ಸ್ಕ್ಯಾನ್‌ಮಾಡಿ `ಸಿದ್ರಾಮುಲ್ಲನ ಉಗ್ರಭಾಗ್ಯ’ ಲೀಲೆ ನೋಡಿ – PayCM ಅಭಿಯಾನಕ್ಕೆ ಬಿಜೆಪಿ ಟಕ್ಕರ್

Public TV
2 Min Read
SIDDARAMAIAH

ಬೆಂಗಳೂರು: ಕಾಂಗ್ರೆಸ್‌ನಿಂದ (Congress) ನಡೆಯುತ್ತಿರುವ ಪೇ-ಸಿಎಂ (PayCM) ಅಭಿಯಾನಕ್ಕೆ ಟಕ್ಕರ್ ಕೊಡಲು ಬಿಜೆಪಿ (BJP) ಸಿದ್ದರಾಮಯ್ಯ (Siddaramaiah) ವಿರುದ್ಧ ಪೋಸ್ಟರ್ ರಿಲೀಸ್ ಮಾಡಿದೆ.

ಪಿಎಫ್‌ಐ ಭಾಗ್ಯ (PFI Bhagya) ಹ್ಯಾಟ್‌ಟ್ಯಾಗ್‌ನೊಂದಿಗೆ `ಸಿದ್ರಾಮುಲ್ಲಮನ ಉಗ್ರಭಾಗ್ಯ ಲೀಲೆಗಳನ್ನು ತಿಳಿಯಲು ಕ್ಯೂಆರ್‌ಕೋಡ್ ಸ್ಕ್ಯಾನ್‌ ಮಾಡಿ ಎಂದು ಸಿದ್ದರಾಮಯ್ಯ ಅವರು ಪಿಎಫ್‌ಐ (PFI) ಚಿನ್ಹೆ ಹಿಡಿದಿರುವಂತೆ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ. ಈ ಕ್ಯೂರ್ ಕೋಡ್ ಸ್ಕ್ಯಾನ್‌  ಮಾಡಿದರೆ ಪಿಎಫ್‌ಐ ಕಾರ್ಯಕರ್ತರನ್ನು ಬಿಡುಗಡೆ ಮಾಡಿದ ಸುದ್ದಿಗಳಿರುವ ಪೇಜ್ ಕಾಣಿಸುತ್ತದೆ.

ಟ್ವೀಟ್‌ನಲ್ಲಿ ಏನಿದೆ?
`ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಈ ಪರಿಯ ಒಂಟಿತನ ಯಾವತ್ತೂ ಕಾಡಿರಲಾರದು. ಪಿಎಫ್‌ಐ ಸ್ನೇಹಿತರು ಜೈಲಿಗೆ ಹೋದಾಗಿನಿಂದ ಸಿದ್ದರಾಮಯ್ಯ ಅವರು ಒಬ್ಬಂಟಿಯಾಗಿದ್ದಾರೆಯೇ? ಜಿಹಾದಿಗಳ ಜೊತೆ ಕಾಂಗ್ರೆಸ್ (Congress) ಹೊಂದಿರುವ ಸಂಬಂಧ ತಿಳಿಯಲು ಈ ಕ್ಯೂಆರ್‌ಕೋಡ್ (QR Code)  ‌ಸ್ಕ್ಯಾನ್‌ ಮಾಡಿ. ಇದನ್ನೂ ಓದಿ: ಔಷಧಿ ನಕಲಿಯೋ? ಅಸಲಿಯೋ? – ಇನ್ಮುಂದೆ ನೀವೇ ಚೆಕ್ ಮಾಡಬಹುದು

ಇತ್ತ ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರು ಪಿಎಫ್‌ಐ ಜಿಹಾದಿಗಳನ್ನು ಸಂಬಂಧಿಗಳಂತೆ ಸಾಕುತ್ತಿದ್ದರೆ, ಅತ್ತ ಕಾಂಗ್ರೆಸ್ ಪಕ್ಷ ಕಾಶ್ಮೀರದ ಕಣಿವೆಯಲ್ಲಿ ಉಗ್ರರನ್ನು ಬೆಂಬಲಿಸುತ್ತಿತ್ತು. ಜಿಹಾದಿಗಳ ಜೊತೆ ಕಾಂಗ್ರೆಸ್ ಹೊಂದಿರುವ ನಂಟಿನ ಬಗ್ಗೆ ತಿಳಿಯಲು ಈ ಕೆಳಗಿನ ಕ್ಯುಆರ್ ಕೋಡ್ ಸ್ಕ್ಯಾನ್‌ ಮಾಡಿ.

