ಬೆಂಗಳೂರು: ಕರ್ನಾಟಕವನ್ನು ಸರ್ಕಾರ ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಎಂದು ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಬಿಜೆಪಿ (BJP) ಆಕ್ರೋಶ ಹೊರಹಾಕಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಗೃಹ ಸಚಿವ ಪರಮೇಶ್ವರ್ ಆದಿಯಾಗಿ ಎಲ್ಲರೂ ಸೆರೆಸಿಕ್ಕ ಉಗ್ರರಿಗೆ ಅಮಾಯಕ ಪಟ್ಟ ಕಟ್ಟಿದ್ದರು. ಇದರ ಪರಿಣಾಮ ಬೆಂಗಳೂರಿನ (Bengaluru) ಶಾಲೆಗಳು (School) ಬಾಂಬ್ ಬೆದರಿಕೆಯನ್ನು ಎದುರಿಸುವಂತಹ ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಸರ್ಕಾರ ಬಂದ ಆರು ತಿಂಗಳಲ್ಲಿ ಬೆಲೆ ಏರಿಕೆ ಜೊತೆ ಮತಾಂಧರ ಸಂಖ್ಯೆ ಸಹ ಏರಿದೆ ಎಂದು ಬಿಜೆಪಿ ಎಕ್ಸ್‌ನಲ್ಲಿ ಬರೆದುಕೊಂಡಿದೆ. ಇದನ್ನೂ ಓದಿ: ಎಲ್ಲಾ ಶಾಲೆಗಳಲ್ಲೂ ಬಾಂಬ್ ನಿಷ್ಕ್ರಿಯ ದಳ ತಪಾಸಣೆ ನಡೆಸುತ್ತಿದೆ: ಪೊಲೀಸ್ ಆಯುಕ್ತರು
ಶಾಂತಿ ನೆಮ್ಮದಿಯ ತವರೂರಾಗಿದ್ದ ಕರ್ನಾಟಕದಲ್ಲಿ ಭದ್ರತಾ ವೈಫಲ್ಯಗಳೇ ಜಾಸ್ತಿಯಾಗುತ್ತಿದೆ. ಈಗ ಶಾಲೆಗಳಿಗೆ ಬೆದರಿಕೆ ಬಂದಿರುವುದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ಚಾಟಿ ಬೀಸಿದೆ.
ಬೆಂಗಳೂರಿನ ಸುಮಾರು 70 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಇರಿಸಿದ್ದಾಗಿ ಬೆದರಿಕೆಯ ಇ-ಮೇಲ್‍ಗಳು ಬಂದಿದ್ದವು. ಇದರಿಂದ ವಿದ್ಯಾರ್ಥಿಗಳ ಪೋಷಕರು ಹಾಗೂ ಶಾಲಾ ಶಿಕ್ಷಕರು ಆತಂಕಕ್ಕೊಳಗಾಗಿದ್ದರು. ಈ ಸಂಬಂಧ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಎಲ್ಲಾ ಶಾಲೆಗಳಿಗೂ ತೆರಳಿ ಪರಿಶೀಲನೆ ನಡೆಸಿತ್ತು. ಯಾವ ಶಾಲೆಗಳಲ್ಲೂ ಬಾಂಬ್ ಪತ್ತೆಯಾಗಿರಲಿಲ್ಲ. ಇದನ್ನೂ ಓದಿ: Bengaluru Bomb Threat: ಶಾಲೆಗಳು, ದೇವಸ್ಥಾನಗಳಿಗೆ ಭದ್ರತೆ ಒದಗಿಸುತ್ತೇವೆ – ಸಿಎಂ