ನವದೆಹಲಿ: ಉತ್ತರ ಪ್ರದೇಶದ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದ್ದು, ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಶಿ ಅವರಿಗೆ ಸ್ಥಾನ ನೀಡಿಲ್ಲ.
ಉತ್ತರ ಪ್ರದೇಶದಲ್ಲಿ ಲೋಕಸಭಾ ಚುನಾವಣೆಗಾಗಿ ಪ್ರಚಾರ ಮಾಡಲು ಬಿಜೆಪಿಯು 40 ಜನ ತಾರಾ ಪ್ರಚಾರಕರನ್ನು ಆಯ್ಕೆ ಮಾಡಿದೆ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಉಪಾಧ್ಯಕ್ಷೆ ಉಮಾ ಭಾರತಿ, ಗೃಹಸಚಿವ ರಾಜನಾಥ್ ಸಿಂಗ್, ಸಚಿವರಾದ ನಿತಿನ್ ಗಡ್ಕರಿ, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್ ಸ್ಥಾನ ಪಡೆದಿದ್ದಾರೆ. ಈಗ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಜೋಶಿ ಮತ್ತು ಅಡ್ವಾಣಿಯವರಿಗೆ ಸ್ಥಾನ ನೀಡಿಲ್ಲ.
Advertisement
Advertisement
ಬಿಜೆಪಿ ಹೈಕಮಾಂಡ್ 75 ವರ್ಷಕ್ಕಿಂತ ಹೆಚ್ಚು ವಯಸ್ಸಾದ ನಾಯಕರನ್ನು ರಾಷ್ಟ್ರೀಯ ಚುನಾವಣೆಗೆ ನಿಲ್ಲದಂತೆ ಸೂಚಿಸಿದೆ. ಈ ಬಗ್ಗೆ ಕಾನ್ಪುರ ಜನತೆಗೆ ಪತ್ರ ಬರೆದಿರುವ ಮುರಳಿ ಮನೋಹರ್ ಜೋಶಿ ಅವರು, ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಲಾಲ್ ಅವರು ನನ್ನನ್ನು ಭೇಟಿ ಮಾಡಿ, ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸದಿರುವಂತೆ ಸೂಚಿಸಿದ್ದಾರೆ. ಕಾನ್ಪುರ ಮಾತ್ರವಲ್ಲ ಬೇರೆ ಯಾವುದೇ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಬಾರದು ಎಂದು ಹೇಳಿದ್ದಾರೆ. ಆದರಿಂದ ನಾನು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ತಿಳಿಸಿದ್ದಾರೆ.
Advertisement
ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ ಮೇಲೆ 75 ವರ್ಷ ಮೇಲ್ಪಟ್ಟ ಬಿಜೆಪಿ ನಾಯಕರಿಗೆ ಮಾರ್ಗದರ್ಶಕ ಮಂಡಳಿಯಲ್ಲಿ ಸ್ಥಾನ ನೀಡಲಾಗಿತ್ತು. ಅಟಲ್ ಬಿಹಾರಿ ವಾಜಪೇಯಿ, ಅಡ್ವಾಣಿ, ಮುರಳಿ ಮನೋಹರ್ ಜೋಷಿ ಈ ಮಾರ್ಗದರ್ಶನ ಮಂಡಳಿಯಲ್ಲಿ ಸ್ಥಾನ ಪಡೆದಿದ್ದರು.
Advertisement
91 ವರ್ಷದ ಅಡ್ವಾಣಿ ಅವರು ಗುಜರಾತ್‍ನ ಗಾಂಧಿನಗರ ಕ್ಷೇತ್ರದಿಂದ ಸ್ಪರ್ಧಿಸಿ 5 ಬಾರಿ ಸಂಸತ್ ಪ್ರವೇಶಿಸಿದ್ದರು. 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರ ವಹಿಸಿಕೊಂಡ ಬಳಿಕ ಅಡ್ವಾಣಿ ಅವರನ್ನು ಕಡೆಗಣಿಸಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಸಂಸತ್ ಸದಸ್ಯರಾಗಿ ಅಡ್ವಾಣಿ ಅವರು ಕಳೆದ ಐದು ವರ್ಷಗಳಲ್ಲಿ ಶೇ.92 ರಷ್ಟು ಹಾಜರಾತಿಯನ್ನು ಹೊಂದಿದ್ದಾರೆ. ಆದರೆ ಕೇವಲ 365 ಪದಗಳನ್ನು ಮಾತ್ರವೇ ಸಂಸತ್‍ನಲ್ಲಿ ಮಾತನಾಡಿದ್ದಾರೆ. ಈ ಬಾರಿ ಗಾಂಧಿನಗರ ಕ್ಷೇತ್ರದಿಂದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಣಕ್ಕೆ ಇಳಿದಿದ್ದಾರೆ.
1991ರಿಂದಲೂ ಗುಜರಾತ್‍ನ ಗಾಂಧಿನಗರದಿಂದ ಅಡ್ವಾಣಿ ಸತತ 5 ಬಾರಿ ಆಯ್ಕೆಯಾಗಿದ್ದರು. ಅಲ್ಲದೇ 2014ರ ವರೆಗೂ ಕೂಡ ಅಧಿಕ ಮತಗಳಿಂದ ಜಯಗಳಿಸಿದ ಸ್ಥಾನದಲ್ಲಿ ಅಡ್ವಾಣಿ ಮೊದಲಿಗರು. ವಿಶೇಷ ಏನೆಂದರೆ 1998ರಲ್ಲಿ 2.77 ಲಕ್ಷ ಮತಗಳಿಂದ ಗೆಲುವು ಪಡೆದಿದ್ದರು. ಕಳೆದ 2014ರ ಲೋಕಸಭಾ ಚುನಾವಣೆಯಲ್ಲಿ 7,73,539 ಮತ ಪಡೆದಿದ್ದರು. ಅಲ್ಲದೇ ಎದುರಾಳಿ ಕಾಂಗ್ರೆಸ್ ಪಕ್ಷದ ಈಶ್ವರಭಾಯಿ ಪಟೇಲ್ ಕೇವಲ 2,90,419 ಮತಗಳನ್ನು ಮಾತ್ರ ಪಡೆದಿದ್ದರು. ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಅಮಿತ್ ಶಾ ಗಾಂಧೀನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸರ್ಕೇಜ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿದ್ದರು.