ಸೆಂಟ್ರಲ್ ವಿಸ್ತಾ ಯೋಜನೆ ವಿರೋಧಕ್ಕೆ ಕಾಂಗ್ರೆಸ್‌ಗೆ ಬಿಜೆಪಿ ಸರಣಿ ಟ್ವೀಟ್ ಏಟು..!

Public TV
1 Min Read
congresss bjp flag

ಬೆಂಗಳೂರು: ಪ್ರಧಾನಿ ಮೋದಿ ಸರ್ಕಾರ ‌ರೂಪಿಸುತ್ತಿರುವ ಸೆಂಟ್ರಲ್ ವಿಸ್ತಾ ಯೋಜನೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಮಾಡುತ್ತಿರುವುದೇನು? ತನ್ನದೇ ಆಡಳಿತವಿರುವ ರಾಜ್ಯಗಳಲ್ಲಿ ನೂರಾರು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಯೋಜನೆಗಳ ಬಗ್ಗೆ ಕಾಂಗ್ರೆಸ್ ಮಾತನಾಡುತ್ತಿಲ್ಲವೇಕೆ ಎಂದು ಬಿಜೆಪಿ ಟ್ವೀಟರ್ ಮೂಲಕ ಪ್ರಶ್ನಿಸಿದೆ.

ಸೆಂಟ್ರಲ್‌ ವಿಸ್ಟಾ ಯೋಜನೆ & ಕಾಂಗ್ರೆಸ್‌ ಪಕ್ಷ ಎಂದು ಇನ್ನೊಂದು ಟ್ವೀಟ್‌ನಲ್ಲಿ ರಾಜಸ್ಥಾನದಲ್ಲಿ 266 ಕೋಟಿ ರೂಪಾಯಿ ವೆಚ್ಚದಲ್ಲಿ ಶಾಸಕರ ಭವನ ನಿರ್ಮಾಣ, ಮಹಾರಾಷ್ಟ್ರದಲ್ಲಿ 900 ಕೋಟಿ ವೆಚ್ಚದಲ್ಲಿ ಶಾಸಕರ ವಸತಿ ನಿರ್ಮಾಣವಾಗುತ್ತಿದೆ. ಆದರೆ, ದೇಶದ ಪ್ರಜಾಪ್ರಭುತ್ವದ ಸಂಕೇತವಾಗಲಿರುವ ನೂತನ ಸಂಸತ್‌ ಭವನಕ್ಕೆ ಮಾತ್ರ ಕಾಂಗ್ರೆಸ್‌ ವಿರೋಧ ಮಾಡ್ತಿದೆ ಅಂತಾ ಟಾಂಗ್ ಕೊಟ್ಟಿದೆ.‌ ಇದನ್ನೂ ಓದಿ: ಸೈಕಲ್ ಗರ್ಲ್‍ಗೆ ಪ್ರಿಯಾಂಕಾ ವಾದ್ರಾ ನೆರವು

ಕಾಂಗ್ರೆಸ್‌ ಇಂದು ಏನನ್ನು ತಪ್ಪು ಎಂದು ಬಿಂಬಿಸುತ್ತಿದೆಯೋ ಆ ತಪ್ಪುಗಳನ್ನು ನೆಹರೂ ಕಾಲದಿಂದಲೂ ಮಾಡುತ್ತಲೇ ಬಂದಿದೆ. ನೆಹರೂ ಸ್ಮಾರಕ – 52 ಎಕರೆ, ಇಂದಿರಾ ಸ್ಮಾರಕ – 45 ಎಕರೆ, ರಾಜೀವ್‌ ಸಮಾಧಿ – 15 ಎಕರೆ, ಆದರೆ, ಇದಕ್ಕಿಂತ ಕಡಿಮೆ ಜಾಗ ವಿನಿಯೋಗವಾಗಲಿರುವ ಸೆಂಟ್ರಲ್‌ ವಿಸ್ಟಾ ಯೋಜನೆಗೆ ಕಾಂಗ್ರೆಸ್ ವಿರೋಧವೇಕೆ ಅಂತಾ ಖಾರವಾಗಿ ಟ್ವೀಟ್ ಮಾಡಿದೆ.

ಅಧಿಕಾರದಲ್ಲಿದ್ದಾಗ ‍‍ಮತ್ತು ಅಧಿಕಾರದಲ್ಲಿಲ್ಲದಿದ್ದಾಗ ಕಾಂಗ್ರೆಸ್ ಚಾಚೂ ತಪ್ಪದೆ ಮಾಡುವ ಒಂದೇ ಒಂದು ಕೆಲಸವೆಂದರೆ ದೇಶದ ಹಿತಾಸಕ್ತಿಯ ವಿರುದ್ಧ ಕಾರ್ಯಾಚರಿಸುವುದು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅಡ್ಡಿಪಡಿಸಿದ್ದ ಕಾಂಗ್ರೆಸ್‌ ಈಗ ನೂತನ ಸಂಸತ್‌ ಭವನಕ್ಕೆ ವಿರೋಧಿಸುತ್ತಿದೆ. ಇದು ಟೂಲ್‌ ಕಿಟ್‌ ಕಾಂಗ್ರೆಸ್ ಅಂತಾ ಛೇಡಿಸಿದೆ.

ದೇಶದಲ್ಲಿ ಕೋವಿಡ್ ಸಂಕಷ್ಟವಿದ್ದರೂ ಇಟಲಿಯಲ್ಲಿ ಕೋವಿಡ್ ಲಸಿಕೆ ನೀಡಲು ಆರಂಭಿಸಿದ ದಿನದಂದೇ ಕಾಂಗ್ರೆಸ್ ಯುವರಾಜ‌ ರಾಹುಲ್ ಗಾಂಧಿ ಇಟಲಿ ದೇಶಕ್ಕೆ ಪ್ರಯಾಣ ಬೆಳೆಸಿದ್ದರು.ಇಂತಹ ವ್ಯಕ್ತಿಗಳು ಇಂದು, ದೇಶ ಸಂಕಷ್ಟದಲ್ಲಿರುವಾಗ ಸೆಂಟ್ರಲ್ ವಿಸ್ಟಾದಂತಹ ಕಾಮಗಾರಿಗಳು ಅನಗತ್ಯ ಎನ್ನುವುದು ಹಾಸ್ಯಾಸ್ಪದ ಅಂತಾ ಬಿಜೆಪಿ ಟ್ವೀಟ್ ಏಟು ಕೊಟ್ಟಿದೆ.

Share This Article
Leave a Comment

Leave a Reply

Your email address will not be published. Required fields are marked *