Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್ಸಿಗರ ಭಾರತ ಬಿಟ್ಟು ಓಡೋ ಯಾತ್ರೆ: ನಳೀನ್ ಕುಮಾರ್ ಕಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್ಸಿಗರ ಭಾರತ ಬಿಟ್ಟು ಓಡೋ ಯಾತ್ರೆ: ನಳೀನ್ ಕುಮಾರ್ ಕಟೀಲ್

Bengaluru City

ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್ಸಿಗರ ಭಾರತ ಬಿಟ್ಟು ಓಡೋ ಯಾತ್ರೆ: ನಳೀನ್ ಕುಮಾರ್ ಕಟೀಲ್

Public TV
Last updated: October 5, 2022 3:42 pm
Public TV
Share
4 Min Read
Nalinkumar Kateel 1
SHARE

ಬೆಂಗಳೂರು: ಕಾಂಗ್ರೆಸ್ಸಿನ ಭಾರತ್ ಜೋಡೋ ಯಾತ್ರೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ (Nalin Kumar Kateel) ಕಟೀಲು ಮತ್ತೆ ಲೇವಡಿ ಮಾಡಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಭಾರತ್ ಜೋಡೋ ಯಾತ್ರೆ (Bharat Jodo Yatre) ಯನ್ನ ಕಾಂಗ್ರೆಸ್ಸಿಗರ ಭಾರತ ಬಿಟ್ಟು ಓಡೋ ಯಾತ್ರೆ ಎಂದು ಲೇವಡಿ ಮಾಡಿದ್ದಾರೆ.

ಗುಲಾಂ ನಬಿ ಆಜಾದ್ (Ghulam Nabi Azad) ಅವರು ಕಾಂಗ್ರೆಸ್ ತೊರೆದು ಹೊಸ ಪಕ್ಷ ಸ್ಥಾಪಿಸಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕತ್ವದ ವಿರುದ್ಧ ಕೋಪದಿಂದಿರುವ ನಾಯಕರು ಜೊತೆಗೂಡಿ ಜಿ-23 ಗುಂಪು ರಚಿಸಿದ್ದರು. ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ಪ್ರಜಾಪ್ರಭುತ್ವ ಇಲ್ಲ. ಅದು ಚೇತರಿಕೆ ಕಾಣಲಾರದು ಎಂಬುದನ್ನು ಮನಗಂಡ ನಾಯಕರನೇಕರು ಒಬ್ಬೊಬ್ಬರಾಗಿ ಈಗಾಗಲೇ ಆ ಪಕ್ಷಕ್ಕೆ ವಿದಾಯ ಹೇಳಿದ್ದಾರೆ ಅಂತ ಟೀಕಿಸಿದರು.

gulam nabi azad

ಸ್ವಜನಪಕ್ಷಪಾತ, ಕುಟುಂಬ ರಾಜಕಾರಣದ ಮೂಲಕ ಗುರುತಿಸಿಕೊಂಡ ಕಾಂಗ್ರೆಸ್ (Congress) ಪಕ್ಷ ಮುಂದಿನ ದಿನಗಳಲ್ಲಿ ಪಕ್ಷದೊಳಗಿನ ಭಿನ್ನಮತ ಹಾಗೂ ಸಮರ್ಥ ನಾಯಕತ್ವದ ಕೊರತೆಯಿಂದ ನೆಲಕಚ್ಚಲಿದೆ. ಕಾಂಗ್ರೆಸ್ ತೊರೆಯುವ ನಾಯಕರನ್ನು ಒಂದೆಡೆ ಸೇರಿಸಿ ಕಾಂಗ್ರೆಸ್ ಜೋಡೋ ಮಾಡಬೇಕಿದ್ದ ರಾಹುಲ್ ಗಾಂಧಿ (Rahul Gandhi) ಯವರು ತಮ್ಮ ಮುತ್ತಾತ ನೆಹರೂ ಅವರು ದೇಶವನ್ನು ಇಬ್ಭಾಗ ಮಾಡಿದ್ದನ್ನು ಮರೆತಿದ್ದಾರೆ. ಇದು ಜಾಣಮರೆವಲ್ಲದೆ ಮತ್ತೇನಲ್ಲ ಅಂತ ಲೇವಡಿ ಮಾಡಿದ್ದಾರೆ.

