ಮೈಸೂರು: ವರುಣಾ ಕ್ಷೇತ್ರದ ಟಿಕೆಟ್ ಕೈತಪ್ಪಿದ ಬಳಿಕ ಮೊದಲ ಬಾರಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಇಂದು ಅಖಾಡಕ್ಕೆ ಇಳಿದಿದ್ದಾರೆ.
ಚಾಮರಾಜನಗರ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ವಿಜಯೇಂದ್ರ ಪ್ರಚಾರ ಕೈಗೊಂಡಿದ್ದಾರೆ. ಕೊಳ್ಳೆಗಾಲ, ಹನೂರು, ಚಾಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ವಿಜಯೇಂದ್ರ ಪ್ರಚಾರ ನಡೆಸುತ್ತಿದ್ದಾರೆ.
Advertisement
ವರುಣ ಟಿಕೆಟ್ ತಪ್ಪಿದ ಮೇಲೆ ಕಾರ್ಯಕರ್ತರ ಜೊತೆ ಕಾಣಿಸಿಕೊಳ್ಳದ ವಿಜೆಯೇಂದ್ರ, ಬೆಂಗಳೂರು ಕಡೆ ತೆರಳಿದ್ದರು. ಮೈಸೂರಿನಲ್ಲಿದ್ದರೆ ಕಾರ್ಯಕರ್ತರು, ಮುಖಂಡರು ಒತ್ತಡ ಹೇರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದರು ಎನ್ನಲಾಗಿತ್ತು. ಟಿಕೆಟ್ ಕೈ ತಪ್ಪಿದ್ರೂ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವುದಾಗಿ ಈ ಹಿಂದೆ ಸುದ್ದಿಗೋಷ್ಠಿ ನಡೆಸಿ ಹೇಳಿದ್ದರು. ಇದನ್ನೂ ಓದಿ: ವಿಶೇಷ ಕಾರಣದಿಂದ ವಿಜಯೇಂದ್ರಗೆ ಟಿಕೆಟ್ ತಪ್ಪಿದೆ: ಬಿಎಸ್‍ವೈ
Advertisement
ತೋಟದ ಬಸವರಾಜು ಅವರು ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಂತ ನಾಮಪತ್ರ ಸಲ್ಲಿಕೆ ಮಾಡಿದ್ದರು. ಬಿ.ಫಾರಂ ಸಲ್ಲಿಸದೆ ಕೇವಲ ಬಿಜೆಪಿ ಅಭ್ಯರ್ಥಿ ಅಂತ ನಾಮಪತ್ರ ಸಲ್ಲಿಕೆ ಮಾಡಿದ್ದರು. ಏ.22 ರಂದು ವಿಜಯೇಂದ್ರ ಪರವಾಗಿಯೇ ಮತಯಾಚನೆ ಮಾಡಿದ್ದರು. ಆದ್ರೆ ಏ.23ರಂದು ವಿಜಯೇಂದ್ರಗೆ ಟಿಕೆಟ್ ಮಿಸ್ ಆಯಿತು. ಏ.24ರಂದು ತೋಟದ ಬಸವರಾಜರೇ ಅಧಿಕೃತ ಬಿಜೆಪಿ ಅಭ್ಯರ್ಥಿಯಾಗಿ ಬಿ.ಫಾರಂ ಸಲ್ಲಿಕೆ ಮಾಡಲಾಗಿತ್ತು. ಇದನ್ನೂ ಓದಿ: ವಿಜಯೇಂದ್ರ ಕ್ಷೇತ್ರಕ್ಕೆ ಬಂದು 20 ದಿನ ಆಯ್ತು, ನಾನು 37 ವರ್ಷಗಳಿಂದ ಬಿಜೆಪಿಗೆ ದುಡಿದಿದ್ದೇನೆ: ವರುಣಾ ಬಿಜೆಪಿ ಅಭ್ಯರ್ಥಿ ಬಸವರಾಜು
Advertisement
ನಾಳೆ ನೋಟಾ ಅಭಿಯಾನ: ಇತ್ತ ವರುಣಾದಲ್ಲಿ ವಿಜಯೇಂದ್ರಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಭಿಮಾನಿಗಳ ಆಕ್ರೋಶ ಇನ್ನೂ ಶಮನವಾಗಿಲ್ಲ. ವರುಣಾದಲ್ಲಿ ಇನ್ನೂ ನೋಟಾ ಅಭಿಯಾನ ಮುಂದುವರೆದಿದ್ದು, ಭಾನುವಾರ ನೋಟಾ ಬೆಂಬಲಿಸಿ ಬೈಕ್ ಜಾಥಾ ನಡೆಯಲಿದೆ. ಟಿ.ನರಸೀಪುರದಿಂದ ವರುಣಾದವರೆಗೆ ಬೈಕ್ ಜಾಥಾ ನಡೆಯಲಿದ್ದು, ಈ ಮೂಲಕ ನೋಟಾಗೆ ಮತ ಹಾಕುವಂತೆ ಪ್ರಚಾರ ಕೈಗೊಳ್ಳಲಾಗುತ್ತದೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.