ಜೈಪುರ: ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನವೇ ರಾಜಸ್ಥಾನದಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಲು ಮುಂದಡಿ ಇಟ್ಟಿದೆ. ಇಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶಗಳು ಹೊರಬಿದ್ದಿದ್ದು, ಬಿಜೆಪಿ ಪ್ರಾಬಲ್ಯವನ್ನು ಎತ್ತಿ ತೋರಿಸಿವೆ.
ಸಣ್ಣ ಪಟ್ಟಣಗಳು ಮತ್ತು ಬುಡಕಟ್ಟು ಪ್ರದೇಶಗಳಲ್ಲೂ ಬಿಜೆಪಿ ಗಮನಾರ್ಹ ಪ್ರಗತಿ ಸಾಧಿಸಿದೆ. ಆದ್ರೆ ರೈತ ಸಮುದಾಯದ ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ತಮ್ಮ ಬಲ ಪ್ರದರ್ಶನ ಮಾಡಿದ್ದಾರೆ.
घणी-घणी बधाइयां राजस्थान!
राजस्थान निकाय चुनाव में भाजपा की प्रचंड जीत मोदी जी के नेतृत्व में प्रदेश सरकार के सुशासन और विकास कार्यों पर जनता की मुहर है।
इस प्रचंड विजय के लिए मुख्यमंत्री श्री @BhajanlalBjp जी, प्रदेश अध्यक्ष श्री @madanrrathore जी तथा @BJP4Rajasthan के सभी…
— Amit Shah (@AmitShah) September 14, 2026
ರಾಜಸ್ಥಾನದ 10 ಮಹಾನಗರ ಪಾಲಿಕೆಗಳ ಪೈಕಿ 5 ಪಾಲಿಕೆಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಕಾಂಗ್ರೆಸ್ ಒಂದರಲ್ಲಿ ಗೆಲುವು ಸಾಧಿಸಿದ್ರೆ. ಇನ್ನುಳಿದ 4 ಮಹಾನಗರ ಪಾಲಿಕೆಗಳಲ್ಲಿ ಫಲಿತಾಂಶ ಅತಂತ್ರವಾಗಿದೆ.
ಈ ಚುನಾವಣೆಯಲ್ಲಿ ಬಿಜೆಪಿಯ ಯಶಸ್ಸಿಗೆ ಹಲವು ಪ್ರಮುಖ ಅಂಶಗಳು ಕಾರಣವಾಗಿವೆ. ಯುವಕರಿಗೆ ಉದ್ಯೋಗ ಕಲ್ಪಿಸುವ ಮತ್ತು ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ಭಜನ್‌ಲಾಲ್ ಸರ್ಕಾರ ನಡೆಸಿದ ಪ್ರಯತ್ನಗಳು ಪಕ್ಷದ ಯಶಸ್ಸಿಗೆ ಕಾರಣವೆಂದು ಪರಿಗಣಿಸಲಾಗಿದೆ. ಆದಾಗ್ಯೂ, ಪ್ರಮುಖ ನಗರಗಳಲ್ಲಿ ಯುಜಿಸಿ (UGC) ವಿಷಯಗಳಿಗೆ ಸಂಬಂಧಿಸಿದ ವಿರೋಧಗಳು ಪಕ್ಷದ ಸಾಧನೆಯ ಮೇಲೆ ಪರಿಣಾಮ ಬೀರಿದೆ.

ಮತ್ತೊಂದು ಕಡೆ ಕಾಂಗ್ರೆಸ್ ಸಾಧನೆ ಕೂಡ ಹಿನ್ನಡೆಯಾಯ್ತು. ಪಕ್ಷದಲ್ಲಿನ ಆಂತರಿಕ ಕಲಹ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿನ ವಿಷಯ ಹಾಗೂ ಯುವಜನತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಕಾಂಗ್ರೆಸ್ ಪಕ್ಷದ ಮೌನವು ಈಗ ಸ್ಥಳೀಯ ಸಂಸ್ಥೆಗಳ ಚುನಾವಣೆ ಮೇಲೆ ಪರಿಣಾಮ ಬೀರಿದೆ ಎನ್ನಲಾಗ್ತಿದೆ.
ಸಿಎಂ ಯೋಗಿ ಅಭಿನಂದನೆ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಾಮಾಜಿಕ ಜಾಲತಾಣ ‘X’ ಮೂಲಕ, ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಸಾಧಿಸಿದ ಭರ್ಜರಿ ಗೆಲುವಿಗಾಗಿ ಪಕ್ಷದ ಎಲ್ಲಾ ನಿಷ್ಠಾವಂತ ಕಾರ್ಯಕರ್ತರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದರು. ಜೊತೆಗೆ ರಾಜ್ಯದ ಜನತೆಗೆ ತಮ್ಮ ಕೃತಜ್ಞತೆ ವ್ಯಕ್ತಪಡಿಸಿದರು.
ಪುರಸಭೆಗಳು: 252
ಬಿಜೆಪಿ: 144
ಕಾಂಗ್ರೆಸ್: 92
ಪಕ್ಷೇತರರು: 16
ನಗರ ಪಾಲಿಕೆಗಳು: 47
ಬಿಜೆಪಿ: 21
ಕಾಂಗ್ರೆಸ್: 17
ಪಕ್ಷೇತರರು: 9

