ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಾಮ ಇಟ್ಕೊಂಡವರನ್ನು ಕಂಡ್ರೆ ಭಯ ಆಗುತ್ತೆ ಎಂಬ ಹೇಳಿಕೆಯನ್ನು ನೀಡಿದ್ದು, ಇದೀಗ ಸಿದ್ದರಾಮಯ್ಯ ಅವರ ಹೇಳಿಕೆ ವಿರುದ್ಧ ಬಿಜೆಪಿ ‘ತಿಲಕದೊಂದಿಗೆ ಸೆಲ್ಫಿ’ ಎಂಬ ಅಭಿಯಾನ ಶುರು ಮಾಡಿದೆ.
ಸಂಸದೆ ಶೋಭಾ ಕರಂದ್ಲಾಜೆ ತಮ್ಮ ಟ್ವಿಟ್ಟರಿನಲ್ಲಿ, ಹಣೆಗೆ ತಿಲಕವಿಟ್ಟು ಸೆಲ್ಫಿ ತೆಗೆಸಿಕೊಂಡಿರುವ ಫೋಟೋವನ್ನು ಹಾಕಿ ಅದಕ್ಕೆ, “ತಿಲಕಕ್ಕೂ, ರಾಜಕೀಯಕ್ಕೂ ಸಂಬಂಧವಿಲ್ಲ. ಅದು ಭಾರತ ಸಂಸ್ಕೃತಿಯ ಭಾಗ, ತಿಲಕದ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ಬರೆದುಕೊಂಡಿದ್ದಾರೆ.
Advertisement
https://twitter.com/ShobhaBJP/status/1103205304840278016
Advertisement
ಶೋಭಾ ಟ್ವೀಟ್‍ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, “ತಿಲಕ ಇಟ್ಟುಕೊಂಡು ದೇವಸ್ಥಾನಕ್ಕೆ ಹೋಗುವವರು ನಿಜವಾದ ದೈವ ಭಕ್ತರು. ತಿಲಕ ಇಟ್ಟುಕೊಂಡು ಸೆಲ್ಫಿಗೆ ಮುಖ ಒಡ್ಡುವವರು ಕ_ಭಕ್ತರು” ಎಂದು ರೀ-ಟ್ವೀಟ್ ಮಾಡಿ ಶೋಭಾ ಅವರಿಗೆ ತಿರುಗೇಟು ನೀಡಿದ್ದಾರೆ.
Advertisement
ತಿಲಕ ಇಟ್ಕೊಂಡು ದೇವಸ್ಥಾನಕ್ಕೆ ಹೋಗುವವರು ನಿಜವಾದ ದೈವ ಭಕ್ತರು.
ತಿಲಕ ಇಟ್ಕೊಂಡು ಸೆಲ್ಪಿಗೆ ಮುಖ ಒಡ್ಡುವವರು ಕ_ಭಕ್ತರು. pic.twitter.com/ABbFrmo2wt
— Siddaramaiah (@siddaramaiah) March 6, 2019
Advertisement
ಸಿದ್ದರಾಮಯ್ಯ ತನ್ನ ಟ್ವಿಟ್ಟರಿನಲ್ಲಿ, ಬಿಜೆಪಿಯಯವರು ಕುಂಕುಮ ನಾಮ, ಕಾವಿ ಬಟ್ಟೆಗಳನ್ನು ದುರಪಯೋಗ ಮಾಡಿಕೊಂಡಿದ್ದರಿಂದ ಸಾಮಾನ್ಯ ಜನರು ಕುಂಕುಮಧಾರಿಯನ್ನು ನೋಡಿದಾಗ ಭಯ ಹುಟ್ಟದೆ, ಗೌರವ ಹುಟ್ಟುತ್ತಾ ಎಂದು ಟ್ಟಿಟ್ಟರ್ ನಲ್ಲಿ ಪ್ರಶ್ನೆ ಮಾಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv