– ಕೋಲ್ಕತ್ತಾ ಪೊಲೀಸ್ ಆಯುಕ್ತ ವಿಶ್ವದಲ್ಲಿಯೇ ನಂಬರ್ ಒನ್ ಅಧಿಕಾರಿ
ಕೋಲತ್ತಾ: ಬಿಜೆಪಿಯವರು ರಾಜಕೀಯ ಪ್ರಭಾವನ್ನು ಬಳಸಿ ನಿಷ್ಠಾವಂತ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುಡುಗಿದ್ದಾರೆ.
ಸಿಬಿಐ ಬಂಧನ ಭೀತಿಯಿಂದ ನಾಪತ್ತೆಯಾಗಿರುವ ಕೋಲ್ಕತ್ತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರ ಪರವಾಗಿ ಪ್ರತಿಕ್ರಿಯೆ ನೀಡಿರುವ ಮಮತಾ ಬ್ಯಾನರ್ಜಿ, ಬಿಜೆಪಿಯವರು ಕೇವಲ ರಾಜಕೀಯ ಪಕ್ಷಗಳ ಮೇಲೆ ಅಷ್ಟೇ ಅಲ್ಲದೆ, ಪೊಲೀಸ್ ಇಲಾಖೆಯ ಮೇಲೆ ಹಿಡಿತ ಸಾಧಿಸುತ್ತಿದ್ದಾರೆ. ಈ ಮೂಲಕ ದೇಶದ ಎಲ್ಲಾ ಇಲಾಖೆಗಳನ್ನು ನಾಶ ಮಾಡಲು ಮುಂದಾಗುತ್ತಿದ್ದಾರೆ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
The highest levels of the BJP leadership are doing the worst kind of political vendetta. Not only are political parties their targets, they are misusing power
to take control of the police and destroy all institutions. We condemn this 1/2
— Mamata Banerjee (@MamataOfficial) February 3, 2019
ಕೋಲ್ಕತ್ತಾ ಪೊಲೀಸ್ ಆಯುಕ್ತರು ವಿಶ್ವದಲ್ಲಿಯೇ ಅತ್ಯುತ್ತಮ ಪೊಲೀಸ್ ಅಧಿಕಾರಿ. ಅವರ ಸಮಗ್ರತೆ, ಧೈರ್ಯ ಹಾಗೂ ಪ್ರಾಮಾಣಿಕತೆ ಪ್ರಶ್ನಾತೀತವಾಗಿದೆ. ರಾಜೀವ್ ಕುಮಾರ್ 24*7 ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಒಂದೇ ಒಂದು ದಿನ ರಜೆ ಪಡೆದಿದ್ದಾರೆ. ನೀವು ಸುಳ್ಳು ಹರಿಬಿಡುತ್ತಿರುವಿರಿ. ಅದು ಮತ್ತಷ್ಟು ಸುಳ್ಳುಗಳನ್ನು ಹುಟ್ಟುಹಾಕುತ್ತಿದೆ ಎಂದು ಬಿಜೆಪಿ ವಿರುದ್ಧ ಗುಡುಗಿದ್ದಾರೆ.
ಆಯುಕ್ತರಿಗೆ ಬಂಧನ ಭೀತಿ ಯಾಕೆ?:
ರಾಜೀವ್ ಕುಮಾರ್ ಅವರು ಪಶ್ಚಿಮ ಬಂಗಾಳದ 1989ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದು ಸದ್ಯ ಕೋಲ್ಕತ್ತಾ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರೋಸ್ ವ್ಯಾಲಿ ಹಾಗೂ ಶಾರದಾ ಚಿಟ್ ಫಂಡ್ ಹಗರಣದ ತನಿಖೆಗೆ ಕೋಲ್ಕತ್ತಾ ಪೊಲೀಸ್ ವಿಶೇಷ ತಂಡ ರಚಿಸಿದೆ. ಆದರೆ ತನಿಖೆಯಲ್ಲಿ ರಾಜೀವ್ ಕುಮಾರ್ ಅವರು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಸಿಬಿಐ ನೋಟಿಸ್ ಜಾರಿ ಮಾಡಿತ್ತು.
The Kolkata Police Commissioner is among the best in the world. His integrity, bravery and honesty are unquestioned. He is working 24×7, and was on leave for only one day recently. When you spread lies, the lies
will always remain lies 2/2
— Mamata Banerjee (@MamataOfficial) February 3, 2019
ರಾಜೀವ್ ಕುಮಾರ್ ಅವರು ಚುನಾವಣಾ ಆಯೋಗದ ಸಭೆಗೂ ಹಾಜರಾಗದೇ ತಪ್ಪಿಸಿಕೊಂಡಿದ್ದರು. ಈ ಸಂಬಂಧ ವರದಿ ನೀಡುವಂತೆ ಕೇಂದ್ರ ಚುನಾವಣಾ ಆಯೋಗ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೇಳಿತ್ತು. ಆದರೆ ರಾಜೀವ್ ಅವರು ಯಾವುದೇ ಸ್ಪಷ್ಟನೆ ನೀಡಿಲ್ಲ. ಈ ನಡುವೆ ವಿಚಾರಣೆಗೆ ಹಾಜರಾಗುವಂತೆ ರಾಜೀವ್ ಕುಮಾರ್ ಅವರಿಗೆ ಸಿಬಿಐ ಸಮನ್ಸ್ ಮಾಡಿತ್ತು. ವಿಚಾರಣೆಗೆ ಹಾಜರಾಗದೇ ಇದ್ದರೆ ರಾಜೀವ್ ಕುಮಾರ್ ಅವರನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಸಿಬಿಐ ಮೂಲಗಳು ಆಧಾರಿಸಿ ಮಾಧ್ಯಮಗಳು ವರದಿ ಮಾಡಿದ್ದವು.
ಬಂಧನ ಭೀತಿಯಿಂದ ರಾಜೀವ್ ಕುಮಾರ್ ಅವರು ವಿಚಾರಣೆಗೆ ಹಾಜರಾಗದೆ ನಾಪತ್ತೆಯಾಗಿದ್ದಾರೆ. ಹೀಗಾಗಿ ಮಮತಾ ಬ್ಯಾನರ್ಜಿ ಅವರು ರಾಜೀವ್ ಕುಮಾರ್ ಅವರ ಬೆಂಬಲಕ್ಕೆ ನಿಂತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv