ಬೆಂಗಳೂರು: ಹುಬ್ಬಳ್ಳಿ ಕರಸೇವಕರ ಬಿಡುಗಡೆಗೆ ಆಗ್ರಹಿಸಿ ಬಿಜೆಪಿಯಿಂದ (BJP) ನಿತ್ಯ ಪ್ರತಿಭಟನೆ (Protest) ನಡೆಸಲು ಮುಂದಾಗಿದ್ದು ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಧರಣಿ ಕುಳಿತ ಕಾರ್ಕಳ ಶಾಸಕ ಸುನಿಲ್ ಕುಮಾರ್ (Sunil Kumar) ಅವರನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಮಸೀದಿಯವರು ನೀಡಿದ್ದೆಲ್ಲವನ್ನೂ ಮೈ ಮೇಲೆ ಹಾಕಿಕೊಳ್ಳುತ್ತಾರೆ, ದೇವಿ ದರ್ಶನಕ್ಕೆ ಸಮಯವಿಲ್ಲ: ಸಿದ್ದು ವಿರುದ್ಧ ಬಿಜೆಪಿ ಕಿಡಿ
Advertisement
ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಅರೆಸ್ಟ್ ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂಬ ವಿಭಿನ್ನ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಅವರು, ನಾನೂ ಕರಸೇವಕ. ನನ್ನನ್ನೂ ಬಂಧಿಸಿ ಎಂಬ ಪ್ಲೇ ಕಾರ್ಡ್ ಹಿಡಿದು ಏಕಾಂಗಿ ಪ್ರತಿಭಟನೆ ನಡೆಸುವ ಮೂಲಕ ಚಾಲನೆ ನೀಡಿದರು.
Advertisement
1992ರ ಡಿಸೆಂಬರ್ 6ರ ಅಯೋಧ್ಯೆ ರಾಮ ಮಂದಿರದ ಕರಸೇವಕ ನಾನು. ನನ್ನನ್ನು ಬಂಧಿಸಿ ಎಂದು ಧರಣಿ ನಡೆಸಿದರು. ಠಾಣೆಯ ಮುಂದೆ ಪ್ರತಿಭಟನೆಗೆ ಅವಕಾಶ ಇಲ್ಲದ ಕಾರಣ ಸುನಿಲ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಇದನ್ನೂ ಓದಿ: ಕರಸೇವಕರ ಅರೆಸ್ಟ್ ಮಾಡಿದ್ದ ಇನ್ಸ್‌ಪೆಕ್ಟರ್‌ಗೆ ಕಡ್ಡಾಯ ರಜೆ – ಪ್ರಶ್ನೆಗೆ ಕಾರಣವಾಯ್ತು ಸರ್ಕಾರದ ನಡೆ
Advertisement