narendra modi 2

130 ಕೋಟಿ ಜನರ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯನ್ನು ರದ್ದು ಮಾಡಿ ದೇಶ ಜೋಡಿಸುವ ಕಾರ್ಯ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಶಾಶ್ವತವಾಗಿ ಮೂಲೆಗುಂಪು ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಪಕ್ಷ. ಹಿಂದೂ ವಿರೋಧಿ ಜಾತಿ- ಜಾತಿಗಳ ನಡುವೆ, ಮತೀಯ ಸಂಘರ್ಷ ಹೆಚ್ಚಿಸುವ ಪಕ್ಷವಾದರೆ, ಬಿಜೆಪಿ ಸದಾ ಜನಹಿತ ಮತ್ತು ಅಭಿವೃದ್ಧಿಗಾಗಿ ಶ್ರಮಿಸುವ ಪಕ್ಷ ಎಂಬುದು ಜನರಿಗೆ ಅರಿವಾಗಿದೆ. ಕಾಂಗ್ರೆಸ್ ಪಕ್ಷದ ಆರು ದಶಕಗಳ ಭ್ರಷ್ಟಾಚಾರ, ಸಾಲು ಸಾಲು ಹಗರಣಗಳನ್ನು ಗಮನಿಸಿದ ಮಹಾಜನತೆ ಕಾಂಗ್ರೆಸ್ ಪಕ್ಷವನ್ನು ಶಾಶ್ವತವಾಗಿ ಮೂಲೆಗುಂಪು ಮಾಡುವ ನಿರ್ಧಾರ ಮಾಡಿದ್ದಾರೆ ಎಂದು ತಿಳಿಸಿದರು.

Zameer Ahmed Rahul Gandhi

ರಾಹುಲ್ ಗಾಂಧಿಯವರು ಭಾರತ್ ಜೋಡೋ ಮೂಲಕ ಕರ್ನಾಟಕಕ್ಕೆ ಪ್ರವೇಶ ಮಾಡುವ ಸಂದರ್ಭದಲ್ಲೇ ಇಲ್ಲಿನ ಕಾಂಗ್ರೆಸ್ ಮುಖಂಡರು ಎರಡು ತಂಡಗಳಾಗಿ ಸ್ವಾಗತ ಮಾಡಿದ್ದಾರೆ. ಮುಖ್ಯಮಂತ್ರಿ ಕುರ್ಚಿಯ ಹಗಲುಕನಸು ಕಾಣುವ ಸಿದ್ದರಾಮಯ್ಯ (Siddaramaiah) ಒಂದೆಡೆ ಸ್ವಾಗತ ಕೋರಿದರೆ, ಜೈಲಿನತ್ತ ಮುಖ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಮತ್ತು ಹಗರಲಿರುಳೂ ಸಿಎಂ ಕುರ್ಚಿಯ ತಿರುಕನ ಕನಸು ಕಾಣುವ ಡಿ.ಕೆ.ಶಿವಕುಮಾರ್ ಮತ್ತೊಂದೆಡೆ ರಾಹುಲ್ ಗಾಂಧಿಯವರನ್ನು ಸ್ವಾಗತಿಸಿದ್ದಾರೆ. ಇದು ಕಾಂಗ್ರೆಸ್ ಭಿನ್ನಮತಕ್ಕೆ ಸ್ಪಷ್ಟ ನಿದರ್ಶನ. ಇದನ್ನು ಜನತೆ ಗಮನಿಸಿದ್ದಾರೆ ಅಂತ ಟೀಕಿಸಿದರು.

Congress BJP

ಸಂವಿಧಾನದ ಕರ್ತೃ, ಮಹಾನ್ ನಾಯಕ ಬಾಬಾಸಾಹೇಬ ಡಾ. ಅಂಬೇಡ್ಕರ್ ಅವರಿಗೆ ಸದಾ ಅನ್ಯಾಯ- ಅವಹೇಳನ ಮಾಡಿದ ಪಕ್ಷ ಕಾಂಗ್ರೆಸ್. ಅವರನ್ನು ಕೇವಲ ಮತಬ್ಯಾಂಕಾಗಿ ಅದು ಬಳಸಿಕೊಂಡಿತ್ತು. ಬಿಜೆಪಿ ಅಂಬೇಡ್ಕರ್ ಅವರ ಪ್ರಮುಖ ಸ್ಥಳಗಳನ್ನು ಪಂಚಕ್ಷೇತ್ರಗಳನ್ನಾಗಿ ಅಭಿವೃದ್ಧಿಪಡಿಸಿದೆ. ರಾಜ್ಯದಲ್ಲೂ ಅವರು ಭೇಟಿ ಕೊಟ್ಟ ಸ್ಥಳಗಳನ್ನು ಅಭಿವೃದ್ಧಿಪಡಿಸಲು ಬಿಜೆಪಿ(BJP) ಯ ಬಸವರಾಜ ಬೊಮ್ಮಾಯಿಯವರ ನೇತೃತ್ವದ ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರೀತಿಯ ಶ್ವಾನ ನಾಪತ್ತೆ- ಸಿಎಂ ಕಚೇರಿಗೆ ಮಹಿಳೆ ದುಂಬಾಲು, ಹುಡುಕಿ ಕೊಡಲು ಆದೇಶ

basavaraj bommai 6

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಚಿಂತನೆಯೊಂದಿಗೆ ಮುನ್ನಡೆಯುತ್ತಿರುವ ಜಗದ್ವಂದ್ಯ ನಾಯಕ ನರೇಂದ್ರ ಮೋದಿಜಿ ಮತ್ತು ರಾಜ್ಯದ ಕಾಮನ್ ಮ್ಯಾನ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಕೇಂದ್ರ- ರಾಜ್ಯದಲ್ಲಿ ಮತ್ತೊಮ್ಮೆ ಅವಕಾಶ ನೀಡಲು ಪ್ರಜ್ಞಾವಂತ ಮತದಾರರು ಡಬಲ್ ಎಂಜಿನ್ ಅಭಿವೃದ್ಧಿಯ ಸರ್ಕಾರಗಳಿಗೆ ಮತ್ತೆ ಸ್ಪಷ್ಟ ಬಹುಮತ ಕೊಡಲು ಈಗಾಗಲೇ ತೀರ್ಮಾನ ಮಾಡಿದ್ದಾರೆ.

