ಅಂತ ಪೇಯಿಂಟ್ ಸ್ಪ್ರೇ ಮೂಲಕ ಗುಂಡಿ ಮೇಲೆ ಬರೆದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ವಿರುದ್ಧ ಪ್ಲೇಕಾರ್ಡ್ಗಳನ್ನು ಹಿಡಿದುಕೊಂಡು ಅಭಿಯಾನ ನಡೆಸಿದರು.

ಇನ್ನು ಗೋವಿಂದರಾಜನಗರ ಕ್ಷೇತ್ರದ 12ನೇ ಮುಖ್ಯ ರಸ್ತೆಯಲ್ಲಿ ಕಸದ ರಾಶಿ ಇದ್ದು, ಬಹಳ ದಿನಗಳಿಂದ ತೆಗೆದಿರಲಿಲ್ಲ. ವಿಲೇವಾರಿ ಮಾಡದೇ ರಸ್ತೆ, ಫುಟ್‌ಪಾತ್‌ನಲ್ಲೇ ಕಸ ಚೆಲ್ಲಾಪಿಲ್ಲಿಯಾಗಿತ್ತು. ಈ ಕಸದ ಸ್ಥಳಕ್ಕೆ ಭೇಟಿ ಕೊಟ್ಟ ಬಿಜೆಪಿ ನಾಯಕರು. ಪ್ಲೇಕಾರ್ಡ್ಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದರು. ಇದೇ ವೇಳೆ ಬಹಳ ದಿನಗಳಿಂದ ಕಸ ವಿಲೇವಾರಿ ಮಾಡಿಲ್ಲ ಅಂತ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಗಡುವು ಮುಗಿದರೂ ಗುಂಡಿ ಮುಚ್ಚದ ಸರ್ಕಾರಕ್ಕೆ ಧಿಕ್ಕಾರ !

ಪ್ರತಿಪಕ್ಷ ನಾಯಕರಾದ ಶ್ರೀ @RAshokaBJP ಅವರು ಇಂದು ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗುಂಡಿ ಬಿದ್ದ ರಸ್ತೆಗಳನ್ನು ಗುರುತಿಸಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವೈಫಲ್ಯವನ್ನು ಪ್ರದರ್ಶಿಸಿದರು.

ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ @drashwathcn,… pic.twitter.com/fN4HPlf7yh

— BJP Karnataka (@BJP4Karnataka) November 8, 2025

ಗೋವಿಂದರಾಜನಗರ ಕ್ಷೇತ್ರದಲ್ಲೇ ಬಿಜೆಪಿ ನಾಯಕರು 17ನೇ ಮುಖ್ಯ ರಸ್ತೆಯಲ್ಲಿ ಮತ್ತೊಂದು ಬೃಹತ್ ರಸ್ತೆಗುಂಡಿಗೆ ಬಣ್ಣ ಬಳಿದು ಪ್ರೊಟೆಸ್ಟ್ ನಡೆಸಿದರು. ಇನ್ನೊಂದು ಕಡೆ ಅಪೂರ್ಣ ಒಳಚರಂಡಿ ಮತ್ತು ರಸ್ತೆ ಕಾಮಗಾರಿ ಸ್ಥಳಕ್ಕೂ ಭೇಟಿ ಕೊಟ್ಟು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ಕುಂಟುತ್ತಾ ಸಾಗುತ್ತಿರುವ ಕಾಮಗಾರಿಯ ಮೋರಿ ಮೇಲೆ ಪ್ಲೇಕಾರ್ಡ್ಗಳನ್ನು ಹಿಡಿದುಕೊಂಡು ಕೂತು ಬಿಜೆಪಿ ನಾಯಕರು ಪ್ರತಿಭಟಸಿದರು.

ಬಿಜೆಪಿ ನಾಯಕರ ಈ ಗುಂಡಿ ಮತ್ತು ಕಸದ ಚಳುವಳಿ ಇನ್ನೂ ಒಂದು ವಾರ ನಡೆಯಲಿದೆ. ಈ ಮೂಲಕ ಸರ್ಕಾರ ಮತ್ತು ಜಿಬಿಎಗೆ ಮುಜುಗರ ತರುವುದು ಬಿಜೆಪಿ ನಾಯಕರ ಉದ್ದೇಶವಾಗಿದೆ.ಇದನ್ನೂ ಓದಿ: ಕಬ್ಬು ಪ್ರತಿ ಟನ್‌ಗೆ 3,300 ರೂ.: ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

TAGGED:bjpcongressKarnataka govtpatholesಕರ್ನಾಟಕ ಸರ್ಕಾರಕಸಕಾಂಗ್ರೆಸ್ಬಿಜೆಪಿಬೆಂಗಳೂರುರಸ್ತೆಗುಂಡಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
3 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
4 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
5 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?