ತುಕಡೆ ತುಕಡೆ ಗ್ಯಾಂಗಿನ ನಾಯಕರಾಗಿರುವ ರಾಹುಲ್ ಗಾಂಧಿ (Rahul Gandhi) ಹಾಗೂ ಜಿಹಾದಿ ಬೆಂಬಲಿಗ ಸಿದ್ದರಾಮಯ್ಯಅವರ ಪ್ರೀತಿ ಹಾಲು ಜೇನಿನಂತೆ. ಜಿಹಾದಿಗಳ ಜೊತೆ ಕಾಂಗ್ರೆಸ್ ಹೊಂದಿರುವ ನಂಟಿನ ಬಗ್ಗೆ ತಿಳಿಯಲು ಈ ಕೆಳಗಿನ ಕ್ಯುಆರ್ ಕೋಡ್ ಸ್ಕ್ಯಾನ್‌ ಮಾಡಿ ಎಂದು ಕುಟುಕಿದೆ. ಇದನ್ನೂ ಓದಿ: ದಸರಾ ಸಂಭ್ರಮ – 85 ದೇಶಗಳ 1.50 ಲಕ್ಷ ಭಕ್ತರಿಂದ ಪ್ರಾರ್ಥನೆ

ಇದರೊಂದಿಗೆ ಭಾರತ್ ಜೋಡೋ ಯಾತ್ರೆ ಹಿನ್ನೆಲೆ ಸೋನಿಯಾಗಾಂಧಿ ಆಗಮನವನ್ನು ಟೀಕಿಸಿದ್ದು, `ನ್ಯಾಷನಲ್ ಹೆರಾಲ್ಡ್ ಪ್ರಕರಣದ ಆರೋಪಿ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ (Sonia Gandhi) ಅವರಿಗೆ ಕರ್ನಾಟಕಕ್ಕೆ ಸ್ವಾಗತ. ಜಾಮೀನಿನ ಮೇಲೆ ಜೈಲಿನಿಂದ ಹೊರಗಿರುವ ಸೋನಿಯಾ ಆಗಮನದಿಂದ ಜೈಲುಹಕ್ಕಿ ಡಿಕೆಶಿ (DK Shivakumar) ಹಾಗೂ ಭ್ರಷ್ಟರಾಮಯ್ಯ ಅವರಿಗೆ ಶಕ್ತಿ ಬಂದಿದ್ದು ಸುಳ್ಳಲ್ಲ. ಭ್ರಷ್ಟರೆಲ್ಲ ಒಂದೆಡೆ ಸೇರುವಾಗ ಹುರುಪು, ಶಕ್ತಿ ಸಹಜವಾದದ್ದೇ’ ಎಂದು ಲೇವಡಿ ಮಾಡಿದೆ.

ಪ್ರಧಾನಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ 34 ಕೋಟಿ ಪರಿಶಿಷ್ಟ ಸಮುದಾಯದ ಫಲಾನುಭವಿಗಳು ತಲಾ 10 ಲಕ್ಷ ಸಾಲ ಪಡೆಯುತ್ತಿದ್ದಾರೆ. ಶ್ರೀಮಂತರ ಪರವಾದ ಸರ್ಕಾರ ಎನ್ನುವ ನಿರುದ್ಯೋಗಿ ರಾಹುಲ್ ಗಾಂಧಿ ಅವರಿಗೆ ಇದೆಲ್ಲಾ ಏಕೆ ಕಾಣಿಸುತ್ತಿಲ್ಲ? ಅಂಬಾನಿ ಅದಾನಿಗಳೆಲ್ಲಾ ಮೋದಿ ಸರ್ಕಾರದ ಅವಧಿಯಲ್ಲಿ ಶ್ರೀಮಂತರಾಗಿದ್ದೇ? ಎಂದು ಬಿಜೆಪಿ ಟ್ವೀಟ್ ಮೂಲಕ ಪ್ರಶ್ನಿಸಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *