ದುಶ್ಯಾಸನ ರೀತಿ ಹೆಣ್ಣು ಮಗಳ ಸೆರಗು ಎಳೆದವರು ಯಾರು – ಸಿದ್ದರಾಮಯ್ಯ ಟ್ವೀಟ್ ಗೆ ಬಿಜೆಪಿ ಪ್ರಶ್ನೆ

Public TV
2 Min Read
bjp tweet

ಬೆಂಗಳೂರು: ಉತ್ತರ ಪ್ರದೇಶ ಸಿಎಂ ಯೋಗಿ ಅದಿತ್ಯನಾಥ್ ಅವರನ್ನು ಟೀಕಿಸಿ ಟ್ವೀಟ್ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ತಿರುಗೇಟು ನೀಡಿದೆ.

ಕರ್ನಾಟಕದಲ್ಲಿ ಒಬ್ಬರು ಬಿಳಿ ಅಂಗಿ ಬಿಳಿ ಪಂಚೆ ತೊಟ್ಟ ಮಾಜಿ ಮುಖ್ಯಮಂತ್ರಿ ಇದ್ದಾರೆ. ನೋಡೋಕೆ ತುಂಬಾ ಸಂಭಾವಿತರ ರೀತಿ ಕಾಣುತ್ತಾರೆ ಆದರೆ ಸಭೆ ಸಮಾರಂಭಗಳಲ್ಲಿ ದುಶ್ಯಾಸನ ತರ ಹೆಣ್ಣುಮಕ್ಕಳ ಸೆರಗು ಎಳೆಯುತ್ತಾರೆ. ಸಾಮಾನ್ಯರ ತರ ಕಾಣುತ್ತಾರೆ ಆದರೆ ಕೋಟಿ ಬೆಲೆ ಬಾಳೋ ವಾಚ್ ಕಟ್ಟುತ್ತಾರೆ. ಯಾರಿವರು ಗೊತ್ತೇ ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿ ಪ್ರಶ್ನಿಸಿದೆ. ಇದನ್ನೂ ಓದಿ:ಕುಂಕುಮಧಾರಿಯನ್ನ ನೋಡಿದಾಗ ಭಯ ಹುಟ್ಟದೆ, ಗೌರವ ಹುಟ್ಟುತ್ತಾ: ಸಿದ್ದರಾಮಯ್ಯ ಪ್ರಶ್ನೆ

ಸಿದ್ದರಾಮಯ್ಯ ಉತ್ತರ ಪ್ರದೇಶದಲ್ಲೊಬ್ಬರು ಬಿಜೆಪಿಯ ಮುಖ್ಯಮಂತ್ರಿ ಇದ್ದಾರೆ. ಮೈತುಂಬಾ ಕಾವಿ ಬಟ್ಟೆ, ಮುಖತುಂಬಾ ಕುಂಕುಮ ಬಳಿದುಕೊಳ್ಳುತ್ತಾರೆ. ಆದರೆ ಅವರ ವಿರುದ್ಧ ಹತ್ತಾರು ಕ್ರಿಮಿನಲ್ ಕೇಸ್ ಗಳಿವೆ. ಈ ಕುಂಕುಮಧಾರಿಯನ್ನು ನೋಡಿದಾಗ ಜನರಿಗೆ ಭಯ ಹುಟ್ಟದೆ, ಗೌರವ ಹುಟ್ಟುತ್ತಾ ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಅನ್ನು ಬಿಜೆಪಿ ಕರ್ನಾಟಕ ರಿಟ್ವೀಟ್ ಮಾಡಿ ಈ ಮೇಲಿನ ಪ್ರಶ್ನೆಯನ್ನು ಕೇಳಿದೆ. ಇದನ್ನೂ ಓದಿ:ಸಿದ್ದರಾಮಯ್ಯ ವಿರುದ್ಧ ಬಿಜೆಪಿ ತಿಲಕ ಅಭಿಯಾನ

ಕುಂಕುಮ ನಾಮ, ಕಾವಿ ಬಟ್ಟೆಗಳೆಲ್ಲ ಭಾರತೀಯ ಧಾರ್ಮಿಕ ಪರಂಪರೆಯ ಭಾಗ, ಅದಕ್ಕೊಂದು ಪಾವಿತ್ರ್ಯ ಇತ್ತು. ಆದರೆ ಯಾವಾಗ ಬಿಜೆಪಿ ನಾಯಕರೆಲ್ಲ ಇವುಗಳನ್ನೆಲ್ಲ ರಾಜಕೀಯಕ್ಕೆ ದುರುಪಯೋಗ ಮಾಡಿಕೊಳ್ಳಲು ಹೊರಟರೋ, ಅದ ನಂತರ ಕುಂಕುಮ,ಕಾವಿ ಹಾಕಿಕೊಂಡವರನ್ನು ಜನತೆ ಸಂಶಯ-ಭಯದಿಂದ ನೋಡುವಂತಾಗಿದೆ. ಹೌದು, ತಿಲಕ ಇಟ್ಟುಕೊಂಡವರನ್ನು ನೋಡಿದರೆ ಭಯವಾಗುತ್ತೆ ಎಂದು ಹೇಳಿರುವುದು ನಿಜ. ಬಹಳಷ್ಟು ಕ್ರಿಮಿನಲ್ ಗಳು ತಮ್ಮ ರಕ್ಷಣೆಗಾಗಿ ತಿಲಕ ಧರಿಸಿ ಮೆರೆದಾಡುತ್ತಿದ್ದಾರೆ. ಇವರು ಧರ್ಮದ್ರೋಹಿಗಳು ಮಾತ್ರವಲ್ಲ, ಸಮಾಜ ದ್ರೋಹಿಗಳು ಕೂಡಾ. ಅವರನ್ನು ದೃಷ್ಟಿಯಲ್ಲಿಟ್ಟುಕೊಂಡೇ ಹೇಳಿದ್ದು ಏನಿವಾಗ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರು. ಇದನ್ನೂ ಓದಿ:ಇವರು ತಿಲಕವಿಟ್ಟುಕೊಂಡ ಹಿಂದೂಗಳನ್ನು ಕಂಡರೆ ಗಾಬರಿಯಾಗುವ ನಮ್ಮ ಸಿದ್ದಣ್ಣ: ಅನಂತ್ ಕುಮಾರ್ ಹೆಗ್ಡೆ ವ್ಯಂಗ್ಯ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article