– ನಾನು ಸಹ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದ ಮಾಜಿ ಸಚಿವ
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಜನವರಿಯಲ್ಲಿ ಬದಲಾಗುವ ನಿರೀಕ್ಷೆ ಇದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ (Kumar Bangarappa) ಅಭಿಪ್ರಾಯಪಟ್ಟಿದ್ದಾರೆ.ಇದನ್ನೂ ಓದಿ: ಒಂದು ದೇಶ ಒಂದು ಚುನಾವಣೆ ಮಸೂದೆ ಈ ಬಾರಿ ಮಂಡನೆಯಾಗುವುದು ಅನುಮಾನ
Advertisement
Advertisement
ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷರು ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದರಿಂದ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರ ಸ್ಥಾನ ಖಾಲಿಯಾಗುವ ನಿರೀಕ್ಷೆ ಇದೆ. ನಾನು ಸಹ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಹೇಳಿದರು.
Advertisement
ಬಿಜೆಪಿಯಲ್ಲಿ ನಡೆಯುತ್ತಿರುವ ಭಿನ್ನಮತ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ರಾಜ್ಯ ಬಿಜೆಪಿಯ ಭಿನ್ನಮತದ ಬಗ್ಗೆ ಕೇಂದ್ರದ ವರಿಷ್ಠರು ಗಮನಹರಿಸಿದ್ದಾರೆ. ಶೀಘ್ರವಾಗಿ ತೀಕ್ಷ÷್ಣವಾದ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಕಳೆದ 30 ವರ್ಷದಿಂದ ರಾಜಕಾರಣದಲ್ಲಿ ಇದ್ದೇನೆ. ಕಾಂಗ್ರೆಸ್ ಅಹಿಂದ ಸಂಘಟನೆಯಾಗಿದ್ದು, ಅದಕ್ಕೆ ವಿರುದ್ಧವಾಗಿ ಹಾಗೂ ಬಿಜೆಪಿ ಒಬಿಸಿ ಸಂಘಟನೆಗೆ ಹೆಚ್ಚು ಒತ್ತು ನೀಡುವ ಸಲುವಾಗಿ ಒಬಿಸಿ ನಾಯಕರಿಗೆ ಹೆಚ್ಚು ಒತ್ತು ನೀಡಬೇಕಾಗಿದೆ. ಒಬಿಸಿ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ವಿಚಾರ ಬಂದರೆ ನನ್ನನ್ನು ಪರಿಗಣಿಸಿ ಎಂದಿದ್ದೇನೆ. ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗಬಹುದು ಎಂಬ ನಿರೀಕ್ಷೆ ಇದೆ. ಏನು ಆಗಲಿದೆ ಕಾದು ನೋಡಬೇಕಿದೆ ಎಂದು ತಿಳಿಸಿದರು.ಇದನ್ನೂ ಓದಿ: ಮಾಣಿಪ್ಪಾಡಿ ಹೇಳಿರುವ ವಿಡಿಯೋ ಆಧಾರದ ಮೇಲೆ ಮಾತನಾಡಿದ್ದೇನೆ- ಸಿಎಂ