ನವದೆಹಲಿ: ಪತ್ರಕರ್ತೆ ವಿಚಾರವಾದಿ ಗೌರಿ ಲಂಕೇಶ್ ಹತ್ಯೆಯ ಹಿಂದೆ ಸಂಘ ಪರಿವಾರ ವ್ಯಕ್ತಿಗಳ ಕೈವಾಡ ಇದೆ ಎಂದು ಆರೋಪಿಸಿದ್ದಕ್ಕೆ ಇತಿಹಾಸಕಾರ ರಾಮಚಂದ್ರ ಗುಹಾ ಅವರಿಗೆ ಕರ್ನಾಟಕ ಬಿಜೆಪಿಯು ಲೀಗಲ್ ನೋಟಿಸ್ ಕಳುಹಿಸಿದೆ.
ಬಿಜೆಪಿ ಯುವ ಮೋರ್ಚಾದ ಕಾಯದರ್ಶಿ ಕರುಣಾಕರ್ ಅವರು ಲೀಗಲ್ ನೋಟಿಸ್ ಕಳುಹಿಸಿದ್ದು, ಮೂರು ದಿನಗಳ ಒಳಗಡೆ ಈ ಹೇಳಿಕೆಗೆ ಸಂಬಂಧಿಸಿದಂತೆ ಕ್ಷಮೆ ಕೇಳದೇ ಇದ್ದಲ್ಲಿ ಸಿವಿಲ್ ಮತ್ತು ಕ್ರಿಮಿನಲ್ ಕೇಸ್ ಗಳನ್ನು ಹಾಕಲಾಗುವುದು ಎಂದು ಹೇಳಿದ್ದಾರೆ.
ಪನ್ಸಾರೆ, ದಾಂಬೋಲ್ಕರ್, ಕಲ್ಬುರ್ಗಿ ಅವರನ್ನು ಹತ್ಯೆಗೈದ ಸಂಘಪರಿವಾರದವರಿಂದಲೇ ಗೌರಿ ಲಂಕೇಶ್ ಹತ್ಯೆ ಆಗಿದ್ದಾರೆ ಎಂದು ರಾಮಚಂದ್ರ ಗುಹಾ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು. ಈ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಬಿಜೆಪಿ ಈಗ ಲೀಗಲ್ ನೋಟಿಸ್ ಕಳುಹಿಸಿದೆ.
ಇದನ್ನೂ ಓದಿ: ವಿಕ್ರಮ್ ಗೌಡ ಮುಗ್ಧ, ಗೌರಿಯನ್ನು ಕೊಲೆ ಮಾಡಲು ಸಾಧ್ಯವಿಲ್ಲ: ನೂರ್ ಶ್ರೀಧರ್