ಶನಿವಾರ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ; ಲೋಕಸಭಾ ಚುನಾವಣೆ, ಕಾಂಗ್ರೆಸ್ ವಿರುದ್ಧ ಪ್ರಚಾರ ಕಾರ್ಯತಂತ್ರ: ವಿಜಯೇಂದ್ರ

Public TV
2 Min Read
B.Y Vijayendra

ಬೆಂಗಳೂರು: ಜ.27 (ಶನಿವಾರ) ಬೆಂಗಳೂರಿನ (Bengaluru) ಅರಮನೆ ಮೈದಾನದಲ್ಲಿ (Palace Ground) ರಾಜ್ಯ ಬಿಜೆಪಿ (BJP) ವಿಶೇಷ ಕಾರ್ಯಕಾರಿಣಿ ನಡೆಯಲಿದೆ. ರಾಜ್ಯಾಧ್ಯಕ್ಷ ಆಗಿ ವಿಜಯೇಂದ್ರ (BY Vijayendra) ನೇಮಕವಾದ ತರುವಾಯ ನಡೆಯುತ್ತಿರುವ ಮೊದಲ ರಾಜ್ಯ ಕಾರ್ಯಕಾರಿಣಿ ಸಭೆ ಇದಾಗಿದೆ.

ನಗರದ ಅರಮನೆ ಮೈದಾನದಲ್ಲಿ ಸಭೆ ಕುರಿತು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಭೆಯಲ್ಲಿ 900ಕ್ಕೂ ಹೆಚ್ಚು ಆಹ್ವಾನಿತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಮುಂದಿನ ಲೋಕಸಭಾ ಚುನಾವಣೆಯನ್ನು (Lok Sabha Election) ಗಮನದಲ್ಲಿ ಇಟ್ಟುಕೊಂಡು ಸಭೆ ನಡೆಯಲಿದೆ. ರಾಜ್ಯದಲ್ಲಿರುವ ಬಡವರು, ರೈತರು ಮತ್ತು ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಗಳನ್ನು ಕೈಗೆತ್ತಿಕೊಳ್ಳಬೇಕು. ಬಡವರ ವಿರೋಧಿ ಸರ್ಕಾರದ ಬಗ್ಗೆ ಜನರಿಗೆ ಸತ್ಯಾಂಶಗಳನ್ನು ತಲುಪಿಸಬೇಕು ಎಂದು ಯೋಜಿಸಿದ್ದೇವೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ, ಯಾರೇ ಹೋದರೂ ಪಕ್ಷಕ್ಕೆ ನಷ್ಟವಾಗದು: ಡಿಕೆಶಿ

NARENDRA MODI 4

ಕೇಂದ್ರದಲ್ಲಿ ನರೇಂದ್ರ ಮೋದಿಯವರ (Narendra Modi) ನೇತೃತ್ವದ ಸರ್ಕಾರದ ಕಾರ್ಯಕ್ರಮಗಳಿಂದ ದೇಶಾದ್ಯಂತ ಜನತೆ ಮೋದಿಜೀ ಪರವಾಗಿದ್ದಾರೆ. ಕೇಂದ್ರದ ಯೋಜನೆಗಳನ್ನು ಮನೆಮನೆಗೆ ತಲುಪಿಸಲು ಉದ್ದೇಶಿಸಲಾಗಿದೆ. ಮೋದಿಜೀ ಅವರ ಜನಪ್ರಿಯತೆಯನ್ನು ಮತವನ್ನಾಗಿ ಪರಿವರ್ತಿಸಿ ಕರ್ನಾಟಕವು ದಕ್ಷಿಣ ಭಾರತ ಬಿಜೆಪಿ ಹೆಬ್ಬಾಗಿಲು ಎಂದು ಸಾಬೀತು ಪಡಿಸುತ್ತೇವೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಅಂಬೇಡ್ಕರ್ ಆಶಯದಂತೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ: ಹರೀಶ್ ಪೂಂಜಾ

