ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗಾಗಿ ʻಸಂಕಲ್ಪ ಪತ್ರʼ (ಪ್ರಣಾಳಿಕೆ) ಬಿಡುಗಡೆ ಮಾಡಿರುವ ಬಿಜೆಪಿ ಹಲವು ಗ್ಯಾರಂಟಿಗಳನ್ನ ಘೋಷಣೆ ಮಾಡಿದೆ.
इनका (AAP का) मोहल्ला क्लीनिक भ्रष्टाचार का अड्डा और लोगों की आंखों में धूल झोंकने वाला कार्यक्रम है।
इनके मोहल्ला क्लीनिक में फ्रॉड लैब टेस्ट हुए हैं और 300 करोड़ रुपये का स्कैम हुआ है।
हमारी सरकार आने पर इन सबकी जांच की जाएगी।
– श्री @JPNadda
पूरा वीडियो देखें:… pic.twitter.com/9kSWdCsnDu
— BJP (@BJP4India) January 17, 2025
ಫೆ.5ರಂದು ನಡೆಯಲಿರುವ ಚುನಾವಣೆ ಹಿನ್ನೆಲೆ ಕೇಂದ್ರ ಸಚಿವರೂ ಆಗಿರುವ ಪಕ್ಷದ ರಾಷ್ಟ್ರೀಯ ಜೆ.ಪಿ ನಡ್ಡಾ ಅವರು ಸಂಕಲ್ಪ ಪತ್ರ ಬಿಡುಗಡೆಗೊಳಿಸಿದರು. ಅಲ್ಲದೇ ಆಡಳಿತಾರೂಢ ಆಪ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಲೇ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಭರವಸೆಗಳನ್ನು ಈಡೇರಿಸುವುದಾಗಿ ಆಶ್ವಾಸನೆ ನೀಡಿದರು. ಇದನ್ನೂ ಓದಿ: 500 ರೂ.ಗೆ ಗ್ಯಾಸ್ ಸಿಲಿಂಡರ್, 300 ಯೂನಿಟ್ ವಿದ್ಯುತ್ ಉಚಿತ – ದೆಹಲಿ ಚುನಾವಣೆಗೆ `ಕೈ’ ಗ್ಯಾರಂಟಿ
हम भाजपा के संकल्प में इस बात को जोड़ते हैं कि दिल्ली में महिला समृद्धि योजना के तहत प्रतिमाह ₹2,500 हर महिला को दिए जाएंगे।
गरीब बहनों को सिलेंडर पर ₹500 की सब्सिडी दी जाएगी और होली एवं दीवाली पर एक-एक सिलेंडर मुफ्त दिया जाएगा।
मातृ सुरक्षा वंदना को और ताकत देने के लिए 6… pic.twitter.com/jg7Fyst2Ce
— Jagat Prakash Nadda (@JPNadda) January 17, 2025
ಮಹಿಳೆಯರಿಗೆ 6 ಪೌಷ್ಠಿಕಾಂಶ ಕಿಟ್‌ಗಳು, ಗರ್ಭಿಣಿಯರಿಗೆ 21,000 ರೂ. ನೀಡಲಾಗುವುದು. ಅಲ್ಲದೇ ಮಹಿಳಾ ಸಮೃದ್ಧಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೆರವು, 500 ರೂ. ಗೆ ಎಲ್‌ಪಿಜಿ ಸಿಲಿಂಡರ್ ನೀಡುವುದಾಗಿ ಘೋಷಿಸಿದರು. ಇದರೊಂದಿಗೆ 60-70 ವರ್ಷ ವಯಸ್ಸಿನ ಹಿರಿಯ ನಾಗರಿಕರಿಗೆ 2,500 ರೂ. ಮತ್ತು 70 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾಸಿಕ 3,000 ರೂ. ನೆರವು ನೀಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: ಕುಂಭಮೇಳದಲ್ಲಿ 7 ಅಡಿ ಎತ್ತರದ ರಷ್ಯಾದ ಬಾಬಾ – ‘ಪರಶುರಾಮನ ಅವತಾರ’ ಎಂದ ಭಕ್ತರು
झुग्गी-झोपड़ी में रहने वाले हमारे भाई – बहनों, निर्धन वर्ग को मुख्यधारा में लाने के साथ ही व्यापारी वर्ग, मध्यवर्गीय वर्ग समेत हर वर्ग से दिल्ली के कोने – कोने में जाकर चर्चा कर हमने दिल्ली का संकल्प-पत्र बनाया है। pic.twitter.com/PokT3HPNRY
— Jagat Prakash Nadda (@JPNadda) January 17, 2025
ಅಲ್ಲದೇ ಪಕ್ಷ ಅಧಿಕಾರಕ್ಕೆ ಬಂದರೆ, ಮೊದಲ ಸಂಪುಟ ಸಭೆಯಲ್ಲೇ ಆಯುಷ್‌ಮಾನ್ ಭಾರತ್ ಯೋಜನೆ ಜಾರಿಗೆ ಒಪ್ಪಿಗೆ ನೀಡಲಾಗುವುದು ಜೊತೆಗೆ ಹೆಚ್ಚುವರಿಯಾಗಿ ಆರೋಗ್ಯ ರಕ್ಷಣೆಗಾಗಿ 5 ಲಕ್ಷ ರೂ. ನೀಡಲಾಗುವುದು. 500 ರೂ.ಗೆ ಎಲ್‌ಪಿಜಿ ಸಿಲಿಂಡರ್ ನೀಡುವ ಜೊತೆಗೆ ಹೋಳಿ ಮತ್ತು ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ 1 ಉಚಿತ ಸಿಲಿಂಡರ್ ನೀಡಲಾಗುವುದು ಎಂದು ಗ್ಯಾರಂಟಿ ನೀಡಿದರು.
ಇದೇ ವೇಳೆ ಆಪ್ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ನಡ್ಡಾ, ಬಿಜೆಪಿಯ ಪ್ರಣಾಳಿಕೆ ದೆಹಲಿಯ ಅಭಿವೃದ್ಧಿಗೆ ಅಡಿಪಾಯ ಎಂದು ಬಣ್ಣಿಸಿದರು. ಇದನ್ನೂ ಓದಿ: ಕುಂಭಮೇಳದಲ್ಲಿ ಪಾಲ್ಗೊಳ್ಳಲು 50 ವರ್ಷದ ವ್ಯಕ್ತಿಯಿಂದ ಸೈಕಲ್‌ನಲ್ಲಿ 1,100 ಕಿಮೀ ಪ್ರಯಾಣ