ನವದೆಹಲಿ: ಹಿಮಾಚಲ ಪ್ರದೇಶ, ಗುಜರಾತ್ ಚುನಾವಣೆ (Gujarat Election) ಅಂತ್ಯವಾದ ಬೆನ್ನಲ್ಲೇ ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳ ಬಗ್ಗೆ ಚರ್ಚಿಸಲು ಬಿಜೆಪಿ (BJP) ರಾಷ್ಟ್ರೀಯ ಪದಾಧಿಕಾರಿಗಳು ಸಭೆ ನಡೆಸುತ್ತಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ನೇತೃತ್ವದಲ್ಲಿ ದೆಹಲಿಯ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯುತ್ತಿದೆ.
Advertisement
ಈ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi), ಗೃಹ ಸಚಿವ ಅಮಿತ್ ಶಾ (Amit Shah) ಕೂಡಾ ಭಾಗಿಯಾಗಿದ್ದು, ಹಲವು ರಾಜ್ಯಗಳ ರಾಜ್ಯಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಪ್ರಮುಖ ಪದಾಧಿಕಾರಿಗಳು ಭಾಗಿಯಾಗಿದ್ದಾರೆ. ಮಧ್ಯಪ್ರದೇಶ, ಕರ್ನಾಟಕ, ರಾಜಸ್ಥಾನ, ತ್ರಿಪುರ ವಿಧಾನಸಭೆ ಚುನಾವಣೆಗಳು ಹಾಗೂ 2024ರ ಲೋಕಸಭೆ ಚುನಾವಣೆ (Parliament Election 2024) ತಯಾರಿ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ಕ್ಯಾಚ್ ಕೈಚೆಲ್ಲಿದ ಸುಂದರ್‌ಗೆ ಕೆಟ್ಟದಾಗಿ ಬೈದ ರೋಹಿತ್ – ನೆಟ್ಟಿಗರ ಆಕ್ರೋಶ
Advertisement
Advertisement
ವಿಧಾನಸಭೆ ಚುನಾವಣೆ ಮುಂಬರುವ ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ಯೋಜನೆಗಳನ್ನು ಜಾರಿ ಮಾಡುವುದು, ಫಲಾನುಭವಿಗಳನ್ನು ಗುರುತಿಸುವುದು, ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವುದು ಸೇರಿ ಹಲವು ವಿಚಾರಗಳ ಬಗ್ಗೆ ಸಮಾಲೋಚನೆ ನಡೆಯಲಿದೆ. ಇದನ್ನೂ ಓದಿ: ಸ್ಯಾಂಡಲ್‌ವುಡ್ ನಟ ಮನದೀಪ್ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
Advertisement
2024 ಲೋಕಸಭೆ ಚುನಾವಣೆ ದೃಷ್ಟಿಯಿಂದ ಈ ರಾಜ್ಯಗಳಲ್ಲಿ ಅಧಿಕಾರ ಹಿಡಿಯುವುದು ಮುಖ್ಯವಾಗಿರುವ ಹಿನ್ನಲೆ ಹಿಮಾಚಲ, ಗುಜರಾತ್ ಬೆನ್ನಲ್ಲೇ ಬಾಕಿ ರಾಜ್ಯಗಳ ಚುನಾವಣೆಗೆ ಸಜ್ಜಾಗಿರುವ ಬಿಜೆಪಿ ಹೈಕಮಾಂಡ್ ಬಾಕಿ ನಾಯಕರಿಗೆ ಬೇರೆ ಬೇರೆ ಟಾಸ್ಕ್ಗಳನ್ನು ನೀಡಲಿದೆ.