DK SHIVAKUMAR

ಕಾಂಗ್ರೆಸ್ಸಿಗರು ಭಾರತ್ ಜೋಡೋದಂಥ ನಾಟಕದ ಮೂಲಕ ಜನರಿಗೆ ರಂಜನೆಯನ್ನಷ್ಟೇ ನೀಡಬಲ್ಲರು. 2023ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಗೆದ್ದು ರಾಜ್ಯವನ್ನು ಕಾಂಗ್ರೆಸ್ ಪಾರ್ಟಿ ಎಟಿಎಂ ಮಾಡಿಕೊಳ್ಳಲು ಕಾಂಗ್ರೆಸ್‍ನ ನಕಲಿ ಗಾಂಧಿ ಕುಟುಂಬ ಯೋಚಿಸಿದೆ. ಅದು ಈಡೇರುವ ಸಾಧ್ಯತೆ ಇಲ್ಲ ಎಂಬುದು ಅರಿವಾದ ಬಳಿಕ ಡಿಕೆ ಶಿವಕುಮಾರ್- ಸಿದ್ದರಾಮಯ್ಯರವರು ಬಿಜೆಪಿ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಅಂತ ಆರೋಪಿಸಿದರು.

Siddaramaiah 6

ಕಾಂಗ್ರೆಸ್ ಅವಧಿಯ ಶಿಕ್ಷಕರ ನೇಮಕಾತಿ ಹಗರಣ, ಪೊಲೀಸ್ ಇಲಾಖೆಯ ನೇಮಕಾತಿ ಹಗರಣ, ದಿಂಬು- ಹಾಸಿಗೆ ಖರೀದಿ ಹಗರಣ, ಅರ್ಕಾವತಿ ರೀಡೂ ಹಗರಣಗಳ ತನಿಖೆ ಸಾಧ್ಯತೆಯ ವಿಚಾರ ತಿಳಿದ ಬಳಿಕ ಸಿದ್ದರಾಮಯ್ಯರಿಗೆ ನಿದ್ರೆ ಬರುತ್ತಿಲ್ಲ. ಜೈಲುರಾಮಯ್ಯ ಆಗುವ ಆತಂಕ ಅವರನ್ನು ಕಾಡುತ್ತಿದೆ. ತಾನು ಕಳ್ಳ ಪರರನ್ನು ನಂಬಲಾರ ಎಂಬ ಸ್ಥಿತಿ ಈ ಮುಖಂಡರದು ಅಂತ ವಾಗ್ದಾಳಿ ನಡೆಸಿದ್ದಾರೆ.

PFI AND SDPI

ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಮತ್ತು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ಯ ಸಾವಿರಾರು ಮುಖಂಡರು ಮತ್ತು ಕಾರ್ಯಕರ್ತರ ಮೇಲಿದ್ದ ಪ್ರಕರಣಗಳನ್ನು ರದ್ದು ಮಾಡಿದ್ದ ಸಿದ್ದರಾಮಯ್ಯರ ಹಿಂದಿನ ಸರ್ಕಾರವು ಜನರಿಗೆ ಪಿಎಫ್‍ಐ ಭಯೋತ್ಪಾದನಾ ಭಾಗ್ಯ ನೀಡಿತ್ತು. ಪಿಎಫ್‍ಐ ಮತ್ತು ಸಹ ಸಂಘಟನೆಗಳ ನಿಷೇಧ ಸಿದ್ದರಾಮಣ್ಣನಿಗೆ ನುಂಗಲಾರದ ಬಿಸಿ ತುಪ್ಪದಂತಾಗಿದೆ. ಓಲೈಕೆ, ತುಷ್ಟೀಕರಣ ಮತ್ತು ಹಿಂದೂ ವಿರೋಧಿ ರಾಜಕಾರಣ ಮಾಡುತ್ತಲೇ ಬಂದಿರುವ ಸಿದ್ದರಾಮಣ್ಣ ಮತ್ತು ಡಿ.ಕೆ.ಶಿವಕುಮಾರ್ ಕುತಂತ್ರಗಳು ಮುಂದಿನ ಚುನಾವಣೆಯಲ್ಲಿ ಫಲ ಕೊಡುವುದಿಲ್ಲ ಅಂತ ಕಾಂಗ್ರೆಸ್ ವಿರುದ್ಧ ಕಟೀಲು ಕಿಡಿಕಾರಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bengalurucongressNalin Kumar Kateelsiddaramaiahಕಾಂಗ್ರೆಸ್ನಳೀನ್ ಕುಮಾರ್ ಕಟೀಲ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
2 minutes ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
5 minutes ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
24 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
38 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
59 minutes ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?