ಶಿವಮೊಗ್ಗ: ಶಿವಮೊಗ್ಗ ಲೋಕಸಭಾ (Shivamogga Lok Sabha) ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ (K.S.Eshwarappa) ಇಂದು (ಶುಕ್ರವಾರ) ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮೊದಲು ರಾಮಣ್ಣಶ್ರೇಷ್ಠಿ ಪಾರ್ಕ್‌ನ ಗಣಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಕೆ ಬಳಿಕ ರಾಮಣ್ಣಶ್ರೇಷ್ಠಿ ಪಾರ್ಕ್‌ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿದರು. ಇದನ್ನೂ ಓದಿ: ದೇವೇಗೌಡರ ಕುಟುಂಬ ಹಿಂದಿನಿಂದಲೂ ಡಿಕೆಶಿ ಮೇಲೆ ಹಗೆತನ ಸಾಧಿಸುತ್ತಿದೆ: ಡಿ.ಕೆ.ಸುರೇಶ್
Advertisement
Advertisement
ರಾಮಣ್ಣಶ್ರೇಷ್ಠಿ ಪಾರ್ಕ್‌ನಿಂದ ಆರಂಭವಾದ ಮೆರವಣಿಗೆಗೆ ಈಶ್ವರಪ್ಪ ಅವರು ಪಾಂಚಜನ್ಯ ಮೊಳಗಿಸುವ ಮೂಲಕ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತದ್ರೂಪಿ ವ್ಯಕ್ತಿಯೊಬ್ಬರು ಭಾಗವಹಿಸುವ ಮೂಲಕ ಕಾರ್ಯಕರ್ತರಲ್ಲಿ ಅಚ್ಚರಿ ಮೂಡಿಸಿದರು. ಅಲ್ಲದೇ ಮೆರವಣಿಗೆಗೆ ಜನಪದ ಕಲಾತಂಡಗಳು ಮೆರುಗು ನೀಡಿದವು.
Advertisement
Advertisement
ಮೆರವಣಿಗೆ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಈಶ್ವರಪ್ಪ ಅವರ ಭಾವಚಿತ್ರದ ಫ್ಲೆಕ್ಸ್‌ಗಳು ರಾರಾಜಿಸಿದವು. ಈಶ್ವರಪ್ಪ ಹಾಗೂ ಮೋದಿ ಪರ ಘೋಷಣೆ ಕೂಗಿದರು. ನಂತರ ಚುನಾವಣಾಧಿಕಾರಿಗೆ ಪತ್ನಿ ಹಾಗೂ ಬೆಂಬಲಿಗರ ಜೊತೆ ತೆರಳಿ ಉಮೇದುವಾರಿಕೆ ಸಲ್ಲಿಕೆ ಮಾಡಿದರು. ನಂತರ ಮಾತನಾಡಿದ ಈಶ್ವರಪ್ಪ, ಈ ಬಾರಿ ಕ್ಷೇತ್ರದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತಿದೆ. ಗೆಲ್ಲುವ ವಿಶ್ವಾಸ ಇದೆ ಎಂದರು. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬರ್ ಬಂಧನ- NIA, ಪೊಲೀಸರಿಗೆ ಪರಮೇಶ್ವರ್ ಅಭಿನಂದನೆ