– 40 ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿರೋ ಪ್ರಮುಖರು ಯರ್ಯಾರು?
ಬೆಂಗಳೂರು: ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಸ್ಟಾರ್ ಪ್ರಚಾರಕರ (BJP Star Campaigners) ಪಟ್ಟಿ ಪ್ರಕಟವಾಗಿದೆ.
Advertisement
ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ 40 ಬಿಜೆಪಿ ನಾಯಕರಿಗೆ ಸ್ಥಾನ ನೀಡಲಾಗಿದೆ. ಬಿಜೆಪಿ ಪಟ್ಟಿಯಲ್ಲಿ ಬಿಜೆಪಿ ಭಿನ್ನರ ಹೆಸರು ಇಲ್ಲ. ಬಸನಗೌಡ ಪಾಟೀಲ್ ಯತ್ನಾಳ್, ಪ್ರತಾಪ್ ಸಿಂಹ, ಕುಮಾರ್ ಬಂಗಾರಪ್ಪ, ರಮೇಶ್ ಜಾರಕಿಹೊಳಿಗೆ ಕೊಕ್ ನೀಡಲಾಗಿದೆ. ಅರವಿಂದ ಲಿಂಬಾವಳಿ, ಸಂಸದ ಜಿ.ಎಂ.ಸಿದ್ದೇಶ್ವರ ಹೆಸರಿಗೂ ಹೈಕಮಾಂಡ್ ಕೊಕ್ ಕೊಟ್ಟಿದೆ. ಇದನ್ನೂ ಓದಿ: 500 ವರ್ಷಗಳಲ್ಲಿ ಮೊದಲ ಬಾರಿಗೆ ರಾಮ ಅಯೋಧ್ಯೆಯಲ್ಲಿ ದೀಪಾವಳಿ ಆಚರಿಸುತ್ತಿದ್ದಾನೆ – ಧನ್ತೇರಾಸ್ಗೆ ಮೋದಿ ಶುಭಾಶಯ
Advertisement
Advertisement
ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿರೋ ಪ್ರಮುಖರು ಯಾರು?
ಬಿ.ಎಸ್.ಯಡಿಯೂರಪ್ಪ, ರಾಧ ಮೋಹನ್ ದಾಸ್, ಬಿ.ವೈ.ವಿಜಯೇಂದ್ರ, ಆರ್.ಅಶೋಕ್, ಛಲವಾಧಿ ನಾರಾಯಣಸ್ವಾಮಿ, ಡಿ.ವಿ.ಸದಾನಂದಗೌಡ, ಬಸವರಾಜ್ ಬೊಮ್ಮಾಯಿ, ಪ್ರಹ್ಲಾದ್ ಜೋಶಿ, ನಳಿನ್ ಕುಮಾರ್ ಕಟೀಲ್, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಸಿ.ಎನ್.ಮಂಜುನಾಥ್, ಜಗ್ಗೇಶ್ಗೆ ಪಟ್ಟಿಯಲ್ಲಿದ್ದಾರೆ.
Advertisement
ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮೈಸೂರು ಸಂಸದ ಯದುವೀರ್ ಒಡೆಯರ್ ಹಾಗೂ ಮಾಜಿ ಸಂಸದೆ ಸುಮಲತಾ ಹೆಸರುಗಳನ್ನೂ ಹೈಕಮಾಂಡ್ ಕೈಬಿಟ್ಟಿದೆ. ಯದುವೀರ್ ಹೆಸರು ಕೈಬಿಡುವ ಮೂಲಕ ಅಚ್ಚರಿ ಮೂಡಿಸಿದೆ. ಈಗಾಗಲೇ ಕುಮಾರಸ್ವಾಮಿ ಮನವಿ ಮೇರೆಗೆ ಚನ್ನಪಟ್ಟಣದಲ್ಲಿ ಯದುವೀರ್ ಪ್ರಚಾರ ನಡೆಸಿದ್ದರು. ಸುಮಲತಾ ಅವರು ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿರುವ ಕಾರಣ ಪಟ್ಟಿಯಲ್ಲಿ ಹೆಸರು ಸೇರಿಸಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ‘ಮೈತ್ರಿ’ ನಾಯಕರಿಗೆ ಡಿಕೆ ಬ್ರದರ್ಸ್ ಶಾಕ್ – ಚನ್ನಪಟ್ಟಣ ನಗರಸಭೆಯ 6 ಬಿಜೆಪಿ ಸದಸ್ಯರು ಕಾಂಗ್ರೆಸ್ ಸೇರ್ಪಡೆ