ಬೆಂಗಳೂರು: ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕುರಿತು ಕಾಂಗ್ರೆಸ್ ನಾಯಕರು ಉಡಾಫೆಯ ಮಾತುಗಳನ್ನಾಡ್ತಿದ್ದಾರೆ. ಆ ಮೂಲಕ ವಾಸ್ತವವನ್ನು ಒಪ್ಪಿಕೊಳ್ಳಲು ಕಾಂಗ್ರೆಸ್ ಹಿಂಜರಿಯುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್ ಮಾಡಿ ಟೀಕಿಸಿದೆ.
ಟ್ವೀಟ್‍ನಲ್ಲಿ ಏನಿದೆ?:
ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕುರಿತು ಕಾಂಗ್ರೆಸ್ ನಾಯಕರು ಉಡಾಫೆಯ ಮಾತುಗಳನ್ನಾಡುತ್ತಿದ್ದಾರೆ. ಆ ಮೂಲಕ ಕಾಶ್ಮೀರದಲ್ಲಿ ಹತ್ಯೆಯಾದ ಕಾಶ್ಮೀರಿ ಪಂಡಿತರ, ದಲಿತರ, ಮುಸಲ್ಮಾನರ ಹತ್ಯೆಯನ್ನು ತುಚ್ಛವಾಗಿಸುತ್ತಿದ್ದಾರೆ. ವಾಸ್ತವವನ್ನು ಒಪ್ಪಿಕೊಳ್ಳಲೂ ಕಾಂಗ್ರೆಸ್ ಹಿಂಜರಿಯುತ್ತಿದೆ. ಏಕೆಂದರೆ ಇದರ ರೂವಾರಿಗಳು ಅವರೇ ಆಗಿದ್ದಾರೆ. ವಿಧಾನ ಮಂಡಲದ ಉಭಯ ಸದನದಲ್ಲಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಗ್ಗೆ ಕಾಂಗ್ರೆಸ್ ಪ್ರತಿರೋಧ ತೋರುತ್ತಿದೆ. ಕಾಶ್ಮೀರಿ ಹಿಂದೂಗಳ ಹತ್ಯಾಕಾಂಡವನ್ನು ಕಾಂಗ್ರೆಸ್ ಪಕ್ಷ ಸಮರ್ಥಿಸುತ್ತಿದೆಯೇ ಎಂದು ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಹಿಜಬ್ ಪರ ವಾದಿಗಳ ಬೆದರಿಕೆಗೆ ಸರ್ಕಾರ ಮಣಿಯದು: ಅಶ್ವತ್ಥನಾರಾಯಣ
ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ಕುರಿತು @INCKarnataka ನಾಯಕರು ಉಡಾಫೆಯ ಮಾತುಗಳನ್ನಾಡುವ ಮೂಲಕ ಕಾಶ್ಮೀರದಲ್ಲಿ ಹತ್ಯೆಯಾದ ಕಾಶ್ಮೀರಿ ಪಂಡಿತರ, ದಲಿತರ, ಮುಸಲ್ಮಾನರ ಹತ್ಯೆಯನ್ನು ತುಚ್ಛವಾಗಿಸುತ್ತಿದ್ದಾರೆ.
ವಾಸ್ತವವನ್ನು ಒಪ್ಪಿಕೊಳ್ಳಲೂ ಕಾಂಗ್ರೆಸ್ ಹಿಂಜರಿಯುತ್ತಿದೆ ಏಕೆಂದರೆ ಇದರ ರೂವಾರಿಗಳು ಅವರೇ ಆಗಿದ್ದಾರೆ.#TheKashmirFiles
— BJP Karnataka (@BJP4Karnataka) March 16, 2022
ಕಾಂಗ್ರೆಸ್ ಪಕ್ಷ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಏಕೆ ವಿರೋಧಿಸುತ್ತಿದೆ ಗೊತ್ತೇ? ಕಾಶ್ಮೀರ ಪ್ರತ್ಯೇಕತಾವಾದಿಗಳಿಗೆ, ಕಾಶ್ಮೀರಿ ಹಿಂದೂಗಳ ಹತ್ಯಾಕಾಂಡ ನಡೆಸಿದವರಿಗೆ, ಸೇನಾಪಡೆಗಳ ಮೇಲೆ ದಾಳಿ ನಡೆಸಿದವರಿಗೆ ಕಾಂಗ್ರೆಸ್ ಹತ್ತಿರವಾಗಿತ್ತು. ಸಾಕ್ಷ್ಯ ಇಲ್ಲಿದೆ, ಮಾಜಿ ಪ್ರಧಾನಿ ಭಯೋತ್ಪಾದಕನೊಂದಿಗೆ ಸಂವಾದ ನಡೆಸುತ್ತಿರುವ ಕ್ಷಣಗಳು!!! ಎಂದು ವೀಡಿಯೋವೊಂದನ್ನು ಹಂಚಿಕೊಂಡಿದೆ. ಈ ಮೂಲಕ ಬಿಜೆಪಿ ಕಾಂಗ್ರೆಸ್ ಮೇಲೆ ಆರೋಪ ಮಾಡಿದೆ.