– ಪಕ್ಷದ ರಾಜ್ಯಾಧ್ಯಕ್ಷರ ಹತ್ತಿರವೇ ಬರಲಿಲ್ಲ ರಾಮದಾಸ್
ಮೈಸೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡ ಪ್ರಸಂಗ ನಗರದಲ್ಲಿ ಇಂದು ನಡೆದಿದೆ.
ನಳಿನ್ ಕುಮಾರ್ ಕಟೀಲ್ ಅವರು ದಸರಾ ಕಾರ್ಯಕ್ರಮಗಳ ನಿಮಿತ್ತ ಇಂದು ನಗರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಬಿಜೆಪಿಯಲ್ಲಿ ಉಂಟಾಗಿರುವ ಅಸಮಾಧಾನದ ಬಗ್ಗೆ ಮಾಧ್ಯಮಗಳು ಪ್ರಶ್ನಿಸುತ್ತಾರೆ ಎಂದು ಅರಿತ ಅವರು ಮಾಧ್ಯಮಗಳ ಸಮೀಪಕ್ಕೆ ಬರಲೇ ಇಲ್ಲ. ನಗರದ ಒಟ್ಟು ಮೂರು ಸ್ಥಳಗಳಲ್ಲಿಯೂ ಮಾಧ್ಯಮಗಳಿಂದ ದೂರ ಉಳಿದು, ಯಾವುದೇ ಪ್ರತಿಕ್ರಿಯೆ ನೀಡಿದೆ ಹೊರಟು ಹೋದರು.
Advertisement
ಬಿಜೆಪಿ ನೂತನ ರಾಜ್ಯಾಧ್ಯಕ್ಷರಾದ ಶ್ರೀ ನಳೀನ್ ಕುಮಾರ್ ಕಟೀಲ್ @nalinkateel ರವರನ್ನು ಇಂದು ಮೈಸೂರಿನಲ್ಲಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
Warmly welcomed Shri Nalin Kumar Kateel, The New State President of the BJP today in Mysuru pic.twitter.com/j6qZrhtZGf
— Pratap Simha (@mepratap) August 28, 2019
Advertisement
ಬಿಜೆಪಿ ನೂತನ ರಾಜ್ಯಾಧ್ಯಕ್ಷರ ಈ ನಡೆ ಭಾರೀ ಚರ್ಚೆಗೆ ಕಾರಣವಾಗಿದೆ. ಸಚಿವ ಸ್ಥಾನ ಹಾಗೂ ಖಾತೆ ಹಂಚಿಕೆ ವಿಚಾರದಲ್ಲಿ ಉಂಟಾಗಿರುವ ಅಸಮಾಧಾನದ ಹೊಗೆ ಇನ್ನೂ ತಣ್ಣಗಾಗಿಲ್ಲ. ಹೀಗಾಗಿ ನಳಿನ್ ಕುಮಾರ್ ಅವರು ಮಾಧ್ಯಮಗಳಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
Advertisement
ಇತ್ತ ಸಚಿವ ಸ್ಥಾನ ಸಿಗದೆ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ದಸರಾ ಕಾರ್ಯಕ್ರಮಗಳಿಂದ ದೂರವೇ ಉಳಿದಿದ್ದಾರೆ. ಅಷ್ಟೇ ಅಲ್ಲದೆ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮೈಸೂರಿಗೆ ಭೇಟಿ ನೀಡಿದ್ದಾರೆ ಎನ್ನುವ ವಿಷಯ ಗೊತ್ತಿದ್ದರೂ ಅವರನ್ನು ಭೇಟಿಯಾಗದೆ ಶಾಸಕರು ದೂರ ಉಳಿದರು.
Advertisement
ಮೈಸೂರಿನ ಸರಸ್ವತಿಪುರಂನಲ್ಲಿ ಚಾತುರ್ಮಾಸ್ಯ ವೃತದಲ್ಲಿರುವ ಪೇಜಾವರ ಮಠದ ಶ್ರೀ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡೆ. pic.twitter.com/jc3dIQTE2M
— Nalinkumar Kateel (@nalinkateel) August 28, 2019