ಬೀದರ್: ಗಡಿ ಜಿಲ್ಲೆಯಲ್ಲಿ ಬಿಜೆಪಿ (BJP) ರೆಬಲ್ಸ್ ಟೀಂ ಇಂದಿನಿಂದ ವಕ್ಫ್ ವಿರುದ್ಧ ಹೋರಾಟ ಆರಂಭಿಸಲಿದೆ. ʻವಕ್ಫ್ ಹಠಾವೋ ಭಾರತ್ ದೇಶ್ ಬಚಾವೋʼ ಘೋಷವಾಕ್ಯದಡಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅಂಡ್ ಟೀಂ ಹೋರಾಟ ನಡೆಸಲಿದೆ.
Advertisement
ಇಂದು ಬೆಳಗ್ಗೆ 9 ಗಂಟೆ ವೇಳೆಗೆ ನಗರದ ಝರಣಿ ನರಸಿಂಹ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ವಕ್ಫ್ ವಿರುದ್ಧ ಹೋರಾಟ ಶುರು ಮಾಡಲಿದೆ. ಈ ಹೋರಾಟ ಡಿಸೆಂಬರ್ 1ರ ವರೆಗೆ ಐದು ಜಿಲ್ಲೆಗಳಲ್ಲಿ ನಡೆಯಲಿದೆ. ಅಲ್ಲದೇ ಚಳಿಗಾಲದ ಅಧಿವೇಶನದಲ್ಲಿ ವಕ್ಫ್‌ನಿಂದಾಗಿರುವ ಸಮಸ್ಯೆಗಳ ಕುರಿತು ಗಮನ ಸೆಳೆಯಲಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ, ಮಾಜಿ ಸಂಸದ ಪ್ರತಾಪ್ ಸಿಂಹ, ಜಿ.ಎಂ ಸಿದ್ದೇಶ್ವರ್, ಹೊಳಲ್ಕೆರೆ ಚಂದ್ರಪ್ಪ ಸೇರಿ ಹಲವರು ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ‘ಮಹಾಯುತಿ’ ವಿಜಯ – ಎನ್‌ಡಿಎ ಮೈತ್ರಿಕೂಟ ಪ್ರಮಾಣ ವಚನ ನಾಳೆ?
Advertisement
Advertisement
ನರಸಿಂಹ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ, ಬೀದರ್ ತಾಲೂಕಿನ ಧರ್ಮಾಪುರ, ಚಟ್ನಳ್ಳಿ ಗ್ರಾಮಗಳಿಗೆ ರೆಬಲ್ಸ್ ಟೀಂ ಭೇಟಿ ನೀಡಲಿದೆ. ಅಲ್ಲಿ ವಕ್ಫ್‌ನಿಂದ ತೊಂದರೆಗೆ ಒಳಗಾದ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಲಿದೆ. ಕೆಲ ದಿನಗಳ ಹಿಂದೆಯಷ್ಟೇ 26 ಎಕ್ರೆಯ ಇಡೀ ಗ್ರಾಮವೇ ವಕ್ಫ್ ಆಸ್ತಿ ಎಂದು ಪಹಣಿಯಲ್ಲಿ ನಮೂದಾಗಿತ್ತು, ಇದರಿಂದ ಜನ ಕಂಗಾಲಾಗಿದ್ದರು. ಹಾಗಾಗಿ ಇಲ್ಲಿನ ಜನರೊಟ್ಟಿಗೆ ರೆಬಲ್ಸ್ ಟೀಂ ಸಮಾಲೋಚನೆ ನಡೆಸಲಿದೆ.
Advertisement
ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೀದರ್‌ನ ಗಣೇಶ ಮೈದಾನದಲ್ಲಿ ಸಭೆ ನಡೆಸಿ ರೈತರು, ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಲಿದೆ. ನಂತರ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ನಡೆಸಿ ಕಚೇರಿಗೆ ಮುತ್ತಿಗೆ ಹಾಕುವ ಸಾಧ್ಯತೆಗಳಿವೆ. ಸಂಜೆ 4 ಗಂಟೆಗೆ ಬೀದರ್ ತಾಲೂಕಿನ ಚಟ್ನಳ್ಳಿ ಗ್ರಾಮಕ್ಕೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಲಿದೆ. ಸುಮಾರು 300 ರೈತ ಕುಟುಂಬಗಳ 960 ಎಕರೆ ಜಮೀನಿನಲ್ಲಿ ವಕ್ಫ್ ಹೆಸರು ಉಲ್ಲೇಖವಾಗಿದ್ದ ಚಟ್ನಳ್ಳಿ ಗ್ರಾಮಕ್ಕೆ ರೆಬಲ್ಸ್ ಟೀಂ ಭೇಟಿ ನೀಡಲಿದೆ. ಇದನ್ನೂ ಓದಿ: ನಿಖಿಲ್ ಗೆಲ್ಲಿಸಲು ಆಗದಿದ್ದ ಮೇಲೆ ಯಾಕೆ ಕಣಕ್ಕೆ ಇಳಿಸಿದ್ರು: ಹೆಚ್‌ಡಿಕೆ ವಿರುದ್ಧ ದೇವೇಗೌಡ ಗರಂ
ಬಿಜೆಪಿ ಶಾಸಕರಿಂದಲೇ ಬೆಂಬಲಕ್ಕೆ ಹಿಂದೇಟು?
ವಕ್ಫ್ ಮಂಡಳಿ ವಿರುದ್ಧ ಬೀದರ್‌ನಿಂದ ಆರಂಭವಾಗಲಿರುವ ಯತ್ನಾಳ್ ನೇತೃತ್ವದ ಹೋರಾಟದಲ್ಲಿ ಜಿಲ್ಲೆಯ ಬಿಜೆಪಿ ಶಾಸಕರು ಪಾಲ್ಗೊಳ್ಳುವ ಸಾಧ್ಯತೆ ಎಂದು ಹೇಳಲಾಗುತ್ತಿದೆ. ಇದು ಬಿಜೆಪಿ ಅಧಿಕೃತ ಕಾರ್ಯಕ್ರಮ ಅಲ್ಲ, ಪಕ್ಷದಿಂದ ಯಾವುದೇ ಸಂದೇಶ ಬಂದಿಲ್ಲ. ಹಾಗಾಗಿ ಶಾಸಕರಾದ ಶರಣು ಸಲಗರ, ಡಾ. ಸಿದ್ದು ಪಾಟೀಲ್, ಡಾ. ಶೈಲೇಂದ್ರ, ಬೆಲ್ದಾಳೆ ಈಗಾಗಲೇ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಜ್ಯದಲ್ಲಿ ಹಣ, ಹೆಂಡ ಹಂಚಿಕೆಯಲ್ಲಿ ಬಿಜೆಪಿಗೆ ಕಾಂಗ್ರೆಸ್ ಪೈಪೋಟಿ ನೀಡಿದೆ: ಚರ್ಚೆಗೆ ಗ್ರಾಸವಾಯ್ತು ಬಿಕೆ ಹರಿಪ್ರಸಾದ್ ಮಾತು