ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ (Basavaraj Horatti) ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ (R.Ashok) ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಗೂಂಡಾಗಿರಿ ಮಾಡಿ ತಮ್ಮ ತಂಡ ಕಟ್ಟಿಕೊಂಡು ಹೋಗಿ ಬಲವಂತವಾಗಿ ಅವರ ರಾಜೀನಾಮೆ ಕೊಡಿಸಿದ್ದಾರೆ. ಕರ್ನಾಟಕಕ್ಕೆ ಇದು ದೊಡ್ಡ ಕಳಂಕ. ಈ ರೀತಿ ಘಟನೆ ರಾಜ್ಯ ರಾಜಕೀಯದಲ್ಲಿ ಹಿಂದೆ ನಡೆದಿಲ್ಲ. ಇದರ ವಿರುದ್ಧ ಹೋರಾಟ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಲ್ಲಿಕೆ


ಈ ಮೊದಲು ಮುಂಗಾರು ಅಧಿವೇಶನ ಆರಂಭವಾದ ಬಳಿಕ ಅಂದರೆ ಆಗಸ್ಟ್ 14 ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ತೀರ್ಮಾನಿಸಿದ್ದರು. ಆದರೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ (BK Hariprasad) ಅವರ ಸುದೀರ್ಘ ಮನವೊಲಿಕೆಯ ಬಳಿಕ ಅವರು ರಾಜೀನಾಮೆ ನಿರ್ಧಾರ ಕೈಗೊಂಡಿದ್ದಾರೆ.
ಯಾವುದೇ ಒತ್ತಡವಿಲ್ಲದೆ, ಸಂಪೂರ್ಣ ಸ್ವಇಚ್ಛೆಯಿಂದಲೇ ತಾವು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೊರಟ್ಟಿ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ನೂತನ ಸಭಾಪತಿ ಆಯ್ಕೆಯಾಗುವವರೆಗೆ ಬಸವರಾಜ ಹೊರಟ್ಟಿ ಅವರೇ ಹಂಗಾಮಿ ಸಭಾಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಇದನ್ನೂ ಓದಿ: ನೇಕಾರರಿಗೆ ಆರ್ಥಿಕ ಶಕ್ತಿ ತುಂಬಿದ ಮೋದಿ ಜೀ ಸರ್ಕಾರ: ವಿಜಯೇಂದ್ರ