ಎಲ್ಲಾ ವಿಷಯಗಳ ಸಮಾಲೋಚನೆ ಮಾಡಿ, ಮುಂದಿನ ಲೋಕಸಭಾ ಚುನಾವಣೆಗೆ ಬೇಕಾದ ಕಾರ್ಯತಂತ್ರವನ್ನು, ಕಾರ್ಯಕ್ರಮಗಳನ್ನು ರೂಪಿಸುತ್ತೇವೆ ಎಂದು ಪ್ರಕಟಿಸಿದರು. ಕೇಂದ್ರ ಸಚಿವ ಭೂಪೇಂದ್ರ ಯಾದವ್ ಜೀ ಅವರು ನಾಳೆ ಕಾರ್ಯಕಾರಿಣಿ ಉದ್ಘಾಟಿಸುತ್ತಾರೆ. ಪಕ್ಷದ ಎಲ್ಲಾ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳು ವೇದಿಕೆ ಮೇಲೆ ಇರುತ್ತಾರೆ. ಅವರ ಮಾರ್ಗದರ್ಶನದಲ್ಲಿ ಪಕ್ಷ ಮುನ್ನಡೆಸುವ ಕುರಿತು ಚರ್ಚಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಬಿಹಾರದಲ್ಲಿ ಮತ್ತೆ ಸಿಎಂ ಆಗ್ತಾರಾ ನಿತೀಶ್?

28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿ ಇದೆ. ರಾಜ್ಯದಾದ್ಯಂತ ನರೇಂದ್ರ ಮೋದಿಜೀ ಅವರ ಪರವಾದ ಅಲೆ ಇದೆ. ಹಾಗಾಗಿ ಈ ವಿಚಾರದಲ್ಲಿ ನನಗೆ ವಿಶ್ವಾಸ ಇದೆ. ಮೋದಿಜೀ ಅವರ ನಾಯಕತ್ವ ಮತ್ತು ಬಿಜೆಪಿ ತತ್ವ, ಸಿದ್ಧಾಂತ ಒಪ್ಪಿ ಬರುವ ಯಾವುದೇ ನಾಯಕರನ್ನು ಪಕ್ಷಕ್ಕೆ ಸ್ವಾಗತ ಮಾಡುತ್ತೇವೆ ಎಂದರು. ಇದನ್ನೂ ಓದಿ:  ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಮಲ ಪ್ರದರ್ಶಿಸಿದ ಮಕ್ಕಳು – ಶಾಸಕ ಶಿವಲಿಂಗೇಗೌಡ ಗರಂ

ಜಗದೀಶ್ ಶೆಟ್ಟರ್ ಅವರ ಮನಸ್ಸು ಬಿಜೆಪಿಯಲ್ಲೇ ಇತ್ತು. ಮೋದಿಜೀ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಅಪೇಕ್ಷೆಯೂ ಇತ್ತು. ಅಪೇಕ್ಷೆಗೆ ತಕ್ಕಂತೆ ಉತ್ತಮ ನಿರ್ಧಾರ ಮಾಡಿದ್ದಾರೆ. ಯಾವ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ ಎಂಬ ಕುರಿತು ಕೇಂದ್ರದ ವರಿಷ್ಠರು ನಿರ್ಧಾರ ಮಾಡುತ್ತಾರೆ. ಪಕ್ಷದ ಕಾರ್ಯಕರ್ತರ ನಿರೀಕ್ಷೆಗೆ ಅನುಗುಣವಾಗಿ ಈ ನಿರ್ಧಾರ ಇರಲಿದೆ ಎಂದು ತಿಳಿಸಿದರು. ಇದನ್ನೂ ಓದಿ: 2024ರಲ್ಲಿ ಅಣು ಬಾಂಬ್ ಸ್ಫೋಟಗೊಳ್ಳುವ ಸಾಧ್ಯತೆ ಇದೆ: ಕೋಡಿಮಠ ಸ್ವಾಮೀಜಿ ಭವಿಷ್ಯ

Share This Article